ಮಾನಹಾನಿ ಪ್ರಕರಣ : ಶಿವಸೇನೆ (ಯುಬಿಟಿ) ನಾಯಕ ಸಂಜಯ ರಾವತಗೆ ಜೈಲು ಶಿಕ್ಷೆ

ಮುಂಬೈ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್ ಅವರಿಗೆ ಮುಂಬೈ ನ್ಯಾಯಾಲಯವು ಗುರುವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಭಾರತೀಯ ದಂಡ ಸಂಹಿತೆ ಸೆಕ್ಷನ್ 500 (ಮಾನನಷ್ಟ ಶಿಕ್ಷೆ) ಅಡಿಯಲ್ಲಿ ರಾಜ್ಯಸಭಾ … Continued

ಮಗುವಾಗಿದ್ದಾಗ ತನ್ನ ಅಪಹರಣ ಮಾಡಿದ್ದ ಆರೋಪಿಗಳಿಗೆ 17 ವರ್ಷಗಳ ನಂತರ ಶಿಕ್ಷೆ ಕೊಡಿಸಿದ ವಕೀಲ…!

ಆಗ್ರಾ: ಅದೃಷ್ಟದ ಕುತೂಹಲಕಾರಿ ತಿರುವಿನಲ್ಲಿ, ತಾನು ಏಳು ವರ್ಷದವನಿದ್ದಾಗ ತನ್ನನ್ನು ಅಪಹರಿಸಿದ್ದ ದರೋಡೆಕೋರರಿಗೆ ಈಗ ವಕೀಲನಾದ ಅದೇ ಹುಡುಗ 17 ವರ್ಷಗಳ ನಂತರ ಶಿಕ್ಷೆ ಕೊಡಿಸಿದ ವಿದ್ಯಮಾನ ಉತ್ತರ ಪ್ರದೇಶದಲ್ಲಿ ನಡೆದಿದೆ..! ಉತ್ತರ ಪ್ರದೇಶದ ಆಗ್ರಾದ ಖೀರಗಢ ಪಟ್ಟಣದಲ್ಲಿ ಏಳು ವರ್ಷದ ಬಾಲಕನನ್ನು ಆತನ ತಂದೆ ಮತ್ತು ಚಿಕ್ಕಪ್ಪ ಪಟ್ಟದ ಔಷಧದ ಅಂಗಡಿಯಿಂದ ದರೋಡೆಕೋರರು ಅಪಹರಿಸಿದ್ದರು. … Continued

ಜೈಲಿನಲ್ಲಿ ರಾಜಾತಿಥ್ಯಕ್ಕೆ ಬಿತ್ತು ಬ್ರೇಕ್​; ಆರೋಪಿ ದರ್ಶನ್​ ಬಳ್ಳಾರಿಗೆ ಸ್ಥಳಾಂತರ, ಉಳಿದವರು ಬೇರೆ ಬೇರೆ ಜೈಲಿಗೆ ಶಿಫ್ಟ್..

ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೆ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ರಾಜ್ಯದ ಇತರ ಜಿಲ್ಲಾ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿ ದರ್ಶನ್​ … Continued

ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಶನಿವಾರ ಕಾಟನ್ ಪೇಟೆ ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್‌ ಕೆರೆಹಳ್ಳಿ ಅವರನ್ನು … Continued

ನೇಹಾ ಹಿರೇಮಠ ಹತ್ಯೆ ಪ್ರಕರಣ : 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

ಹುಬ್ಬಳ್ಳಿ :   ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯಕ್ಕೆ ಸೋಮವಾರ ಸುಮಾರು 483 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಏಪ್ರಿಲ್ 18ರಂದು ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ … Continued

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಉದಯನಿಧಿ ಸ್ಟಾಲಿನ್‌ ಗೆ ಜಾಮೀನು

ಬೆಂಗಳೂರು : ಸನಾತನ ಧರ್ಮ ಕುರಿತು ವಿವಾದಾತಕ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಸಾಮಾಜಿಕ ಕಾರ್ಯಕರ್ತ ಪರಮೇಶ್ವರ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ … Continued

ದರ್ಶನ, ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅವಿಶ್ವಾಸಾರ್ಹ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ

ಬೆಂಗಳೂರು : ನಟ ದರ್ಶನ ಮತ್ತು ವಿಜಯಲಕ್ಷ್ಮಿ ಅವರಿಗೆ ಸಂಬಂಧಿಸಿದ ವೈಯಕ್ತಿಕ, ಕೌಟುಂಬಿಕ ಮಾಹಿತಿಯನ್ನಾಗಲಿ ಅಥವಾ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅವಿಶ್ವಾಸಾರ್ಹ ಮಾಹಿತಿ ಅಥವಾ ಅಭಿಪ್ರಾಯಗಳನ್ನಾಗಲಿ ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರಿನ ಸತ್ರ ನ್ಯಾಯಾಲಯವು ಬುಧವಾರ ಆದೇಶಿಸಿದೆ. ದರ್ಶನ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿರುವ ಮೂಲ ದಾವೆಯ ಭಾಗವಾದ ಮಧ್ಯಂತರ ಅರ್ಜಿಯ … Continued

ವಿ.ಕೆ. ಸಕ್ಸೇನಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ : ಮೇಧಾ ಪಾಟ್ಕರ ದೋಷಿ ಎಂದು ಕೋರ್ಟ್‌ ತೀರ್ಪು

ನವದೆಹಲಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಎಲ್‌ಜಿ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ಶುಕ್ರವಾರ ತೀರ್ಪು ನೀಡಿದೆ. 23 ವರ್ಷಗಳ ಹಿಂದೆ ದಾಖಲಾದ ಪ್ರಕರಣವೊಂದರಲ್ಲಿ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ ಶರ್ಮಾ ಅವರು ಪಾಟ್ಕರ್ ಅವರ ಹೇಳಿಕೆಗಳನ್ನು … Continued

ಗರ್ಭದಲ್ಲಿರುವ ಮಗು ಗಂಡೋ ಹೆಣ್ಣೋ ತಿಳಿದುಕೊಳ್ಳಲು ಹೆಂಡತಿಯ ಹೊಟ್ಟೆಯನ್ನೇ ಕತ್ತರಿಸಿದ ಗಂಡನಿಗೆ ಜೀವಾವಧಿ ಶಿಕ್ಷೆ

ಉತ್ತರ ಪ್ರದೇಶದ ಬದೌನ್‌ನಲ್ಲಿ ತನ್ನ ಗರ್ಭಿಣಿ ಹೆಂಡತಿಗೆ ಗಂಡು ಅಥವಾ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆಯೇ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆಯನ್ನು ಕತ್ತರಿಸಿದ ವ್ಯಕ್ತಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬದೌನ್‌ನ ಸಿವಿಲ್ ಲೈನ್ಸ್‌ನ ನಿವಾಸಿ ಪನ್ನಾ ಲಾಲ ಎಂಬಾತ ಸೆಪ್ಟೆಂಬರ್ 2020 ರಲ್ಲಿ ತನ್ನ ಪತ್ನಿ ಅನಿತಾ ಮೇಲೆ ಹಲ್ಲೆ ನಡೆಸಿದ್ದ. ದಂಪತಿಗೆ … Continued

ಮಹಿಳೆ ಅಪಹರಣ ಪ್ರಕರಣ : ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಜಹಾಗೂ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ (HD Revanna) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ಸೋಮವಾರ ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್‌ ಸುಧೀರ್ಘ ವಿಚಾರಣೆ ನಡೆಸಿ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಜಾಮೀನು ಮಂಜೂರು ಮಾಡಿದೆ. ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ … Continued