ಕರ್ನಾಟಕ ಉಪಚುನಾವಣೆ: ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ

ಬೆಂಗಳೂರು: ಉಪಚುನಾವಣೆ ನಡೆಯಲಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ  ಅಭ್ಯರ್ಥಿ ಹೆಸರು ಇನ್ನೂ ಪ್ರಕಟಿಸಬೇಕಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರ ವಿಧಾನಸಬಾ ಕ್ಷೇತ್ರದಿಂದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವನಗೌಡ ಆರ್. ತಿರುವಿಹಾಳ ಅವರಿಗೆ … Continued

ಟಿಎಂಸಿ ಪರ ಪ್ರಚಾರ ಮಾಡಬೇಡಿ: ಪವಾರ್,‌ ತೇಜಸ್ವಿಗೆ ಕಾಂಗ್ರೆಸ್ ಮನವಿ ‌

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಪರ ಪ್ರಚಾರ ಮಾಡಬೇಡಿ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರಿಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದ ಪ್ರದೀಪ್‌ ಭಟ್ಟಾಚಾರ್ಯ ಉಭಯ ಮುಖಂಡರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸ್ಟಾರ್‌ ಪ್ರಚಾರಕರಿಬ್ಬರೂ ಟಿಎಂಸಿ ಪರ ಪ್ರಚಾರ ಮಾಡಿದರೆ ರಾಜ್ಯದ ಮತದಾರರು ಗೊಂದಲಕ್ಕೀಡಾಗುವರು. ಆದ್ದರಿಂದ ತೃಣಮೂಲ … Continued

ನಾನು ಗುರುವಾರದಿಂದಲೇ ಕಾಂಗ್ರೆಸ್‌ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದ್ದೇನೆ

ಬೆಂಗಳೂರು: ನಾನು ಗುರುವಾರದಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಶುರು ಮಾಡಿದ್ದೇನೆ ಎಂದು ಮಧು ಬಂಗಾರಪ್ಪ ಹೇಳಿದರು. ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಗುರುವಾರದಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಶುರು ಮಾಡಿದ್ದೇನೆ. ಅಧಿಕೃತವಾಗಿ ಸೇರ್ಪಡೆಯಾಗುವುದು ಬಾಕಿ ಇದೆ. ಒಂದು ವರ್ಷ ಕಾಲ ನಿರ್ಧಾರ ತೆಗೆದುಕೊಳ್ಳಲು … Continued

ಶಾಸಕಿಯರಿಂದ ತಾವು ಕುಳಿತಿದ್ದ ಟ್ರ್ಯಾಕ್ಟರ್ ಎಳೆಸಿದ ಕಾಂಗ್ರೆಸ್‌ ನಾಯಕ ಹೂಡಾ…!

ಕಾಂಗ್ರೆಸ್ ನಾಯಕರೊಬ್ಬರ ಅತರೇಕದ ವರ್ತನೆ ಈಗ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿದೆ. ಹರಿಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ತಮ್ಮ ಅನುಚಿತ ವರ್ತನೆ ಮೂಲಕ ಸುದ್ದಿಯಲ್ಲಿದ್ದಾರೆ. ಭೂಪಿಂದರ್ ಸಿಂಗ್ ಹೂಡಾ ಅವರು ತಾವು ಕುಳಿತಿದ್ದ ಟ್ರ್ಯಾಕ್ಟರ್ ಎಳೆಯಲು ಮಹಿಳಾ ಶಾಸಕಿಯರನ್ನು ಬಳಸಿಕೊಂಡಿದ್ದಾರೆ ಎನ್ನುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರವ್ಯಾಪಿ ಚರ್ಚೆಗೂ ಕಾರಣವಾಗಿದೆ. ಈ ವಿದ್ಯಮಾನವನ್ನು … Continued

ಪಂಚರಾಜ್ಯಗಳ ಚುನಾವಣೆ: ಕಾಂಗ್ರೆಸ್‌ ನೆಲೆ ಮತ್ತಷ್ಟು ಕುಸಿದರೆ ಬಿಜೆಪಿಗೆ ತೃತೀಯ ರಂಗ ಪರ್ಯಾಯವಾಗಲಿದೆಯೇ?

ಪಂಚರಾಜ್ಯ ಚುನಾವಣೆಗಳಲ್ಲಿ ಕೇರಳ ಹಾಗೂ ಅಸ್ಸಾಂ ಪಡಿಸಿ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಈ ಪಕ್ಷದ ಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತ ಸಾಗಿದೆ. ಅಸ್ಸಾಂನಲ್ಲಿ ಬಿಜೆಪಿ ಸೋಲಿಸಲೇಬೇಕೆಂದು ಅನೇಕ ಪ್ರಾದೇಶಿಕ ಪಕ್ಷಗಳ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ … Continued

ಪರಿಷತ್‌: ಪ್ರಶ್ನೆ ಕೇಳದೆ ಸಚಿವ ಬೈರತಿಗೆ ಮುಜುಗರ ತರಲು ಕಾಂಗ್ರೆಸ್‌ ಸದಸ್ಯರ ಯತ್ನ

ಬೆಂಗಳೂರು: ಮಾನಹಾನಿ ಪ್ರಕರಣಗಳನ್ನು ಪ್ರಕಟಿಸದಂತೆ ಕೋರ್ಟ್ ಮೆಟ್ಟಿಲೇರಿರುವ ಆರು ಮಂದಿ ಪೈಕಿ ಒಬ್ಬರಾಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರಿಗೆ ಕಾಂಗ್ರೆಸ್ ಪ್ರಶ್ನೆ ಕೇಳದೆ ವಿಧಾನಪರಿಷತ್‍ನಲ್ಲಿ ಮುಜುಗರ ಉಂಟು ಮಾಡಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಆರ್.ಪ್ರಸನ್ನಕುಮಾರ್ ಮತ್ತು ಬಸವರಾಜ ಪಾಟೀಲ ಇಟಗಿ ಅವರ ಪ್ರಶ್ನೆಗಳು ಇದ್ದವು. ಆದರೆ, ಈ ಇಬ್ಬರು ಕೂಡ ನಾವು … Continued

ಸಿಂಧಗಿಯಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ನೀಡಿದ ಅಶೋಕ ಮನಗೂಳಿ…!

ವಿಜಯಪುರ: ಉಪಚುನಾವಣೆ ಸನಿಹದಲ್ಲಿರುವಾಗಲೇ ಜೆಡಿಎಸ್‌ಗೆ ದೊಡ್ಡ ಶಾಕ್‌ ಆಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಮಾಜಿ ಸಚಿವ ದಿ.ಎಂ. ಸಿ.ಮನಗೂಳಿ ಅವರ ಪುತ್ರ ಪಕ್ಷ ತೊರೆಯುವುದಾಗಿ ಪ್ರಕಟಿಸುವುದರ ಮೂಲಕ ಜೆಡಿಎಸ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ. ಅವರು ಕಾಂಗ್ರೆಸ್‌ ಸೇರುವುದಾಗಿ ಹೇಳಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ (85) ಜನವರಿ 28ರಂದು … Continued

ಸಚಿವರ ಮಂಪರು ಪರೀಕ್ಷೆಗೆ ಒಳಪಡಿಸಲು ಕೋರಿ ಶೀಘ್ರವೇ ಅರ್ಜಿ

ಬೆಂಗಳೂರು: ಸಿಡಿ ವಿಚಾರವಾಗಿ ಸಚಿವರುಗಳಿಗೆ ಮಂಪರು ಪರೀಕ್ಷೆ ಮಾಡಬೇಕು ಮತ್ತು ಅವರು ಸಲ್ಲಿಸಿರುವ ನಿರೀಕ್ಷಣಾ ನಿರ್ಬಂಧ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ರಮೇಶ್ ಜಾರಕಿಹೊಳಿ ಮಿತ್ರಮಂಡಳಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಸಚಿವರಾದ ಡಾ.ಕೆ.ಸುಧಾಕರ್, ನಾರಾಯಣಗೌಡ, … Continued

ಸಂಪುಟದ ರಕ್ಷಣೆಗೆ ನೀವು ತಡೆಯಾಜ್ಞೆ ತರುವುದಿಲ್ಲವೇ: ಬಿಎಸ್‌ವೈಗೆ ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಣ್ಣಿನಲ್ಲಿ ನೋಡಲಾಗದ ಸಿಡಿ ಎಂದು ಹೇಳಿದ್ದಾರೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಂಗ್ರೆಸ್‌ ಲೇವಡಿ ಮಾಡಿದೆ. ಟ್ವಿಟರ್‌ನಲ್ಲಿ ಕಾಂಗ್ರೆಸ್ ಈ ವಿಷಯದಲ್ಲಿ ಬಿಜೆಪಿಯ ವಿರುದ್ಧ ವಾಗದಾಳಿ ನಡೆಸಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ … Continued

ತಮಿಳುನಾಡು: ಮೈತ್ರಿಯಲ್ಲಿ ಬಿರುಕು, ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್‌ ರಾಜ್ಯ ಘಟಕದ ನಿರ್ಧಾರ?

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಡಿಎಂಕೆ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಶುರುವಾಗಿದೆ. ಕೆಲವೇ ಕೆಲವು ಸ್ಥಾನಗಳನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಡುವ ಮೂಲಕ ಪಕ್ಷಕ್ಕೆ ಡಿಎಂಕೆ ಅವಮಾನಿಸಿದೆ ಎಂದು ರಾಜ್ಯ ಘಟಕ ಸಿಡಿಮಿಡಿಗೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷದ … Continued