ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ ನಡೆಸಲು ʼಲೋಕಪಾಲʼ ಆದೇಶ

ನವದೆಹಲಿ: ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆಯಡಿ (ಪಿಸಿಎ) ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಪಾಲವು ಮಂಗಳವಾರ ಸಿಬಿಐಗೆ ನಿರ್ದೇಶನ ನೀಡಿದೆ. ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳು ಗಂಭೀರವಾಗಿದ್ದು ಬಲವಾದ ಪುರಾವೆಗಳಿವೆ ಎಂದು ನ್ಯಾಯಾಂಗ ಸದಸ್ಯೆ ನ್ಯಾ. ಅಭಿಲಾಷಾ ಕುಮಾರಿ, ಸದಸ್ಯರಾದ ಅರ್ಚನಾ ರಾಮಸುಂದರಂ ಹಾಗೂ ಮಹೇಂದರ್ ಸಿಂಗ್ ಅವರನ್ನೊಳಗೊಂಡ … Continued

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಕೆಯಾಗಿದೆ. ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲರಾದ ನಟರಾಜ ಶರ್ಮಾ ಎಂಬವರು ಲೋಕಾಯಕ್ತಕ್ಕೆ ದೂರು … Continued

ಭ್ರಷ್ಟಾಚಾರ ಆರೋಪ : ತೆಲಂಗಾಣ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕ್ರಿಕೆಟರ್‌ ಮೊಹಮ್ಮದ್ ಅಜರುದ್ದೀನ್ ವಿರುದ್ಧ 4 ಪ್ರಕರಣಗಳು ದಾಖಲು

ಹೈದರಾಬಾದ್‌ : ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜುಬಿಲಿ ಹಿಲ್ಸ್ ಕ್ಷೇತ್ರದಿಂದ ಸ್ಪರ್ಧಿಸಲು ಯೋಜಿಸಿರುವ ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್‌ ಅಜರುದ್ದೀನ್ ಅವರು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (ಎಚ್‌ಸಿಎ) ಅಧ್ಯಕ್ಷರಾಗಿದ್ದಾಗ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮುಂದಾಗಿರುವ ಅಜರುದ್ದೀನ್ ಸೇರಿದಂತೆ ಹೈದರಾಬಾದ್ … Continued

25 ವರ್ಷಗಳೊಳಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು : 2047ರ ಗುರಿ ನಿಗದಿಪಡಿಸಿದ ಪ್ರಧಾನಿ ಮೋದಿ

ನವದೆಹಲಿ: 2047ರ ವೇಳೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಐದು ಪ್ರತಿಜ್ಞೆಗಳೊಂದಿಗೆ ಮುನ್ನಡೆಯಲು ಪ್ರಧಾನಿ ಮೋದಿ ಜನರಿಗೆ ಕರೆ ನೀಡಿದರು.2047 ರ ಐದು ಪ್ರತಿಜ್ಞೆಗಳೆಂದರೆ — ಭಾರತವನ್ನು ಅಭಿವೃದ್ಧಿಗೊಳಿಸಿರುವುದು, ಯಾವುದೇ ದಾಸ್ಯದ ಚಿಹ್ನೆಯನ್ನು ತೆಗೆದುಹಾಕುವುದು, ಪರಂಪರೆಯಲ್ಲಿ ಹೆಮ್ಮೆ, ಏಕತೆ ಮತ್ತು ನಮ್ಮ ಕರ್ತವ್ಯಗಳನ್ನು ಪೂರೈಸುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತಕ್ಕೆ ಇಂದು 75ನೇ ಸ್ವಾತಂತ್ರ್ಯೋತ್ಸವ … Continued