ಒಪ್ಪಂದ ಆಗಿದ್ದರೆ ಅವರಿಬ್ಬರೇ ರಾಜಕಾರಣ ನಡೆಸಲಿ, ನಾವೆಲ್ಲ ಯಾಕೆ ಬೇಕು? : ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಸಚಿವ ಪರಮೇಶ್ವರ ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೇನು ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ … Continued

ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ನಾಟ್‌ ಓಕೆ..? ಆಪ್ ಜೊತೆ ಮೈತ್ರಿ ಇಲ್ಲ ; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್‌ ಪಕ್ಷವು ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದು, ಏಕಾಂಗಿಯಾಗಿ ಸ್ಪರ್ಧಿವುದಾಗಿ ಶುಕ್ರವಾರ ಪ್ರಕಟಿಸಿದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಪಕ್ಷವು ಸ್ವಂತವಾಗಿ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದ್ದಾರೆ. ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ … Continued

ವೀಡಿಯೊ..| ಅನುದಾನ ಸಿಗದ್ದಕ್ಕೆ ಗ್ಯಾರಂಟಿ ಯೋಜನೆ’ ಕೈ ಬಿಡಬೇಕು ಎಂದ ಕಾಂಗ್ರೆಸ್‌ ಶಾಸಕ ; ಡಿ.ಕೆ. ಶಿವಕುಮಾರ ಗರಂ

ಹೊಸಪೇಟೆ / ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡುವುದಾಗಿ ಕಾಂಗ್ರೆಸ್ ಗವಿಯಪ್ಪ ಹೇಳಿರುವುದು ಈಗ ವೈರಲ್ ಆಗುತ್ತಿದೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ, ಗ್ಯಾರಂಟಿ ಸ್ಕೀಂಗಳಿಂದಾಗಿ … Continued

ವಯನಾಡು ಉಪಚುನಾವಣೆ: ರಾಹುಲ್‌ ಗಾಂಧಿಗಿಂತ ಹೆಚ್ಚಿನ ಅಂತರದಲ್ಲಿ ಜಯಗಳಿಸಿದ ಸಹೋದರಿ ಪ್ರಿಯಾಂಕಾ ಗಾಂಧಿ…!

ತಿರುವನಂತಪುರಂ: ಇಡೀ ದೇಶದ ಗಮನ ಸೆಳೆದಿದ್ದ ವಯನಾಡು (Wayanad) ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ. ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಸಹೋದರ ರಾಹುಲ್‌ ಗಾಂಧಿ … Continued

ಕರ್ನಾಟಕದ ಉಪಚುನಾವಣೆ : ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು, ಮತ್ತೆ ಸೋತ ನಿಖಿಲ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚನ್ನಪಟ್ಟಣದ ಜಿದ್ದಾಜಿದ್ದಿ ಕಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರು ಜೆಡಿಎಸ್‌ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ ಕುಮಾರಸ್ವಾಮಿ ವಿರುದ್ಧ 25,515 ಮತಗಳ ಅಂತರದಿಂದ ಭರ್ಜರಿ ಗೆಲುವು … Continued

ಉಪಚುನಾವಣೆ : ಕರ್ನಾಟಕದ 3 ಕ್ಷೇತ್ರಗಳಲ್ಲಿ ಗೆಲುವು ಯಾರಿಗೆ ? ಎಕ್ಸಿಟ್‌ ಪೋಲ್‌ ಹೇಳಿದ್ದೇನು..?

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಪಿಮಾರ್ಕ್ ಎಕ್ಸಿಟ್‌ ಪೋಲ್‌ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅಂದಾಜಿಸಿದೆ. ಪಿಮಾರ್ಕ್ ಸಮೀಕ್ಷೆ ಪ್ರಕಾರ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಈ … Continued

ವೀಡಿಯೊ..| ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ಸಭೆಯಲ್ಲಿ ಮಧು ಬಂಗಾಪ್ಪಗೆ ಮುಜುಗರ : ಕ್ರಮಕ್ಕೆ ಸೂಚನೆ

ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ … Continued

ಸಚಿವ ಜಮೀರ್ ಅಹ್ಮದ್‌ ವಿರುದ್ಧ ಕ್ರಮ: ಪರೋಕ್ಷ ಸುಳಿವು ನೀಡಿದರೇ ಗೃಹ ಸಚಿವ ಪರಮೇಶ್ವರ..?

ಮೈಸೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದು ವಿವಾದಕ್ಕೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪರೋಕ್ಷ ಸುಳಿವು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಜಮೀರ್ ಹೇಳಿಕೆಯಿಂದ ಚುನಾವಣೆಯಲ್ಲಿ ಸ್ವಲ್ಪ ಪರಿಣಾಮ … Continued

ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಕಾಂಗ್ರೆಸ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಶನಿವಾರ ಮತ್ತೊಂದು ದೂರು ದಾಖಲಿಸಿದೆ. ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷಣ ಅವರು ಶನಿವಾರ ಮೈಸೂರಿನ ಲಕ್ಷ್ಮಿಪುರಂ … Continued

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇತ್ತೀಚಿಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಳೆ … Continued