ಮನಮೋಹನ ಸಿಂಗ್ ಸ್ಮಾರಕ ; ಕಾಂಗ್ರೆಸ್ ಮನವಿಗೆ ಕೇಂದ್ರ ಸರ್ಕಾರದ ಒಪ್ಪಿಗೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಕಾಂಗ್ರೆಸ್ ಮನವಿಗೆ ಒಪ್ಪಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಮನಮೋಹನ್ ಸಿಂಗ್ ಅವರಿಗೆ ದೆಹಲಿಯಲ್ಲಿ ತಂಗುದಾಣ ನೀಡಬೇಕೆಂಬ ತನ್ನ ಮನವಿಯನ್ನು ಸರ್ಕಾರ ಅಂಗೀಕರಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಮಾಜಿ … Continued

ಮನಮೋಹನ್ ಸಿಂಗ್ ಸ್ಮಾರಕದ ವಿಚಾರವಾಗಿ ಬಿಜೆಪಿ vs ಕಾಂಗ್ರೆಸ್

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಶುಕ್ರವಾರ ಮಾತಿನ ಚಕಮಕಿ ನಡೆದಿದೆ. ಅಂತ್ಯಕ್ರಿಯೆಯನ್ನು ಪ್ರತ್ಯೇಕ ಸ್ಮಾರಕ ಸ್ಥಳದಲ್ಲಿ ನಡೆಸಬೇಕೆಂಬ ಕಾಂಗ್ರೆಸ್ ಮನವಿಯನ್ನು ಕೇಂದ್ರ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾತನಾಡಿರುವ ರಾಜನೀತಿಜ್ಞರಿಗೆ ಸ್ಮಾರಕಗಳೊಂದಿಗೆ … Continued

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ

ಬೆಂಗಳೂರು : ಶಾಸಕ ಮುನಿರತ್ನ ಅವರು ದಿ.ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ತಲೆಗೆ ಮೊಟ್ಟೆ ಎಸೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಲಗ್ಗೆರೆ ಬಳಿಯ ಲಕ್ಷ್ಮೀದೇವಿ ನಗರದಲ್ಲಿ ಬುಧವಾರ ಮಧ್ಯಾಹ್ನ 12:30ಕ್ಕೆ ಶಾಸಕ ಮುನಿರತ್ನ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ನಡೆದುಕೊಂಡು … Continued

ಚುನಾವಣಾ ನಿಯಮಾವಳಿ ತಿದ್ದುಪಡಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಚುನಾವಣಾ ನಿಯಮಾವಳಿ 1961ಕ್ಕೆ ಈಚೆಗೆ ಮಾಡಲಾದ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ಹೊಣೆಗಾರಿಕೆ ಹೊಂದಿದ್ದು, ಸಾರ್ವಜನಿಕ ಸಮಾಲೋಚನೆಯಿಲ್ಲದೆ ಇಂತಹ ಪ್ರಮುಖ ಕಾನೂನಿಗೆ ಏಕಪಕ್ಷೀಯವಾಗಿ ತಿದ್ದುಪಡಿ ಮಾಡುವುದನ್ನು ಒಪ್ಪಲಾಗದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು … Continued

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಹುಬ್ಬಳ್ಳಿ: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ಅಶ್ಲೀಲ ಪದ … Continued

“…..ಕಾಂಗ್ರೆಸ್ ಹಿಂದೆ ಸರಿಯಲು ಸಿದ್ಧವಾಗಿರಬೇಕು “: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಣಿಶಂಕರ ಅಯ್ಯರ್ ಮಹತ್ವದ ಹೇಳಿಕೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಯಕನ ಸ್ಥಾನದ ಪಾತ್ರವನ್ನು ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಾಗಿರಬೇಕು ಎಂದು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಇಂಡಿಯಾ ಬ್ಲಾಕ್‌ ಅನ್ನು ಬೇರೆ ಯಾವುದೇ ಪಕ್ಷ ಮುನ್ನಡೆಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಸೂಕ್ತ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ : ತಕ್ಷಣವೇ ಶಾಸಕ ಸಿ ಟಿ ರವಿ ಬಿಡುಗಡೆ ಮಾಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆಯ ಆರೋಪದ ಮೇಲೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ಆದೇಶ … Continued

ಸಚಿವೆಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ: ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ಅಶ್ಲೀಲ ಪದಬಳಕೆ ಆರೋಪಿತ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರರಣೆ ನಡೆಸಿದ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಸಿಟಿ ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀಶರು … Continued

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಏನೇ ತೊಂದರೆಯಾದ್ರೂ ಅದಕ್ಕೆ ಡಿ.ಕೆ. ಶಿವಕುಮಾರ, ಹೆಬ್ಬಾಳ್ಕರ್ ಕಾರಣ ; ಸಿ.ಟಿ.ರವಿ ವೀಡಿಯೊ ಹೇಳಿಕೆ

ಬೆಂಗಳೂರು: ನನ್ನ ಜೀವಕ್ಕೆ ಅಪಾಯವಿದ್ದು ನನಗೆ ಏನೇ ಆದರೂ ಅದಕ್ಕೆ ಪೊಲೀಸರು, ಕಾಂಗ್ರೆಸ್ ಸರ್ಕಾರವೇ ಕಾರಣ. ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ … Continued

ನನ್ನ ಕೊಲೆಗೆ ಯತ್ನಿಸಿದ ಸಚಿವೆ ಹೆಬ್ಬಾಳ್ಕರ್‌ : ಪ್ರತಿದೂರು ದಾಖಲಿಸಿದ ಸಿ.ಟಿ.ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ … Continued