ಕರ್ನಾಟಕದಲ್ಲಿ ಸೋಮವಾರ 279 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಸೋಮವಾರ 279 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ ಮೂವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೇ ವೇಳೆ 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಒಟ್ಟು 1,222 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಮೈಸೂರು ಜಿಲ್ಲೆಯಲ್ಲಿ ಇಬ್ಬರು ಕೊರೊನಾ … Continued

ಕರ್ನಾಟಕದಲ್ಲಿ ಶನಿವಾರ 201 ಮಂದಿಗೆ ಕೋವಿಡ್‌ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 201 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಹಾಗೂ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 833ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಶನಿವಾರ ರಾಜ್ಯದಲ್ಲಿ 7060 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಧನಾತ್ಮಕತೆ ಪ್ರಮಾಣ ಶೇ. 2.84 ರಷ್ಟು ಇದೆ. ಬೆಂಗಳೂರಿನಲ್ಲಿ 2095 … Continued

ಕರ್ನಾಟಕದಲ್ಲಿ ಶುಕ್ರವಾರ 173 ಜನರಿಗೆ ಕೊರೊನಾ ಸೋಂಕು, ಇಬ್ಬರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 173 ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ಎರಡು ಕೊರೊನಾ ವೈರಸ್ ಸಂಬಂಧಿತ ಸಾವುಗಳು ವರದಿಯಾಗಿವೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಶುಕ್ರವಾರ ಹೊಸದಾಗಿ 173 ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿದೆ. ಈ ಪೈಕಿ 649 … Continued

ಕರ್ನಾಟಕದಲ್ಲಿ ಗುರುವಾರ 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಇದೇವೇಳೆ 69 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568ಕ್ಕೆ ತಲುಪಿದೆ. 514 ಮಂದಿಯನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. 54 … Continued

ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಕೋವಿಡ್‌ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 74 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ … Continued

ಶನಿವಾರ ಒಂದೇ ದಿನ ರಾಜ್ಯದಲ್ಲಿ 104 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 104 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,356ಕ್ಕೆ ಮತ್ತು … Continued

ಕೋವಿಡ್‌-19: ದೇಶದಲ್ಲಿ ಸಕ್ರಿಯ ಪ್ರಕರಣಗಳು 2,311ಕ್ಕೆ ಏರಿಕೆ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 614 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಮೂರು ಸಾವುಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ. ಮೇ 21ರ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣ ವರದಿಯಾಗಿದೆ. ಕೇರಳದಲ್ಲಿ … Continued

ದೇಶದಲ್ಲಿ ಏರುತ್ತಿದೆ ಕೊರೊನಾ ಸೋಂಕು : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,000 ದಾಟಿದ ದೈನಂದಿನ ಕೋವಿಡ್-19 ಪ್ರಕರಣಗಳು, 5 ಸಾವು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,000 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಬುಧವಾರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶವು ಒಟ್ಟು 1,134 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ ಪ್ರಕರಣಗಳು 7,026 ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 5,30,813 ಕ್ಕೆ … Continued

ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಸರ್ಕಾರದಿಂದ 3,500 ರೂ. ಮಾಸಾಶನ ಘೋಷಣೆ

ಬೆಂಗಳೂರು: ಕೊರೊನಾದಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು ಆ ಮಕ್ಕಳಿಗೆ ತಿಂಗಳಿಗೆ 3,500 ರೂ. ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ರಾಜ್ಯ ಸರ್ಕಾರ ‘ಮುಖ್ಯಮಂತ್ರಿ ಬಾಲಸೇವಾ ಯೋಜನೆ’ ಜಾರಿಗೆ ತರಲಿದೆ; … Continued

ಡಿಸಿಎಂ ಗೋವಿಂದ ಕಾರಜೋಳಗೆ ಕೊರೊನಾ ಸೋಂಕು

ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ . ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಗೋವಿಂದ ಕಾರಜೋಳ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಏಪ್ರಿಲ್ 10 ಮತ್ತು 11ರಂದು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಪ್ರಚಾರ ನಡೆಸಬೇಕಿತ್ತು. ಆದರೆ, ಕೋವಿಡ್ ಸೋಂಕು … Continued