ಸಿಡಿ ಪ್ರಕರಣದ ಯುವತಿ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ, ಯಾವುದೇ ಕ್ಷಣದಲ್ಲಿ ಹಾಜರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ನೀಡಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪರ ವಕೀಲ ಜಗದೀಶ್ ಯುವತಿಗೆ ಎಸ್‌ಐಟಿ ಮೇಲೆ ಹಾಗೂ ಪೊಲೀಸರ ಮೇಲೆ ಯಾವುದೇ ನಂಬಿಕೆ ಇಲ್ಲ ಹಾಗಾಗಿ ಕೋರ್ಟ್ ಮುಂದೆ … Continued

ಸಚಿನ ವಾಝೆ ಎನ್‌ಐಎ ಕಸ್ಟಡಿ ಏಪ್ರಿಲ್ 3ರ ವರೆಗೆ ವಿಸ್ತರಣೆ

ಮುಂಬೈ: ದೇಶದ ಅಗ್ರಮಾನ್ಯ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮನೆಯ ಬಳಿ ಸ್ಫೋಟಕಗಳಿಂದ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಚಿನ್ ವಾಝೆ ಅವರ ಎನ್‌ಐಎ ಕಸ್ಟಡಿಯನ್ನು ವಿಶೇಷ ನ್ಯಾಯಾಲಯವು ಏಪ್ರಿಲ್ 3ರ ವರೆಗೆ ವಿಸ್ತರಿಸಿದೆ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಬಲಿಪಶುವಾಗಿ ಮಾಡಲಾಗಿದೆ ಎಂದು ಸಚಿನ್ ವಾಜೆ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ … Continued

ಎಎಪಿ ಶಾಸಕ ಸೋಮನಾಥ್ ಭಾರತಿಗೆ ಎರಡು ವರ್ಷ ಜೈಲು ಶಿಕ್ಷೆ ಆದೇಶ ಎತ್ತಿ ಹಿಡಿದ ದೆಹಲಿ ಕೋರ್ಟ್‌

ನವ ದೆಹಲಿ: 2016ರಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಎಪಿ ಶಾಸಕ ಸೋಮನಾಥ್ ಭಾರತಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವ ಆದೇಶವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಎತ್ತಿಹಿಡಿದಿದೆ. ಆದೇಶದ ನಂತರ ಭಾರತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜನವರಿಯಲ್ಲಿ ಸೋಮನಾಥ್ ಭಾರತಿಗೆ ಎರಡು ವರ್ಷ … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ :ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

ಬೆಂಗಳೂರು: ಧಾರವಾಡ ಜಿಪಂ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿದೆ. ಈ ಪ್ರಕರದಲ್ಲಿ ತಮಗೆ ಜಾಮೀನು ನೀಡುವಂತೆ ಕೋರಿ ವಿನಯ್‌ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಯೋಗೀಶ್‌ … Continued

ಸೋಲನ್ನು ಸಹಿಸಿಕೊಳ್ತೇವೆ..ವೈಯಕ್ತಿಕ ತೇಜೋವಧೆ ಸಹಿಸಿಕೊಳ್ಳಲು ಸಾಧ್ಯವಿಲ್ಲ :ಸಚಿವ ಹೆಬ್ಬಾರ

ಶಿರಸಿ: ಸಾರ್ವಜನಿಕ ಜೀವನದಲ್ಲಿರುವ ನಾವು ಸೋಲನ್ನು ಸಹಿಸಿಕೊಳ್ಳುತ್ತೇವೆ. ಆದರೆ, ವೈಯಕ್ತಿಕ ತೇಜೋವಧೆ ಮಾಡಿದರೆ ಮಾತ್ರ ನಮ್ಮಿಂದ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜಯದಲ್ಲಿ ‘ಬಿಜೆಪಿ ಸರ್ಕಾರ ಅತಿತವಕ್ಕೆ ಬರಲು ಕಾರಣರಾದ ಅದರಲ್ಲಿಯೂ ವಿಶೇಷವಾಗಿ ಸರ್ಕಾರ ರಚನೆಗೆ ಶಕ್ತಿ … Continued

೧೬ ಶಾಸಕರೂ ಕೋರ್ಟ್‌ ಮೆಟ್ಟಿಲೇರಲಿದ್ದಾರೆ: ಸಚಿವ ಸೋಮಶೇಖರ

ಬೆಂಗಳೂರು: ನಾವು ಆರು‌ ಜನ ಸಚಿವರು ಕೋರ್ಟ್‌ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್‌ಗೆ ಅರ್ಜಿ ಹಾಕುತ್ತಾರೆ. ಶನಿವಾರ ಅಥವಾ ಸೋಮವಾರ ಎಲ್ಲಾ 16 ಶಾಸಕರೂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಹಕಾರ ಸಚಿವ ಎಸ್ .ಟಿ ಸೋಮಶೇಖರ್ ಹೇಳಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾವು ಮೈತ್ರಿ ಸರ್ಕಾರ‌ ಕೆಡವಿ ಬಿಜೆಪಿ … Continued

ಕೋರ್ಟ್‌ ಮೊರೆ ಹೋದ ಆರು ಸಚಿವರ ನಿರ್ಧಾರಕ್ಕೆ ಸದಾನಂದ ಗೌಡ ಅತೃಪ್ತಿ

ಬೆಂಗಳೂರು: ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಿರುವ ಕರ್ನಾಟಕದ ಸಚಿವರ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಅತನಾಡಿರುವ ಡಿ.ವಿ.ಸದಾನಂದ ಗೌಡ ಅವರು, ಅನವಶ್ಯಕವಾಗಿ ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ರಮೇಶ್ ಜಾರಿಕಿಹೊಳಿ ಅವರ ಸಿಡಿ ವಿಚಾರ ಮಾಧ್ಯಮಗಳಲ್ಲಿ ವ್ಯಾಪಕ ಸುದ್ದಿಗೆ … Continued

ನಮ್ಮ ತೇಜೋವಧೆಗೆ ಷಡ್ಯಂತ್ರ..ಹೀಗಾಗಿ ಕೋರ್ಟ್‌ ಮೊರೆ ಹೋಗುವ ನಿರ್ಧಾರ:ಸಚಿವ ಸುಧಾಕರ

ಬೆಂಗಳೂರು:ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಮಾಧ್ಯಮಗಳನ್ನು ಬಳಸಿಕೊಂಡು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಇದನ್ನು ತಡೆಯಲು ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಆರೋಗ್ಯ ಸಚಿವ ಸುಧಾಕರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರಿತ್ರ್ಯ ಹರಣ ತಡೆಯಲು ಸುಳ್ಳು ಸುದ್ದಿ, ಅಪಪ್ರಚಾರ ನಿರ್ಬಂಧಕ್ಕೆ ಮನವಿ ಮಾಡಲಾಗಿದೆ. ಒಂದು ವೇಳೆ ವಿಷಯ ನಿಜವಾಗಿದ್ದರೆ ಕಾನೂನು ಹೋರಾಟ ಮಾಡಲಿ, ಆದರೆ … Continued

ಜಾರಕಿಹೊಳಿ ಸಿಡಿ ಸ್ಫೋಟದ ನಂತರ ಕೋರ್ಟ್‌ ಮೊರೆ ಹೋದ ಆರು ಸಚಿವರು!

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಆಗುತ್ತಿದ್ದಂತೆಯೆ ಆರು ಜನ ಸಚಿವರು ಕೋರ್ಟ್‌ ಮೊರೆ ಹೋಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದ ಆರು ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ತಡೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ಕುರಿತಾಗಿ ಯಾವುದೇ ಅವಹೇಳನಕಾರಿ ವಿಚಾರಗಳನ್ನು ಪ್ರಸಾರ ಮಾಡದಂತೆಯೂ ಮಾಧ್ಯಮಗಳಿಗೆ ನಿರ್ಬಂಧ … Continued

ಆಸ್ತಿ ಮುಟ್ಟುಗೋಲು ಪ್ರಶ್ನಿಸಿ ಫಾರುಕ್‌ ಹೈಕೋರ್ಟಿಗೆ ಮೊರೆ

ಶ್ರೀನಗರ: ಆಸ್ತಿ ಮುಟ್ಟುಗೋಲು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೆಷನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದಡಿಸೆಂಬರ್‌ 19ರಂದು … Continued