ಆಘಾತಕಾರಿ..ಬೆಂಗಳೂರಿನಲ್ಲಿ ಸಮುದಾಯಕ್ಕೂ ಹಬ್ಬುತ್ತಿದೆ ಎಂದ ಆರೋಗ್ಯ ಸಚಿವರು…!

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್‌ ಸಮುದಾಯಕ್ಕೂ ಹಬ್ಬುತ್ತಿದೆ ಎಂಬ ಆಘಾತಕರ ಮಾಹಿತಿಯನ್ನು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಮ್ಮ ನಿರೀಕ್ಷೆಗೂ ಮೀರಿ ಹಬ್ಬುತ್ತಿದೆ. ಇದು ಸಮುದಾಯಕ್ಕೂ ಹಬ್ಬುತ್ತಿದೆ. ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದರು. … Continued