ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ‘ಜನತಾ ದರ್ಶನ’ : ಸೆ.25ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಇನ್ಮುಂದೆ ಜಿಲ್ಲೆಗಳಲ್ಲಿ ‘ಜನತಾ ದರ್ಶನ’ ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ ಗೋಯಲ್ ಈ ಕುರಿತು ಟಿಪ್ಪಣಿ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು/ ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಕಾಧಿಕಾರಿಗಳು/ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಗಳಿಗೆ … Continued

ಇಂಡಿಯಾ ಮೈತ್ರಿಕೂಟ ಎಲ್ಲ ಧರ್ಮಗಳನ್ನೂ ಗೌರವಿಸುತ್ತದೆ: ಡಿಎಂಕೆ ಸಂಸದ ಸನಾತನ ಧರ್ಮವನ್ನು ಎಚ್‌ಐವಿಗೆ ಹೋಲಿಸಿದ ನಂತರ ಕಾಂಗ್ರೆಸ್ ಹೇಳಿಕೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಎಲ್ಲಾ ಧರ್ಮಗಳನ್ನೂ ಗೌರವಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಗುರುವಾರ ಹೇಳಿದ್ದಾರೆ. ಡಿಎಂಕೆಯ ಸಂಸದ ಎ.ರಾಜಾ ಅವರು, ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ ನಂತರ ನಂತರಪವನ ಖೇರಾ ಹೇಳಿಕೆಗಳು ಬಂದಿವೆ. ಕಾಂಗ್ರೆಸ್ ಮತ್ತು ಡಿಎಂಕೆ ಎರಡೂ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷದ ಮೈತ್ರಿಕೂಟ-ಇಂಡಿಯಾದ ಭಾಗವಾಗಿದೆ. ಡಿಎಂಕೆ ನಾಯಕ … Continued

ಕುತೂಹಲ ಮೂಡಿಸಿದ ಡಿಸಿಎಂ ಶಿವಕುಮಾರ-ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ … Continued

ವಿರೋಧದ ನಡುವೆ ವಿಧಾನ ಪರಿಷತ್‌ ನಾಮನಿರ್ದೇಶನಕ್ಕೆ ನಟಿ ಉಮಾಶ್ರೀ ಸೇರಿ ಮೂವರ ಹೆಸರು ಅಂತಿಮ

ಬೆಂಗಳೂರು : ವಿಧಾನಪರಿಷತ್​ಗೆ ಮೂವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು, ಇದಕ್ಕೆ ಹೈಕಮಾಂಡ್‌ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ರಾಜ್ಯಪಾಲರಿಗೆ ನಾಮನಿರ್ದೇಶನ ಹೆಸರುಗಳ ಪಟ್ಟಿಯನ್ನು ಶೀಘ್ರವೇ ರಾಜ್ಯಪಾಲರಿಗೆ ಪಟ್ಟಿ ರವಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ನಟಿ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇನ್ನು ಕಾಂಗ್ರೆಸ್​ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂ.ಆರ್. ಸೀತಾರಾಮ ಹಾಗೂ ನಿವೃತ್ತ ಇಡಿ … Continued

ಅವರು ಮನೆಯಲ್ಲಿ ಧ್ವಜಾರೋಹಣ ಮಾಡ್ತಾರೆ’ : ಮುಂದಿನ ವರ್ಷ ಕೆಂಪುಕೋಟೆಯಲ್ಲಿ ಭೇಟಿಯಾಗೋಣ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಖರ್ಗೆ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯೋತ್ಸವ ಭಾಷಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ‘ಕೆಂಪುಕೋಟೆಯಲ್ಲಿ ಮುಂದಿನ ವರ್ಷ ಭೇಟಿಯಾಗೋಣ’ ಎಂಬ ಕಾಮೆಂಟ್‌ಗೆ ಪ್ರತಿಕ್ರಿಯಿಸಿದ ಖರ್ಗೆ, ಪ್ರಧಾನಿಯವರ ಹೇಳಿಕೆಗಳು ಅವರ “ಅಹಂಕಾರ”ವನ್ನು ತೋರಿಸುತ್ತದೆ ಮತ್ತು ಮುಂದಿನ ವರ್ಷ “ತಮ್ಮ ಮನೆಯಲ್ಲಿ” ಧ್ವಜಾರೋಹಣ ಮಾಡಲಿದ್ದಾರೆ ಎಂದು ಹೇಳಿದರು. ಅವರು [ಮೋದಿ] ಮುಂದಿನ … Continued

‘ಅಶಿಸ್ತಿನ’ ನಡವಳಿಕೆ : ಕಾಂಗ್ರೆಸ್ಸಿನ ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು

ನವದೆಹಲಿ : ಸಂಸತ್ ಕಲಾಪದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರಹ್ಲಾದ ಜೋಶಿ ಅವರು ಮಂಡಿಸಿದ ನಿರ್ಣಯವನ್ನು ಗುರುವಾರ ಸಂಸತ್ತು ಅಂಗೀಕರಿಸಿದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ವಿಶೇಷಾಧಿಕಾರ ಸಮಿತಿಯು ಈ ವಿಷಯದ ಕುರಿತು ತನ್ನ … Continued

ಈಗ ಬಿಜೆಪಿಯಿಂದ ‘ಪೇ ಸಿಎಸ್’ ಅಭಿಯಾನ : ಕಾಂಗ್ರೆಸ್ಸಿಗೆ ತಿರುಗೇಟು

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿಚಾರವನ್ನು ಮುಂದಿಟ್ಟುಕೊಂಡು ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದೀಗ ಇದೇ ಪೇಸಿಎಂ ಅಭಿಯಾನ ಕಾಂಗ್ರೆಸ್ ಸರ್ಕಾರಕ್ಕೆ ತಿರುಗು ಬಾಣವಾಗಿದೆ. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕಮಿಷನ್ ಆರೋಪ ಮಾಡಿರುವ ಬಿಜೆಪಿ ಪೇ ಸಿಸ್ (ಪೇ ಚೆಲುವರಾಯಸ್ವಾಮಿ) ಅಭಿಯಾನ ಆರಂಭಿಸಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಎಂಬ … Continued

ಇನ್ನೊಮ್ಮೆ ಕಳಪೆ ಊಟ ಕೊಟ್ಟರೆ ವಾರ್ಡನ್ನಿಗೆ ತಿನ್ನಿಸಿ, ಚೆನ್ನಾಗಿ ಬಾರಿಸಿ: ಶಾಸಕರ ಹೇಳಿಕೆಯ ವೀಡಿಯೊ ವೈರಲ್

ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಭೇಟಿ ನೀಡಿದ್ದ ಶಾಸಕರೊಬ್ಬರು ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಚೆನ್ನಾಗಿ ಬಾರಿಸಿ’ ಎಂದು ಹೇಳಿದ್ದಾರೆ ಎನ್ನಲಾದ ವೀಡಿಯೊ ವೈರಲ್ ಆಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಪ್ರಚೋದನೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, … Continued

ಬೆಂಗಳೂರಲ್ಲಿ ನಡೆದ 26 ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ : ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು : ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‍ನ ಜಂಟಿ ನಿಯೋಗದ ಮನವಿಯ ನಂತರ … Continued

ಬಿಜೆಪಿ ಬಿಡುವ ವದಂತಿ: ತೇಜಸ್ವಿನಿ ಅನಂತಕುಮಾರ ಹೇಳಿದ್ದೇನು ?

ಬೆಂಗಳೂರು : ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಮ್ಮ ಬಗ್ಗೆ ಎದ್ದಿರುವ ಊಹಾಪೋಹಾಗಳಿಗೆ ಈಗ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಸ್ವತಃ ತೆರೆ ಎಳೆದಿದ್ದಾರೆ. ಈ ಬಗ್ಗೆ ಖುದ್ದು ಟ್ವೀಟ್‌ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ … Continued