ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ನಿಂದ ಜೈರಾಂ ರಮೇಶ, ಮನ್ಸೂರ್‌ ಅಲಿಖಾನ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ ೧೦ ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹಾಗೂ ಅಚ್ಚರಿಯ ಬೆಳವಣಿಗೆಯಲ್ಲಿ ೨ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿಖಾನ್ ಇಬ್ಬರೂ ಸೋಮವಾರ ನಾಮಪತ್ರ ಸಲ್ಲಿಸಿದರು. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ … Continued

ಐದು ಕ್ಷೇತ್ರಗಳಿಗೆ ಉಪಚುನಾವಣೆ: ಟಿಎಂಸಿ, ಕಾಂಗ್ರೆಸ್, ಆರ್‌ಜೆಡಿ ಗೆಲುವು; ಬಿಜೆಪಿ ಶೂನ್ಯ ಸಾಧನೆ

ನವದೆಹಲಿ: ತೃಣಮೂಲ ಕಾಂಗ್ರೆಸ್ ಶನಿವಾರ ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭೆ ಮತ್ತು ಬಾಲಿಗುಂಜ್ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಬಿಜೆಪಿಯೊಂದಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ತಲಾ ಒಂದು ಕ್ಷೇತ್ರವನ್ನು ಗೆದ್ದುಕೊಂಡಿವೆ. ಛತ್ತೀಸ್‌ಗಢದ ಖೈರಗಢ ವಿಧಾನಸಭಾ ಉಪಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಶೋದಾ ವರ್ಮಾ ಅವರು ಬಿಜೆಪಿಯ … Continued

ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಕೊಟ್ಟ ಸನ್ಮಾನ ಏನೆಂದು ನಿಮಗೆ ಗೊತ್ತಾ: ಸಿದ್ದರಾಮಯ್ಯಗೆ ಮಾತಿನಲ್ಲಿ ತಿವಿದ ಸುರೇಶಕುಮಾರ

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ನೀಡಿದ ಹೇಳಿಕೆಗಳಿಗೆ ಮಾಜಿ ಸಚಿವ ಸುರೇಶಕುಮಾರ್ ತಿರುಗೇಟು ನೀಡಿದ್ದಾರೆ. ಡಾ.ಬಾಬು ಜಗಜೀವನ್ ರಾಮ್‍ರ ಜಯಂತಿ ಆಚರಣೆ ವೇಳೆ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುರೇಶಕುಮಾರ, ದಲಿತರ ಏಳಿಗೆಗೆ ದುಡಿದ ಬಾಬು ಜಗಜೀವನರಾಂ ಅವರಿಗೆ ಕಾಂಗ್ರೆಸ್ ಪಕ್ಷದವರು ಕೊಟ್ಟ ಸನ್ಮಾನ ನಿಮಗೆ ಗೊತ್ತಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಾಬು ಜಗಜೀವನ್ ರಾಮ್ … Continued

ಜಾತ್ರೆಗಳಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡದ ವಿಚಾರ: ಕೊಡಬಾರದೆಂದು ಕಾಂಗ್ರೆಸ್ ಸರ್ಕಾರವೇ ಕಾನೂನು ತಂದಿದೆ ಎಂದ ಸಚಿವ ಮಾಧುಸ್ವಾಮಿ

ಬೆಂಗಳೂರು: ರಾಜ್ಯದ ದೇವಾಲಯಗಳ ಜಾತ್ರೆ, ರಥೋತ್ಸವಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ವ್ಯಾಪಾರಕ್ಕೆ ಅವಕಾಶ ನೀಡದ ವಿಚಾರ ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಯು.ಟಿ. ಖಾದರ್ ವಿಷಯ ಪ್ರಸ್ತಾಪಿಸಿ, ರಾಜ್ಯದ ಅಭಿವೃದ್ಧಿಯಾಗಬೇಕಾದರೆ ಸಾಮರಸ್ಯ, ಸಹೋದರತ್ವ ಇರಬೇಕು. ಆದರೆ, ಕೆಲ ಕ್ರೂರ ಮನಸ್ಸಿನವರು ಕೆಲವೆಡೆ ಧಾರ್ಮಿಕ ಕೇಂದ್ರಗಳಲ್ಲಿ ಮುಸ್ಲಿಂ … Continued

ಪಂಚರಾಜ್ಯ ಚುನಾವಣೆ ವೈಫಲ್ಯ: ಎಐಸಿಸಿ ಸಭೆ ಕರೆಯಲು ಜಿ-23 ಸದಸ್ಯರ ಒತ್ತಾಯ

ನವದೆಹಲಿ: ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಬೆಳವಣಿಕೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಈಗ ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಯಾವಾಗ ಎಂಬ ಪ್ರಶ್ನೆಗೆ ಮತ್ತೆ ಮುನ್ನಲೆಗೆ ಬಂದಿದೆ. ಐದು ರಾಜ್ಯಗಳಲ್ಲಿನ ಹೀನಾಯ ಸೋಲು ರಾಷ್ಟ್ರೀಯ ಪಕ್ಷ ಎನಿಸಿಕೊಂಡಿರುವ ಕಾಂಗ್ರೆಸ್ ವಲಯದ ನಾಯಕರ ನಿದ್ದೆ ಕೆಡಿಸಿದೆ. ಅದರಲ್ಲೂ ಎಐಸಿಸಿ ನಾಯಕರ ಸಭೆ … Continued

ರಾಮನಗರದಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಇಂದಿನಿಂದ ಪುನರಾರಂಭ

ರಾಮನಗರ: ಐದು ದಿನಗಳ ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ ಇಂದು, ಭಾನುವಾರದಿಂದ, ರಾಮನಗರದಲ್ಲಿ ಆರಂಭಗೊಂಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲಾ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಮುಖಂಡರಾದ ಎಚ್.ಕೆ. ಪಾಟೀಲ, ಎಂ.ಬಿ … Continued

ನಾಳೆಯಿಂದ ಐದು ದಿನಗಳ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಮತ್ತೆ ಆರಂಭ

ಬೆಂಗಳೂರು: ಕೋವಿಡ್ ೩ನೇ ಅಲೆ ಹಿನ್ನೆಲೆಯಲ್ಲಿ ಕಳೆದ ತಿಂಗಳು ಅರ್ಧಕ್ಕೆ ನಿಂತಿದ್ದ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ನಾಳೆ, ಭಾನುವಾರದಿಂದ ಮತ್ತೆ ಆರಂಭವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಭಾನುವಾರದ ರಾಮನಗರದಿಂದ ೫ ದಿನಗಳ ಪಾದಯಾತ್ರೆ ಆರಂಭವಾಗಲಿದ್ದು, ಮಾರ್ಚ್ ೩ ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕಳೆದ ತಿಂಗಳು … Continued

ಪ್ರಕರಣ ಹೊರಬಂದು 8 ತಿಂಗಳಾದ್ರೂ ಮಾತಾಡದ ಕಾಂಗ್ರೆಸ್‌ನವರಿಗೆ ಈಗ ಶ್ರೀಕಿ ಬಂಧಿಸಿದ್ದು ನೋವಾಗಿದ್ಯಾ..?: ಅರಗ ಜ್ಞಾನೇಂದ್ರ ಪ್ರಶ್ನೆ

ಶಿವಮೊಗ್ಗ:ಬಿಟ್‌ ಕಾಯಿನ್‌  ಪ್ರಕರಣ ಹೊರಗೆಬಂದು 8 ತಿಂಗಳಾದರೂ ಮಾತನಾಡದ ಕಾಂಗ್ರೆಸ್ಸಿನವರು ಅಧಿವೇಶನದಲ್ಲೂ ಸಹ ಮಾತಾಡಿಲ್ಲ. ಆದರೆ ಶ್ರೀಕಿ ಬಂಧಿಸಿದ ನಂತರ ಅವರ ಮಾತು ಶುರುವಾಗಿದೆ. ಶ್ರೀಕಿ ಬಂಧಿಸಿದ್ದು ಕಾಂಗ್ರೆಸ್ಸಿಗೆ ನೋವಾಗಿದೆಯಾ ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶ್ನಿಸಿದರು. 2018ರಲ್ಲಿಯೇ ಹ್ಯಾಕರ್‌ ಶ್ರೀಕಿ ಬಗ್ಗೆ ಮಾಹಿತಿ ಗೊತ್ತಿದ್ದರೂ ಕಾಂಗ್ರೆಸ್‌ನವರು ಆಗ ಸುಮ್ಮನೆ ಕುಳಿತರು. ನಾವು … Continued

ಠೇವಣಿ ಕಳೆದುಕೊಳ್ಳಲು ನಿಮಗೆ ಸ್ಥಾನ ನೀಡಬೇಕೇ: ಕಾಂಗ್ರೆಸ್ ವಿರುದ್ಧ ಲಾಲೂ ಗರಂ

ಪಾಟ್ನಾ: ಪ್ರಮುಖ ಮಿತ್ರಪಕ್ಷ ಕಾಂಗ್ರೆಸ್ಸಿನ ಬಲವನ್ನೇ ಪ್ರಶ್ನಿಸಿರುವ ಆರ್‌ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್, “ನಿಮಗೆ ಸೋಲಲು ಅಥವಾ ಠೇವಣಿ ಕಳೆದುಕೊಳ್ಳಲು ವಿಧಾನಸಭೆ ಸ್ಥಾನಗಳನ್ನು ಬಿಟ್ಟುಕೊಡಬೇಕೇ” ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಬಿಹಾರದ ಎಐಸಿಸಿ ಉಸ್ತುವಾರಿ ಭಕ್ತ ಚರಣ್ ದಾಸ್ ಅವರನ್ನು ಅವಿವೇಕಿ ಎಂದು ಲಾಲೂ ಕರೆದಿರುವುದಕ್ಕೆ ಕಾಂಗ್ರೆಸ್ ಪಕ್ಷದಿಂದ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಲ್ಲದೆ ಎನ್‌ಡಿಎ ಒಕ್ಕೂಟದಿಂದಲೂ … Continued

ಕಲಬುರಗಿ ಪಾಲಿಕೆ ಅಧಿಕಾರಕ್ಕೆ ಬಿಜೆಪಿ-ಕಾಂಗ್ರೆಸ್‌ ಕಸರತ್ತು: ಎಚ್‌ಡಿಕೆ ಜೊತೆ ಬೊಮ್ಮಾಯಿ, ದೇವೇಗೌಡರ ಜೊತೆ ಖರ್ಗೆ ಮಾತುಕತೆ- ಆದ್ರೆ ಗುಟ್ಟುಬಿಟ್ಟುಕೊಡದ ಜೆಡಿಎಸ್‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಒಟ್ಟು 55 ಸದಸ್ಯರ ಬಲ ಹೊಂದಿದ್ದು, ಆದರೆ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಹಾಂಗ್ರೆಸ್‌ ಹಾಗೂ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಹೀಗಾಗಿ ಕೇಔಲ ನಾಲ್ಕು ಸ್ಥಾನಗಳನ್ನು ಗೆದ್ದಿದ್ದರೂ ಜೆಡಿಎಸ್‌ಗೆ ಈಗ ಎಲ್ಲಿಲ್ಲದ ಮಹತ್ವ ಬಂದಿದೆ. ಕಾಂಗ್ರೆಸ್ 27 ವಾರ್ಡ್‌ಗಳಲ್ಲಿ, ಬಿಜೆಪಿ 23 ಮತ್ತು ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆದ್ದರೆ ಒಂದು … Continued