ಎನ್‌ಸಿಇಆರ್‌ಟಿ ವಿವಾದ: ಪಠ್ಯ ಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿದ್ದ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯ (NCERT) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಸುಪ್ರೀಂ ಕೋರ್ಟ್‌ ಗುರುವಾರ ನಿಷೇಧಿಸಿದೆ. ಇದು ಆಳವಾಗಿ ಬೇರೂರಿದ ಸಂಚಿನ ಫಲವಾಗಿದ್ದು, ಇದಕ್ಕೆ ಹೊಣೆಗಾರರಾದವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿಗಳಾದ ಜೊಯಮಲ್ಯ ಬಾಗ್ಚಿ ಹಾಗೂ ವಿಪುಲ್‌ … Continued

ಮುಡಾದ ದಟ್ಟಗಳ್ಳಿಯ ಜಮೀನು ಜಪ್ತಿ ಪ್ರಕರಣ | ಆತುರದ ಕ್ರಮಕ್ಕೆ ಮುಂದಾಗುವುದು ಬೇಡ : ಇ.ಡಿ.ಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ದಟ್ಟಗಳ್ಳಿಯಲ್ಲಿರುವ ಜಮೀನನ್ನು ಜಾರಿ ನಿರ್ದೇಶನಾಲಯ (ಇ ಡಿ) ಜಪ್ತಿ ಮಾಡಿದ್ದು, ಸದ್ಯ ಈ ಕುರಿತು ಯಾವುದೇ ಆತುರದ ಕ್ರಮಕ್ಕೆ ಮುಂದಾಗುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಇ.ಡಿ.ಗೆ ನಿರ್ದೇಶಿಸಿದೆ. ಇ.ಡಿ. ಕ್ರಮದ ವಿರುದ್ಧ … Continued

ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪತಂಜಲಿ ಆಯುರ್ವೇದ ಸಂಸ್ಥೆ, ಅದರ ಸಂಸ್ಥಾಪಕರಾದ ಬಾಬಾ ರಾಮದೇವ ಹಾಗೂ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ದಾಖಲಿಸಲಾಗಿದ್ದ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ ಕೈಬಿಟ್ಟಿದೆ. ಪುರಾವೆ ಆಧಾರಿತ ಔಷಧಗಳನ್ನು ಗುರಿಯಾಗಿಸಿಕೊಂಡು ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸಿದ್ದ ಪತಂಜಲಿ ಆಯುರ್ವೇದ ಮತ್ತದರ ಪ್ರವರ್ತಕರಾದ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ನಿಂದ … Continued

ತಾಪಂ, ಜಿಪಂ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ

ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಆಯೋಗದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ … Continued

ಎಂ.ಎಸ್. ಧೋನಿ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿ : ಐಪಿಎಸ್ ಅಧಿಕಾರಿ ಸಂಪತ್‌ಗೆ 15 ದಿನಗಳ ಜೈಲು ಶಿಕ್ಷೆ

ಚೆನ್ನೈ: ಕ್ರಿಕೆಟಿಗ ಎಂ.ಎಸ್‌. ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಸಂಪತಕುಮಾರ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಎಸ್. ಎಸ್. ಸುಂದರ ಮತ್ತು ಸುಂದರ ಮೋಹನ ಅವರಿದ್ದ ನೇತೃತ್ವದ ವಿಭಾಗೀಯ ಪೀಠವು ಕುಮಾರ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಶಿಕ್ಷೆಯನ್ನು ಮೂವತ್ತು ದಿನಗಳವರೆಗೆ … Continued

ನಟ ಚೇತನ್ ವಿರುದ್ಧ ನ್ಯಾಯಾಂಗ ನಿಂದನಾ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ಬೆಂಗಳೂರು : ಹಿಜಾಬ್ ಪ್ರಕರಣದಲ್ಲಿ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದ ಸಂಬಂಧ ಕನ್ನಡ ಚಿತ್ರನಟ ಚೇತನ್‌ ವಿರುದ್ಧ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಈಚೆಗೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ. ಹಾಗೂ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡಿನ … Continued