ಕಲಬುರ್ಗಿ ಸರ್ಕಾರಿ ಪ್ರೌಢಶಾಲೆ ೧೫ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಕಲಬುರ್ಗಿ : ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ಸೀಲ್ ಡೌನ್ ಮಾಡಿ, ಒಂದು ವಾರ ರಜೆ ಘೋಷಿಸಲಾಗಿದೆ. ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ, ಮಾರ್ಚ್ 1 ರಂದು 63 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆ ಮಾಡಿ … Continued

ಮಹಾರಾಷ್ಟ್ರ; ಈ ವರ್ಷದಲ್ಲಿ ಮೊದಲ ಬಾರಿಗೆ ಒಂದು ದಿನಕ್ಕೆ ೧೦ ಸಾವಿರ ದಾಟಿದ ಕೊರೊನಾ ಸೋಂಕು..

ಮುಂಬೈ: ಮಹಾರಾಷ್ಟ್ರದಲ್ಲಿ ಶುಕ್ರವಾರ (ಮಾರ್ಚ್ 5) 10,216 ಹೊಸ ಸಿಒವಿಐಡಿ -19 ಪ್ರಕರಣಗಳು ವರದಿಯಾಗಿದ್ದು. ಈ ವರ್ಷ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದಲ್ಲಿ 10,000 ಕ್ಕೂ ಹೆಚ್ಚು ಸಿಒವಿಐಡಿ -19 ಪ್ರಕರಣಗಳು ದಾಖಲಾಗಿವೆ. ದಿನದಲ್ಲಿ 53 ಕೊವಿಡ್‌-19 ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 52,393 ಕ್ಕೆ ತಲುಪಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ 2.38% … Continued

ಕರ್ನಾಟಕವೂ ಸೇರಿದಂತೆ ೬ ರಾಜ್ಯಗಳ ಕೊರೊನಾ ಸೋಂಕು ಹೆಚ್ಚಳ: ಕೇಂದ್ರ

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಂಜಾಬ್, ಗುಜರಾತ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 14,989 ಕೊರೊನಾ ಸೋಕುಗಳ ವರದಿಯಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ, 7,863 … Continued

ರಾಜ್ಯದಲ್ಲಿ ಹೆಚ್ಚಿದ ೫೨೧ ಜನರಿಗೆ ಕೊರೊನಾ ಸಂಕು, ಐದು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ರವಿವಾರ 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,331ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ರವಿವಾರ 312 ಮಂದಿಗೆ … Continued

ಖಾಸಗಿ ಶಿಕ್ಷಕರ ಬೃಹತ್ ಪ್ರತಿಭಟನೆ: ವಿದ್ಯಾರ್ಥಿಗಳ ಪೋಷಕರಿಗೆ ಆತಂಕ

ಬೆಂಗಳೂರು: ಬೋಧನಾ ಶುಲ್ಕದಲ್ಲಿ ಶೇ.೩೦ರಷ್ಟು ಕಡಿತ ಸೇರಿದಂತೆ ಇತರ ಬೇಡಿಕೆಗಳ ಕುರಿತು ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನೆಯು ವಿದ್ಯಾರ್ಥಿಗಳ ಪೋಷಕರಿಗೆ ಕೊರೊನಾ ಆತಂಕ ಮೂಡಿಸಿದೆ. ಸಹಸ್ರಾರು ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಫ್ರೀಡಂ ಪಾರ್ಕ್‌ನಲ್ಲಿ ಸೇರಿ ಬೃಹತ್‌ ರ್ಯಾಲಿ ನಡೆಸಿದ್ದಾರೆ. ಆದರೆ ಕೊವಿಡ್‌-೧೯ ಸೋಂಕು ಹರಡುವ ಸಾಧ್ಯತೆ ಹೆಚ್ಚಿಸಿರುವುದು ಮಕ್ಕಳ ಪಾಲಕರಿಗೆ ಆತಂಕ … Continued

ಕೊರೊನಾ ಲಸಿಕೆ ಪ್ರಕ್ರಿಯೆ ಚುರುಕಿಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವ ಅವಶ್ಯ

ದೇಶದಲ್ಲಿ ಕೊರೊನಾ ಲಸಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಲಹೆ ನೀಡಿದ ವಿಪ್ರೋ ಸಂಸ್ಥಾಪಕ ಅಜೀಮ್‌ ಪ್ರೇಮ್‌ಜಿ, ಖಾಸಗಿ ವಲಯಗಳ ಸಹಭಾಗಿತ್ವದಿಂದ ಕೇವಲ ೨ ತಿಂಗಳುಗಳಲ್ಲಿ ೫೦ ಕೋಟಿ ಜನರಿಗೆ ಲಸಿಕೆ ಹಾಕಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಸರ್ಕಾರವು ಖಾಸಗಿ ಉದ್ಯಮ ಕ್ಷೇತ್ರವನ್ನು ತ್ವರಿತವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ 60 ದಿನಗಳಲ್ಲಿ 500 ಮಿಲಿಯನ್ … Continued

ಕೊರೊನಾ ವಿರುದ್ಧದ ಜಾಗತಿಕ ಹೋರಾಟಕ್ಕೆ ಭಾರತದ ನಾಯಕತ್ವ: ವಿಶ್ವಸಂಸ್ಥೆ

ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ನಾಯಕತ್ವವನ್ನು ಶ್ಲಾಘಿಸಿದ ವಿಶ್ವಸಂಸ್ಥೆ, ವಿಶ್ವ ಮಟ್ಟದಲ್ಲಿ ಕೊವಿಡ್‌-೧೯ ಲಸಿಕೆ ಪೂರೈಕೆಗೆ ಭಾರತ ಮಾಡುತ್ತಿರುವ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ವಿಶ್ವ ಸಂಸ್ಥೆಗೆ ಕೊವಿಡ್‌-೧೯ ಲಸಿಕೆಯ ಡೋಸ್‌ಗಳನ್ನು ನೀಡಿದ್ದಕ್ಕೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೊನಿಯೋ ಗುಟೆರಸ್‌ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ಗೆ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತವು ೧೫೦ ದೇಶಗಳಿಗೆ ಔಷಧಿಗಳು, … Continued

ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಕೊರೊನಾ ವರದಿ ತರುವುದು ಕಡ್ಡಾಯ

ಬೆಂಗಳೂರು: ಕೇರಳದಿಂದ ಬೆಂಗಳೂರಿಗೆ ಬರುವವರು ಕೊರೊನಾ ನೆಗೆಟಿವ್‌ ವರದಿ ತರುವುದು ಕಡ್ಡಾಯ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ ತಿಳಿಸಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳದಿಂದ ಬಂದವರಿಗೆ ಕೊವಿಡ್‌-೧೯ ಪರೀಕ್ಷೆ ಆಗಿದೆಯೇ ಎಂಬುದನ್ನು ಉದ್ಯೋಗದಾತ ಕಂಪನಿಗಳು, ವಾಸವಿರುವ ಅಪಾರ್ಟಮೆಂಟ್‌ ಮಾಲಿಕರ ಜವಾಬ್ದಾರಿ. ಕೊರೊನಾ ಪರೀಕ್ಷೆ ಮಾಡಿಸದೇ … Continued

ಕೊರೊನಾ: ಏಳು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಬೆಂಗಳೂರು,  ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಒಂದೇ ಒಂದು ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಂದೇ ದಿನ 438 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.  24 ಗಂಟೆಗಳಲ್ಲಿ 344 ಸೋಂಕಿತರು … Continued

ಪ್ಲಾಸ್ಟಿಕ್‌, ಗಾಜಿನ ಮೇಲೆ ಹೆಚ್ಚು ಕಾಲ ಬದುಕುವ ಕೊರೊನಾ ಸೋಂಕು: ಐಐಟಿ ಸಂಶೋಧನೆ

ಕೊರೊನಾ ಸೋಂಕು ಕಾಗದ ಹಾಗೂ ಬಟ್ಟೆಗೆ ಹೋಲಿಕೆ ಮಾಡಿದರೆ ಪ್ಲಾಸ್ಟಿಕ್‌ ಹಾಗೂ ಗಾಜಿನ ಮೇಲ್ಮೈ ಮೇಲೆ ಹೆಚ್ಚು ಕಾಲ ಬದುಕುಳಿಯುತ್ತದೆ ಎಂದು ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಬಾಂಬೆ ಸಂಶೋಧಕರು ತಿಳಿಸಿದ್ದಾರೆ. ಭೌತಶಾಸ್ತ್ರದ ಸಂಶೋಧನಾ ಜರ್ನಲ್‌ನಲ್ಲಿ ಪ್ರಕಟಗೊಂಡ ಪ್ರಬಂಧದಲ್ಲಿ ಈ ಮಹತ್ವದ ವಿಷಯವನ್ನು ತಿಳಿಸಲಾಗಿದೆ. ಗಾಜು ಹಾಗೂ ಪ್ಲಾಸ್ಟಿಕ್‌ ಮೇಲೆ ಕೊವಿಡ್‌-೧೯ ಸೋಂಕು ಹೆಚ್ಚು … Continued