‘ಅಶಿಸ್ತಿನ’ ನಡವಳಿಕೆ : ಕಾಂಗ್ರೆಸ್ಸಿನ ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು

ನವದೆಹಲಿ : ಸಂಸತ್ ಕಲಾಪದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರಹ್ಲಾದ ಜೋಶಿ ಅವರು ಮಂಡಿಸಿದ ನಿರ್ಣಯವನ್ನು ಗುರುವಾರ ಸಂಸತ್ತು ಅಂಗೀಕರಿಸಿದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ವಿಶೇಷಾಧಿಕಾರ ಸಮಿತಿಯು ಈ ವಿಷಯದ ಕುರಿತು ತನ್ನ … Continued

ಈಗ ಬಿಜೆಪಿಯಿಂದ ‘ಪೇ ಸಿಎಸ್’ ಅಭಿಯಾನ : ಕಾಂಗ್ರೆಸ್ಸಿಗೆ ತಿರುಗೇಟು

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿಚಾರವನ್ನು ಮುಂದಿಟ್ಟುಕೊಂಡು ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದೀಗ ಇದೇ ಪೇಸಿಎಂ ಅಭಿಯಾನ ಕಾಂಗ್ರೆಸ್ ಸರ್ಕಾರಕ್ಕೆ ತಿರುಗು ಬಾಣವಾಗಿದೆ. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕಮಿಷನ್ ಆರೋಪ ಮಾಡಿರುವ ಬಿಜೆಪಿ ಪೇ ಸಿಸ್ (ಪೇ ಚೆಲುವರಾಯಸ್ವಾಮಿ) ಅಭಿಯಾನ ಆರಂಭಿಸಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಎಂಬ … Continued

ಇನ್ನೊಮ್ಮೆ ಕಳಪೆ ಊಟ ಕೊಟ್ಟರೆ ವಾರ್ಡನ್ನಿಗೆ ತಿನ್ನಿಸಿ, ಚೆನ್ನಾಗಿ ಬಾರಿಸಿ: ಶಾಸಕರ ಹೇಳಿಕೆಯ ವೀಡಿಯೊ ವೈರಲ್

ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಭೇಟಿ ನೀಡಿದ್ದ ಶಾಸಕರೊಬ್ಬರು ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಚೆನ್ನಾಗಿ ಬಾರಿಸಿ’ ಎಂದು ಹೇಳಿದ್ದಾರೆ ಎನ್ನಲಾದ ವೀಡಿಯೊ ವೈರಲ್ ಆಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಪ್ರಚೋದನೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, … Continued

ಬೆಂಗಳೂರಲ್ಲಿ ನಡೆದ 26 ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ : ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು : ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‍ನ ಜಂಟಿ ನಿಯೋಗದ ಮನವಿಯ ನಂತರ … Continued

ಬಿಜೆಪಿ ಬಿಡುವ ವದಂತಿ: ತೇಜಸ್ವಿನಿ ಅನಂತಕುಮಾರ ಹೇಳಿದ್ದೇನು ?

ಬೆಂಗಳೂರು : ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಮ್ಮ ಬಗ್ಗೆ ಎದ್ದಿರುವ ಊಹಾಪೋಹಾಗಳಿಗೆ ಈಗ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಸ್ವತಃ ತೆರೆ ಎಳೆದಿದ್ದಾರೆ. ಈ ಬಗ್ಗೆ ಖುದ್ದು ಟ್ವೀಟ್‌ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ … Continued

ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನಿಸುವ ಅಗತ್ಯವಿಲ್ಲ: ಕೆ.ಸಿ.ವೇಣುಗೋಪಾಲ

ಬೆಂಗಳೂರು: ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಜೊತೆ ಕೈ ಜೋಡಿಸಬಹುದು. ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಹೇಳಿದ್ದಾರೆ. ಇಂದಿನಿಂದ ಎರಡು ದಿನ ಬೆಂಗಳೂರಲ್ಲಿ ವಿಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಖಾಸಗಿ ಹೊಟೇಲ್‌ನಲ್ಲಿ ಮಾತನಾಡಿರುವ ಅವರು, ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ … Continued

ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ : ಸಂಸದ ಡಿ.ಕೆ.ಸುರೇಶ

ರಾಮನಗರ : ಮುಂಬರುವ ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾರೂ ಸೂಕ್ತ ಎಂದು ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ನೀಡುತ್ತೇನೆ. ರಾಜಕೀಯ ಸಾಕಾಗಿದೆ ಎಂದು ಸಂಸದ ಡಿ.ಕೆ. ಸುರೇಶ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ … Continued

ಉಚಿತ ಪ್ರಯಾಣದ ಬಸ್‌ ಗಳಿಗೆ ಸ್ಟಿಕ್ಕರ್ ಅಂಟಿಸುವ ನಿರ್ಧಾರ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಉಚಿತ ಪ್ರಯಾಣದ ಬಸ್ ಗಳಿಗೆ ಸ್ಟಿಕ್ಕರ್ ಅಂಟಿಸುವುದಾಗಿ ಹೇಳಿರುವ ರಾಜ್ಯ ಸರ್ಕಾರದ ಮತ್ತೊಂದು ಷರತ್ತಿನ ಬಗ್ಗೆ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಉಚಿತ ಪ್ರಯಾಣದ ಬಸ್‌ಗಳಿಗೆ ಸ್ಟಿಕ್ಕರ್ ಅಂಟಿಸುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಸಿದ‍್ಧರಾಮಯ್ಯನವರೇ, ಬಸ್ ಹತ್ತುವ ಮಹಿಳೆಯರು ಬಸ್ ನಂಬರ್ … Continued

ಸಿಎಂ ಹುದ್ದೆಗೆ ಸಿದ್ದರಾಮಯ್ಯ- ಶಿವಕುಮಾರ ಪೈಪೋಟಿ ನಡುವೆ ತಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಬೇಡಿಕೆ ಇಟ್ಟ ವೀರಶೈವ ಮಹಾಸಭಾ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ‘ಡಿಕೆ ಶಿವಕುಮಾರ ಅಥವಾ ಸಿದ್ದರಾಮಯ್ಯ’ ಎಂಬ ಗೊಂದಲದಲ್ಲಿ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ಸಿನಲ್ಲಿ ಈಗ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೊಂದು ಲಾಬಿ ಶುರುವಾಗಿದೆ. ಪ್ರಭಾವಿ ಲಿಂಗಾಯತ ಸಮುದಾಯವನ್ನು ಪ್ರತಿನಿಧಿಸುವ ಅಖಿಲ ಭಾರತ ವೀರಶೈವ ಮಹಾಸಭಾ ಉನ್ನತ ಹುದ್ದೆಗೆ ಬಿಡ್ ಮಾಡಿದೆ, ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರಲ್ಲಿ 34 ಲಿಂಗಾಯತ ಶಾಸಕರಿದ್ದಾರೆ ಎಂದು ಉಲ್ಲೇಖಿಸಲಾಗಿದೆ. … Continued

ಬಜರಂಗದಳ ನಿಷೇಧದ ಉಲ್ಲೇಖ: ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿದ ಈಶ್ವರಪ್ಪ

ಕಲಬುರಗಿ: ಬಜರಂಗದಳ ನಿಷೇಧವು ಸೇರಿದಂತೆ ಹಲವುಭರವಸೆಗಳಿರುವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಗುರುವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ ಪ್ರಣಾಳಿಕೆಯೇ ಆಕ್ರೋಶಗೊಂಡ ಈಶ್ವರಪ್ಪ, ಇದರಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇಶಕ್ಕೆ … Continued