ಪಶ್ಚಿಮ ಬಂಗಾಳ ಚುನಾವಣೆ : ಮಮತಾಗೆ ಶಾಕ್ ನೀಡುತ್ತಾ ಬಿಜೆಪಿ ? ಅಚ್ಚರಿಯ ಫಲಿತಾಂಶ ಬರಬಹುದು ಎಂದ ಮ್ಯಾಟ್ರಿಜ್ ಸಮೀಕ್ಷೆ

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಭಾರತೀಯ ಜನತಾ ಪಾರ್ಟಿ (BJP) ನಡುವೆ ತೀವ್ರ ಹಣಾಹಣಿ ನಡೆಯಲಿದೆ ಎಂದು ‘ಮ್ಯಾಟ್ರಿಜ್’ (Matrize) ಸಂಸ್ಥೆಯ ಚುನಾವಣಾ ಪೂರ್ವ ಸರ್ವೆ ಹೇಳಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿ ಪ್ರಬಲ ಸವಾಲೊಡ್ಡುವ ಸಾಧ್ಯತೆಯಿದೆ ಎಂದು ಅದು ತಿಳಿಸಿದೆ. ಸರ್ವೆ ಪ್ರಕಾರ, … Continued

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ, ಆದ್ರೆ ಸೃಷ್ಟಿಲಾಗುತ್ತಿದೆ : ಕಾಂಗ್ರೆಸ್‌ ನಿಲುವಿಗೆ ವಿರುದ್ಧದ ಹೇಳಿಕೆ ನೀಡಿದ ಹಿರಿಯ ನಾಯಕ ಕಮಲನಾಥ !

ಛಿಂದ್ವಾರ/ ನವದೆಹಲಿ : ದೇಶದಲ್ಲಿ ಎಲ್‌ಪಿಜಿ ಮತ್ತು ಅನಿಲ ಕೊರತೆಯ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಡುವೆಯೇ ಭಿನ್ನಾಭಿಪ್ರಾಯಗಳು ಮೂಡಿವೆ. ಒಂದೆಡೆ ಹಿರಿಯ ನಾಯಕ ಕಮಲನಾಥ ಅವರು ದೇಶದಲ್ಲಿ ಎಲ್‌ಪಿಜಿ ಮತ್ತು ಅನಿಲ ಕೊರತೆಯ ವರದಿಗಳನ್ನು ತಳ್ಳಿಹಾಕಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಸಂಸದರು ಸಂಸತ್ತಿನಲ್ಲಿ ಈ ವಿಷಯವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಧ್ಯಪ್ರದೇಶದ ಮಾಜಿ … Continued

ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ”: ಪ್ರತಿ ಶಾಸಕರಿಗೂ 5 ಟಿಕೆಟ್ ನೀಡಿ ; ಶಾಸಕ ಕಾಶಪ್ಪನವರ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್‌ಸಿಎ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಿಗಾಗಿ ಪ್ರತಿ ಶಾಸಕರಿಗೆ ತಲಾ ಐದು ಟಿಕೆಟ್‌ಗಳನ್ನು ನೀಡಬೇಕು ಎಂದು ಕಾಂಗ್ರೆಸ್ ಶಾಸಕರೊಬ್ಬರು ಒತ್ತಾಯಿಸಿದ್ದಾರೆ. ಶಾಸಕರು ವಿಐಪಿಗಳಾಗಿದ್ದು, ಅವರು “ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಇದಲ್ಲದೆ, ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು ಎಂದು ಹುನಗುಂದ ಶಾಸಕ … Continued

ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕಚೇರಿ ಖಾಲಿ ಮಾಡುವಂತೆ ಕಾಂಗ್ರೆಸ್ಸಿಗೆ ಸರ್ಕಾರದ ಸೂಚನೆ

ನವದೆಹಲಿ: ಕಳೆದ 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ದೆಹಲಿಯ ’24, ಅಕ್ಬರ್ ರಸ್ತೆ’ ಬಂಗಲೆಯನ್ನು ಶನಿವಾರದೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಬೆಳವಣಿಗೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಕಳೆದ ವರ್ಷವಷ್ಟೇ ಕಾಂಗ್ರೆಸ್ ಪಕ್ಷವು ಕೋಟ್ಲಾ ಮಾರ್ಗದಲ್ಲಿರುವ ತನ್ನ … Continued

ಅಂಕೋಲಾ ; ಕಾಂಗ್ರೆಸ್‌ ಮುಖಂಡನ ಕೊಲೆಗೆ ಯತ್ನ

ಅಂಕೋಲಾ : ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಪಟ್ಟಣದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಕಾರವಾರ ರಸ್ತೆ ಕಣಕಣೇಶ್ವರ ದೇವಾಲಯದ ಪಕ್ಕದಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ ಹೇರ್ ಕಟಿಂಗ್ ಸೆಲೂನ್ ನಿಂದ ಗೋಪಾಲಕೃಷ್ಣ ನಾಯಕ ಅವರು   ತಮ್ಮ ಕಾರಿನ ಕಡೆಗೆ … Continued

ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಘೋಷಣೆ

ಬೆಂಗಳೂರು : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್​​ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಗಲಕೋಟೆ ಕ್ಷೇತ್ರದಿಂದ ಉಮೇಶ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಕುಟುಂಬದ ಸಮರ್ಥ ಶಾಮನೂರು ಅವರಿಗೆ ಟಿಕೆಟ್‌ ನೀಡಲಾಗಿದೆ. ​​ ಈ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್​​ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಸಭೆಗಳನ್ನು … Continued

ದಾವಣಗೆರೆ ದಕ್ಷಿಣ ಕ್ಷೇತ್ರ ; ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮೊದಲೇ ನಾಮಪತ್ರ ಸಲ್ಲಿಸಿದ ಶಾಮನೂರು ಮೊಮ್ಮಗ…!

ದಾವಣಗೆರೆ: ಕರ್ನಾಟಕದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಪೈಪೋಟಿ ಎದುರಾಗಿದೆ. ಹಲವಾರು ಆಕಾಂಕ್ಷಿಗಳು ಟಿಕೆಟಿಗಾಗಿ ಲಾಬಿ ನಡೆಸಿದ್ದು, ಕಾಂಗ್ರೆಸ್ಸಿಗೆ ಟಿಕೆಟ್‌ ನೀಡುವುದೇ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಂಪತಿಯ ಪುತ್ರ … Continued

ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಬಿಜೆಪಿ ಸೇರಿದ ಸಂಸದ ಪ್ರದ್ಯುತ್ ಬೋರ್ಡೊಲೋಯ್

ನವದೆಹಲಿ: ಚುನಾವಣೆ ಗೋಷಣೆಯಾದ ಬೆನ್ನಲ್ಲೇ ಕಾಂಗ್ರೆಸಿಗೆ ದೊಡ್ಡ ಆಘಾತದಲ್ಲಿ ಅಸ್ಸಾಂನ ಲೋಕಸಭಾ ಸಂಸದ ಪ್ರದ್ಯುತ್ ಬೋರ್ಡೊಲೋಯ್ ಅವರು ಬುಧವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಅಸ್ಸಾಂ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ ಸೈಕಿಯಾ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು. ಅಸ್ಸಾಂಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿ ಇರುವಾಗ … Continued

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ: ಲೋಕಸಭೆಯ ಸಭಾಧ್ಯಕ್ಷ (ಸ್ಪೀಕರ್) ಓಂ ಬಿರ್ಲಾ ಅವರ ಪದಚ್ಯುತಿಗೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ ಸದನದಲ್ಲಿ ಸೋಲನುಭವಿಸಿದೆ. ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಈ ನಿರ್ಣಯವನ್ನು ತಿರಸ್ಕರಿಸಲಾಯಿತು. ಮತದಾನದ ನಂತರ ಸದನದ ಕಲಾಪವನ್ನು ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಗುರುವಾರ (ಮಾರ್ಚ್‌ 12) … Continued

ಅಸ್ಸಾಂನಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಬಿಗ್ ಶಾಕ್: 3 ಶಾಸಕರು ಸೇರಿ ಐವರು ನಾಯಕರು ಬಿಜೆಪಿಗೆ ಸೇರ್ಪಡೆ

ಗುವಾಹತಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಕಾಂಗ್ರೆಸ್‌ನ ಮೂವರು ಪ್ರಮುಖ ಶಾಸಕರು ಹಾಗೂ ಟಿಎಂಸಿಯ ಓರ್ವ ನಾಯಕ ಇಂದು, ಗುರುವಾರ ಅಧಿಕೃತವಾಗಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಶಾಕ್‌ ನೀಡಿದ್ದಾರೆ. ಗುರುವಾರ ಗುವಾಹತಿಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶಾಸಕರುಗಳಾದ … Continued