ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಶಿಲ್ಪಾ ನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ. … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

“ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ”: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟ ಇಂದಿರಾ ಗಾಂಧಿ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: 1970 ರ ದಶಕದಲ್ಲಿ ಆಯಕಟ್ಟಿನ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷವು ದೇಶದ ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು “ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು … Continued

ಕೋಲಾರ: ಇಬ್ಬರ ಜಗಳದಲ್ಲಿ ಮತ್ತೊಬ್ಬರಿಗೆ ಮಣೆ ಹಾಕಿದ ಕಾಂಗ್ರೆಸ್‌ ; ಮಾಜಿ ಮೇಯರ್​ ಪುತ್ರ ಗೌತಮಗೆ ಟಿಕೆಟ್‌

ಕೋಲಾರ : ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಕೊನೆಗೂ ಘೋಷಣೆ ಮಾಡಿದೆ. ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯಕುಮಾರ​ ಅವರ ಪುತ್ರ ಕೆ.ವಿ. ಗೌತಮ​ (K Goudtam) ಅವರಿಗೆ ನೀಡಿದೆ. ಈ ಮೂಲಕ ಕಾಂಗ್ರೆಸ್​ ಹೈಕಮಾಂಡ್​ ಮಾಜಿ ಸಭಾಧ್ಯಕ್ಷ ರಮೇಶಕುಮಾರ ಹಾಗೂ ಸಚಿವ ಕೆ.ಎಚ್​ ಮುನಿಯಪ್ಪ ಈ ನಾಯಕರ … Continued

ಕರ್ನಾಟಕದಲ್ಲಿ ಬಿಜೆಪಿಗೆ ಆಘಾತ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ತೇಜಸ್ವಿನಿ ಗೌಡ

ಬೆಂಗಳೂರು: ರಾಜ್ಯ ಬಿಜೆಪಿಗೆ ಹಿನ್ನಡೆಯಲ್ಲಿ ಮೊನ್ನೆಯಷ್ಟೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಗೂ ಪಕ್ಷದ ವಕ್ತಾರೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು. ತೇಜಸ್ವಿನಿ ಗೌಡ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ ಪಾಟೀಲ ಸೊಸೆ ಡಾ.ಅರ್ಚನಾ ಪಾಟೀಲ ಬಿಜೆಪಿಗೆ ಸೇರ್ಪಡೆ

ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕಾಂಗ್ರೆಸ್ ವರಿಷ್ಠ ಶಿವರಾಜ ಪಾಟೀಲ ಅವರ ಸೊಸೆ, ಡಾ. ಅರ್ಚನಾ ಪಾಟೀಲ ಚಾಕುರ್ಕರ್ ಅವರು ಶನಿವಾರ (ಮಾರ್ಚ್ 30) ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದೇಶದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು … Continued

ಲೋಕಸಭೆ ಚುನಾವಣೆ : ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ; ಒಂದು ಕ್ಷೇತ್ರ ಇನ್ನೂ ಕಗ್ಗಂಟು

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಕರ್ನಾಟಕದ ಕೋಲಾರ ಹೊರತು ಪಡಿಸಿ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ. ಬಳ್ಳಾರಿ ಲೋಕಸಭಾ ಟಿಕೆಟ್ ಅನ್ನು ಶಾಸಕ ಇ ತುಕರಾಂ, … Continued

ಲೋಕಸಭೆ ಚುನಾವಣೆ: ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ; ಆರ್‌ಜೆಡಿ 26, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಸ್ಪರ್ಧೆ

ನವದೆಹಲಿ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ಲೋಕಸಭೆ ಚುನಾವಣೆಗೆ ಶುಕ್ರವಾರ ತನ್ನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದೆ. ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ 26 ರಲ್ಲಿ ಆರ್‌ಜೆಡಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಒಂಬತ್ತು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಎಡಪಕ್ಷಗಳಿಗೆ ಐದು ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಕತಿಹಾರ್, ಕಿಶನ್‌ಗಂಜ್, ಪಾಟ್ನಾ ಸಾಹಿಬ್, ಸಸಾರಾಮ್, ಭಾಗಲ್ಪುರ, ಪಶ್ಚಿಮ ಚಂಪಾರಣ್, ಮುಜಾಫರಪುರ, … Continued

ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

ನವದೆಹಲಿ: ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ₹ 1,700 ಕೋಟಿ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ಮತ್ತು ದಂಡ ಮತ್ತು ಬಡ್ಡಿಯನ್ನು ಒಳಗೊಂಡಿದೆ ಎಂದು ಮೂಲಗಳು … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued