ಈ ತಿಂಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ‌ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಹೊಸಪೇಟೆ : ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಶಾಸಕ ಭೀಮ ನಾಯ್ಕ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಗರಿಬೊಮ್ಮನಹಳ್ಳಿ ಹೊರವಲಯದ ಹೆಲಿಪ್ಯಾಡ್ ಗೆ ಬಂದಿಳಿದ ಅವರು ಮಾಧ್ಯಮದವರೊಂದಿಗೆ … Continued

ಕಳಸಾ ಬಂಡೂರಿ ಯೋಜನೆಗೆ ಅಡ್ಡಗಾಲಾಗಿದ್ದು ಬಿಜೆಪಿ ಸರ್ಕಾರವಲ್ಲವೇ: ಸಿಎಂ ಬೊಮ್ಮಾಯಿಗೆ ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಕಳೆದ ನಾಲ್ಕು ದಶಕಗಳಿಂದ ಉತ್ತರ ಕರ್ನಾಟಕದ ರೈತರು, ಜನಸಾಮಾನ್ಯರು ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿಭಟಿಸುತ್ತಿದ್ದರೆ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಯಾರನ್ನೋ ಖುಷಿಪಡಿಸಲು, ನೈಜ ಪರಿಸ್ಥಿತಿ ಮರೆಮಾಚಿ ಮುಖ್ಯಮಂತ್ರಿಗಳು ಮಹದಾಯಿ ವಿಷಯ ತಿರುಚಿ ಅದರಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ವಸಂತ ಲದವಾ ಟೀಕಿಸಿದ್ದಾರೆ. ಮಹದಾಯಿ ಕುರಿತು ಮಾತನಾಡಲು ಕಾಂಗ್ರೆಸ್‌ಗೆ ನೈತಿಕ … Continued

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದೇನೆ: ವೈಎಸ್‌ವಿ ದತ್ತ

ಬೆಂಗಳೂರು:: ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದೇನೆ, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್‌ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು. ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾತನಾಡಿದಅವರು, ನಾನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷಗಳಷ್ಟು ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20ಕ್ಕೂ ಹೆಚ್ಚು ವರ್ಷಗಳಿಂದ ಇದ್ದೇನೆ. ನಾನು ದೇವೇಗೌಡರು … Continued

ಹಿರಿಯ ನಾಯಕರ ಕಡೆಗಣನೆಯಿಂದ ಕಳಪೆ ಫಲಿತಾಂಶ : ಗುಜರಾತ್‌ ಸೋಲಿಗೆ ಕಾರಣ ಹೇಳಿದ ವೀರಪ್ಪ ಮೊಯ್ಲಿ

ಬೆಂಗಳೂರು: ಗುಜರಾತ್‍ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಿದ ಪರಿಣಾಮ ಕಾಂಗ್ರೆಸ್‌ಗೆ ಹೀನಾಯ ಸೋಲುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪಕ್ಷಕ್ಕೆ ಯಶಸ್ಸು ತಂದುಕೊಟ್ಟವರನ್ನು ಗೌರವಿಸಲೇಬೇಕು. ಹಿಮಾಚಲಪ್ರದೇಶದಲ್ಲಿ ವೀರಭದ್ರ ಸಿಂಗ್ ಪಕ್ಷವನ್ನು ಗೆಲ್ಲಿಸಿದರು. ಅವರ ಬಳಿಕ ಅವರ ಪತ್ನಿ ಪ್ರತಿಭಾ ಸಿಂಗ್‍ರನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡಲಾಯಿತು ಎಂದು … Continued

ಗುಜರಾತಿನಲ್ಲಿ ಕಾಂಗ್ರೆಸ್ ಧೂಳೀಪಟ: ವಿಪಕ್ಷ ನಾಯಕನ ಸ್ಥಾನ ಸಿಗುವುದೂ ಡೌಟು..!

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು, 182 ಕ್ಷೇತ್ರಗಳಲ್ಲಿ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಹೀಗಾಗಿ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳುವ ಭೀತಿ ಎದರಿಸುತ್ತಿದೆ ಎಂದು ವರದಿಗಳು ತಿಳಿಸಿವೆ. 182 ಸದಸ್ಯ ಸಂಖ್ಯೆಯ ಗುಜರಾತ್ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌ಗೆ ಒಟ್ಟು ವಿಧಾನಸಭೆ ಬಲದ ಕನಿಷ್ಠ ಶೇ.10ರಷ್ಟು ಶಾಸಕರು … Continued

ಕೆಜಿಎಫ್‌ 2 ಹಾಡು ಬಳಕೆ : ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲು ; ರಾಹುಲ್‌ ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಕೃತಿ ಸ್ವಾಮ್ಯ ಉಲ್ಲಂಘಿಸಿ ಕಾಂಗ್ರೆಸ್‌ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಳಸಿರುವ ಕೆಜಿಎಫ್‌-2 ಸಿನಿಮಾದ ಮುದ್ರಿತ ಸಂಗೀತವನ್ನು ತೆಗೆದುಹಾಕಲು ನಿರ್ದೇಶಿಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು ಪಾಲಿಸಿಲ್ಲ ಎಂದು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಪಕ್ಷದ ಮುಖಂಡರಿಗೆ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಕಾಂಗ್ರೆಸ್‌ … Continued

ನಾಳೆ ಮಾಜಿ ಶಾಸಕ ಯು.ಬಿ ಬಣಕಾರ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಬಿಜೆಪಿಗೆ ‘ಗುಡ್ ಬೈ’ ಹೇಳಿರುವ ಮಾಜಿ ಶಾಸಕ ಯು.ಬಿ ಬಣಕಾರ ಅವರು ಸೋಮವಾರ ನವೆಂಬರ್‌ 21ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಚುನಾವಣೆ ಸನಿಹ ಬರುತ್ತಿದ್ದಂತೆಯೇ ಬಿಜೆಪಿ ತೊರೆದ ಶಾಕ್ ನೀಡಿದ್ದ ಯು ಬಿ.ಬಣಕಾರ ಅವರು ಸೋಮವಾರ ಕಾಂಗ್ರೆಸ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್‌ ಪಕ್ಷವು ಯು,ಬಿ ಬಣಕಾರ ಅವರನ್ನು … Continued

ಕೋಲಾರದಲ್ಲಿ ಸ್ಪರ್ಧೆ; ಸುಳಿವು ನೀಡಿದರೆ ಸಿದ್ಧರಾಮಯ್ಯ..?

ಕೋಲಾರ: ನಾನು ಈಗ ನಾಮಪತ್ರ ಸಲ್ಲಿಸಲು ಬಂದಿಲ್ಲ. ಹಾಗೇನಾದರೂ ನಾಮಪತ್ರ ಸಲ್ಲಿಸಲು ಬಂದರೆ ಜೋರಾಗಿ ಚಪ್ಪಾಳೆ ಹೊಡೆಯಿರಿ. ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳುವ ಮೂಲಕ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು. ಇಲ್ಲಿ‌ನ ಮೆಥಾಡಲಿಜಿಸ್ಟ್ ಚರ್ಚಿನಲ್ಲಿ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, … Continued

ಕಾಂಗ್ರೆಸ್‌ ಪಕ್ಷಕ್ಕೆ ಆಗುವ ಡ್ಯಾಮೇಜ್‌ ತಡೆಯಲು ಹೇಳಿಕೆ ವಾಪಸ್‌: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಪಕ್ಷಕ್ಕೆ ಡ್ಯಾಮೇಜ್‌ ಆಗುವುದನ್ನು ತಡೆಯಲು ಹಿಂದೂ ಶಬ್ದದ ಕುರಿತಾದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರ, ರಾಜ್ಯದಲ್ಲಿ ನನ್ನ‌ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಹೇಳಿದ ಮಾತನ್ನು ವಾಪಸ್ ಪಡೆಯಲು ಒತ್ತಡ ಇತ್ತು. ಬೇರೆ ಬೇರೆ ಕಾರಣದಿಂದ … Continued

‘ಪೇ ಸಿಎಂ’ ಘೋಷಣೆಯ ಭಿತ್ತಿಪತ್ರ- ಕ್ಯೂ ಆರ್ ಕೋಡ್ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ‘ಶೇ 40 ಕಮಿಷನ್ ಸರ್ಕಾರ’ವೆಂದು ಆರೋಪಿಸಿ ‘ಪೇ ಸಿಎಂ’ (Pay CM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷವು ಅಭಿಯಾನ ಆರಂಭಿಸಿದೆ. ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ರಾಜ್ಯ ಸರ್ಕಾರದ … Continued