ಕೋಲಾರದಲ್ಲಿ ಸ್ಪರ್ಧೆ; ಸುಳಿವು ನೀಡಿದರೆ ಸಿದ್ಧರಾಮಯ್ಯ..?

ಕೋಲಾರ: ನಾನು ಈಗ ನಾಮಪತ್ರ ಸಲ್ಲಿಸಲು ಬಂದಿಲ್ಲ. ಹಾಗೇನಾದರೂ ನಾಮಪತ್ರ ಸಲ್ಲಿಸಲು ಬಂದರೆ ಜೋರಾಗಿ ಚಪ್ಪಾಳೆ ಹೊಡೆಯಿರಿ. ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳುವ ಮೂಲಕ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು. ಇಲ್ಲಿ‌ನ ಮೆಥಾಡಲಿಜಿಸ್ಟ್ ಚರ್ಚಿನಲ್ಲಿ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, … Continued

ಕಾಂಗ್ರೆಸ್‌ ಪಕ್ಷಕ್ಕೆ ಆಗುವ ಡ್ಯಾಮೇಜ್‌ ತಡೆಯಲು ಹೇಳಿಕೆ ವಾಪಸ್‌: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಪಕ್ಷಕ್ಕೆ ಡ್ಯಾಮೇಜ್‌ ಆಗುವುದನ್ನು ತಡೆಯಲು ಹಿಂದೂ ಶಬ್ದದ ಕುರಿತಾದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರ, ರಾಜ್ಯದಲ್ಲಿ ನನ್ನ‌ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಹೇಳಿದ ಮಾತನ್ನು ವಾಪಸ್ ಪಡೆಯಲು ಒತ್ತಡ ಇತ್ತು. ಬೇರೆ ಬೇರೆ ಕಾರಣದಿಂದ … Continued

‘ಪೇ ಸಿಎಂ’ ಘೋಷಣೆಯ ಭಿತ್ತಿಪತ್ರ- ಕ್ಯೂ ಆರ್ ಕೋಡ್ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ‘ಶೇ 40 ಕಮಿಷನ್ ಸರ್ಕಾರ’ವೆಂದು ಆರೋಪಿಸಿ ‘ಪೇ ಸಿಎಂ’ (Pay CM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷವು ಅಭಿಯಾನ ಆರಂಭಿಸಿದೆ. ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ರಾಜ್ಯ ಸರ್ಕಾರದ … Continued

ವಿಧಾನಸಭೆ ಅಧಿವೇಶನ, ಭಾರತ್‌ ಜೋಡೊ ಯಾತ್ರೆ ನಡುವೆಯೇ ಡಿಕೆಶಿಗೆ ಇ.ಡಿ ಸಮನ್ಸ್‌

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ನಲ್ಲಿ ಸೂಚಿಸಲಾಗಿದೆ. ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಭಾರತ್‌ ಜೋಡೊ ಯಾತ್ರೆ ಹಾಗೂ ವಿಧಾನಸಭೆ … Continued

ಕಾಂಗ್ರೆಸ್, ಭಾರತ ಭಿನ್ನವಾಗಿ ಯೋಚಿಸಲು ಪ್ರಾರಂಭಿಸಿವೆ : ಗುಲಾಂ ನಬಿ ಆಜಾದ್‌ ರಾಜೀನಾಮೆ ನಂತರ ಮನೀಶ್ ತಿವಾರಿ ಹೇಳಿಕೆ

ನವದೆಹಲಿ: ಗುಲಾಂ ನಬಿ ಆಜಾದ್ ಅವರು ಪಕ್ಷದಿಂದ ನಿರ್ಗಮಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, 1885 ರಿಂದ ಅಸ್ತಿತ್ವದಲ್ಲಿದ್ದ ಭಾರತ ಮತ್ತು ಕಾಂಗ್ರೆಸ್ ನಡುವಿನ ಸಮನ್ವಯದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ. ಎರಡು ವರ್ಷಗಳ ಹಿಂದೆ ನಮ್ಮಲ್ಲಿ 23 ಮಂದಿ ಸೋನಿಯಾ ಗಾಂಧಿ ಅವರಿಗೆ ಪಕ್ಷದ ಪರಿಸ್ಥಿತಿ ಚಿಂತಾಜನಕವಾಗಿದೆ ಮತ್ತು ಇದನ್ನು … Continued

ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಹಾಕದ ಸರ್ಕಾರ : ಬಿಜೆಪಿ ನಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ರಾಜ್ಯ ಸರ್ಕಾರದ ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರ ಹಾಕದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು, ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಚಳುವಳಿಯಲ್ಲಿ … Continued

ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪರವಾಗಿ ಕಾಂಗ್ರೆಸ್-ಎಸ್‌ಪಿ-ಎನ್‌ಸಿಪಿ ಶಾಸಕರಿಂದ ಅಡ್ಡ ಮತದಾನ…!?

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಪರವಾಗಿ ಅಡ್ಡ ಮತದಾನವು ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡರಿಂದಲೂ ನಡೆದ ಬಗ್ಗೆ ವರದಿಯಾಗಿದೆ. ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಪಾಳಯ, ಗುಜರಾತ್‌ನಲ್ಲಿ ಎನ್‌ಸಿಪಿ ಮತ್ತು ಒಡಿಶಾ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್‌ನಿಂದ ಅಡ್ಡ ಮತದಾನ ವರದಿಯಾಗಿದೆ. ಉತ್ತರ ಪ್ರದೇಶ ಬರೇಲಿಯ ಭೋಜಿಪುರದ ಸಮಾಜವಾದಿ ಪಕ್ಷದ ಶಾಸಕರಾದ … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ನಿಂದ ಜೈರಾಂ ರಮೇಶ, ಮನ್ಸೂರ್‌ ಅಲಿಖಾನ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ ೧೦ ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹಾಗೂ ಅಚ್ಚರಿಯ ಬೆಳವಣಿಗೆಯಲ್ಲಿ ೨ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿಖಾನ್ ಇಬ್ಬರೂ ಸೋಮವಾರ ನಾಮಪತ್ರ ಸಲ್ಲಿಸಿದರು. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ … Continued

ಐದು ಕ್ಷೇತ್ರಗಳಿಗೆ ಉಪಚುನಾವಣೆ: ಟಿಎಂಸಿ, ಕಾಂಗ್ರೆಸ್, ಆರ್‌ಜೆಡಿ ಗೆಲುವು; ಬಿಜೆಪಿ ಶೂನ್ಯ ಸಾಧನೆ

ನವದೆಹಲಿ: ತೃಣಮೂಲ ಕಾಂಗ್ರೆಸ್ ಶನಿವಾರ ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭೆ ಮತ್ತು ಬಾಲಿಗುಂಜ್ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಬಿಜೆಪಿಯೊಂದಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ತಲಾ ಒಂದು ಕ್ಷೇತ್ರವನ್ನು ಗೆದ್ದುಕೊಂಡಿವೆ. ಛತ್ತೀಸ್‌ಗಢದ ಖೈರಗಢ ವಿಧಾನಸಭಾ ಉಪಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಶೋದಾ ವರ್ಮಾ ಅವರು ಬಿಜೆಪಿಯ … Continued

ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಕೊಟ್ಟ ಸನ್ಮಾನ ಏನೆಂದು ನಿಮಗೆ ಗೊತ್ತಾ: ಸಿದ್ದರಾಮಯ್ಯಗೆ ಮಾತಿನಲ್ಲಿ ತಿವಿದ ಸುರೇಶಕುಮಾರ

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ನೀಡಿದ ಹೇಳಿಕೆಗಳಿಗೆ ಮಾಜಿ ಸಚಿವ ಸುರೇಶಕುಮಾರ್ ತಿರುಗೇಟು ನೀಡಿದ್ದಾರೆ. ಡಾ.ಬಾಬು ಜಗಜೀವನ್ ರಾಮ್‍ರ ಜಯಂತಿ ಆಚರಣೆ ವೇಳೆ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುರೇಶಕುಮಾರ, ದಲಿತರ ಏಳಿಗೆಗೆ ದುಡಿದ ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಪಕ್ಷದವರು ಕೊಟ್ಟ ಸನ್ಮಾನ ನಿಮಗೆ ಗೊತ್ತಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಾಬು ಜಗಜೀವನ್ ರಾಮ್ … Continued