ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ

ನ್ಯೂಯಾರ್ಕ್: 2022 ರಲ್ಲಿ ನ್ಯೂಯಾರ್ಕ್ ಉಪನ್ಯಾಸ ವೇದಿಕೆಯಲ್ಲಿ ಖ್ಯಾತ ಲೇಖಕ ಹಾಗೂ ಭಾರತದ ಸಂಜಾತ ಸಲ್ಮಾನ್ ರಶ್ದಿ ಅವರನ್ನು ಇರಿದು, ಅವರ ಒಂದು ಕಣ್ಣನ್ನು ಕುರುಡನನ್ನಾಗಿ ಮಾಡಿದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಗೆ ಶುಕ್ರವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. 27 ವರ್ಷದ ಹಾದಿ ಮತರ್ ಎಂಬಾತನನ್ನು ಕೊಲೆ ಯತ್ನ ಮತ್ತು ಹಲ್ಲೆಯ ಆರೋಪದಲ್ಲಿ … Continued

ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರವಾರ: ಉತ್ತರ ಜಿಲ್ಲೆಯ ಭಟ್ಕಳ ತಾಲೂನಿಲ್ಲಿ ನಡೆದ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯೊಬ್ಬನಿಗೆ ಮರಣ ದಂಡನೆ, ಇನ್ನೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಭಟ್ಕಳ ತಾಲೂಕಿನ ಹಾಡವಳ್ಳಿಯ ಗ್ರಾಮದ ವಿನಯ ಶ್ರೀಧರ ಭಟ್ಟನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಆತನ ತಂದೆ ಶ್ರೀಧರ ಭಟ್ಟನಿಗೆ … Continued

ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram Mining Case) ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ತೆಲಂಗಾಣದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಈಗ ಶಾಸಕ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ … Continued

ಜನಾರ್ದನ ರೆಡ್ಡಿ ಬಂಧನ, ಚಂಚಲಗೂಡ ಜೈಲಿಗೆ ಶಿಫ್ಟ್‌

ಹೈದರಾಬಾದ್‌: ದೇಶದ ಗಮನ ಸೆಳೆದಿದ್ದ ಆಂಧ್ರಪ್ರದೇಶದ ಓಬಳಾಪುರಂ ಮೈನಿಂಗ್‌ ಕಂಪನಿಯ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಬೆನ್ನಲ್ಲೆ ರೆಡ್ಡಿ ಅವರನ್ನ ಬಂಧಿಸಲಾಗಿದ್ದು, ಹೈದರಾಬಾದ್‌ನ ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಮಂಗಳವಾರ ತೀರ್ಪು … Continued

ಅಕ್ರಮ ಗಣಿಗಾರಿಕೆ : ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ; ಸಿಬಿಐ ವಿಶೇಷ ಕೋರ್ಟ್ ಆದೇಶ

ಹೈದರಾಬಾದ್‌ : ತೆಲಂಗಾಣದ ನಾಂಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯವು ಮಂಗಳವಾರ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರ ಮೂವರನ್ನು ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿದೆ. ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ (OMC) ಒಳಗೊಂಡ ಬೃಹತ್ ಗಣಿಗಾರಿಕೆ ಹಗರಣದ ತನಿಖೆ ಪ್ರಾರಂಭವಾದ ವರ್ಷಗಳ ನಂತರ ಈ … Continued

19 ವರ್ಷದ ಯುವತಿ ಮೇಲೆ ಅತ್ಯಾಚಾರ ಪ್ರಕರಣ ; ದಿಗಂಬರ ಜೈನಮುನಿಗೆ 10 ವರ್ಷ ಜೈಲು ಶಿಕ್ಷೆ

ಸೂರತ್‌ : ಗುಜರಾತಿನ ಸೂರತ್‌ನ ಸೆಷನ್ಸ್ ನ್ಯಾಯಾಲಯವು 2017 ರಲ್ಲಿ 19 ವರ್ಷದ ಹುಡುಗಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ ದಿಗಂಬರ ಪಂಗಡದ ಸನ್ಯಾಸಿ ಶಾಂತಿಸಾಗರಜಿ ಮಹಾರಾಜಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ತಪ್ಪಿತಸ್ಥ ಸನ್ಯಾಸಿಗೆ 25,000 ರೂಪಾಯಿ ದಂಡವನ್ನೂ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎ.ಕೆ. ಶಾಂತಿಸಾಗರಜಿ ಮಹಾರಾಜ … Continued

ಸಿಖ್ ವಿರೋಧಿ ದಂಗೆ: ಕೊಲೆ ಪ್ರಕರಣದಲ್ಲಿ ಸಜ್ಜನಕುಮಾರಗೆ ಜೀವಾವಧಿ ಶಿಕ್ಷೆ

ನವದೆಹಲಿ: ದೆಹಲಿಯಲ್ಲಿ 1984ರಲ್ಲಿ ಸಂಭವಿಸಿದ್ದ ಸಿಖ್ ವಿರೋಧಿ ದಂಗೆ ವೇಳೆ ನಡೆದ ತಂದೆ-ಮಗನ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಫೆಬ್ರವರಿ 12 ರಂದು ಸಜ್ಜನಕುಮಾರ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಮಂಗಳವಾರ ಶಿಕ್ಷೆಯ … Continued

ಹಲ್ಲೆ ಪ್ರಕರಣ: ಬಾಲಿವುಡ್‌ ನಟ ಆದಿತ್ಯ ಪಾಂಚೋಲಿ ಶಿಕ್ಷೆ ಎತ್ತಿ ಹಿಡಿದ ನ್ಯಾಯಾಲಯ, ಜೈಲು ಶಿಕ್ಷೆಯಲ್ಲಿ ರಿಲೀಫ್‌

ಮುಂಬೈ: ಮುಂಬೈನ ಸೆಷನ್ಸ್ ನ್ಯಾಯಾಲಯವು 2005 ರ ಪಾರ್ಕಿಂಗ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಬಾಲಿವುಡ್‌ ನಟ ಆದಿತ್ಯ ಪಾಂಚೋಲಿಯ ಅಪರಾಧವನ್ನು ಎತ್ತಿಹಿಡಿದಿದೆ. ಆದರೆ ಮ್ಯಾಜಿಸ್ಟ್ರೇಟ್ ನೀಡಿದ ಒಂದು ವರ್ಷದ ಜೈಲು ಶಿಕ್ಷೆಯನ್ನು ಮಾರ್ಪಡಿಸಿದೆ ಮತ್ತು ಉತ್ತಮ ನಡವಳಿಕೆಯ ಬಾಂಡ್‌ ಮೇಲೆ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಆದಾಗ್ಯೂ ಸೆಷನ್ಸ್ ನ್ಯಾಯಾಲಯವು 59 ವರ್ಷದ ನಟನಿಗೆ … Continued

1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನಕುಮಾರ ದೋಷಿ

ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಇಬ್ಬರು ಸಿಖ್ಖರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನಕುಮಾರ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ದೋಷಿ ಎಂದು ತೀರ್ಪು ನೀಡಿದೆ. ಫೆಬ್ರವರಿ 18 ರಂದು ಶಿಕ್ಷೆಯ ಪ್ರಮಾಣ ಕುರಿತು ವಾದಗಳು ನಡೆಯಲಿವೆ. ಗಲಭೆಗೆ ಸಂಬಂಧಿಸಿದ ಮತ್ತೊಂದು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಪ್ರಸ್ತುತ ತಿಹಾರ್ … Continued

ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ದೋಷಿಗಳು

ಬೆಂಗಳೂರು : ನಕಲಿ ವೇತನ ಸರ್ಟಿಫಿಕೇಟ್‌ಗಳನ್ನು ಸಲ್ಲಿಸಿ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರಿನ ₹7.17 ಕೋಟಿ ಹಣ ದುರ್ಬಳಕೆ ಮಾಡಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಸ್‌. ಎನ್‌. ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರನ್ನು ದೋಷಿಗಳು ಎಂದು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಸಿಬಿಐ ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಜನಪ್ರತಿನಿಧಿಗಳ … Continued