ಕೋವಿಡ್‌-19 ವೈರಸ್‌ ತರಹದ ಮತ್ತೊಂದು ಅಪಾಯಕಾರಿ ವೈರಸ್‌ ಚೀನಾದಲ್ಲಿ ಪತ್ತೆ…!

ಕೋವಿಡ್‌-19 (COVID-19) ವೈರಸ್‌ ಭೀಕರ ಸಾಂಕ್ರಾಮಿಕ ರೋಗಕ್ಕೆ ಕಾರಣವಾದಂತೆಯೇ ಪ್ರಾಣಿಯಿಂದ ಮನುಷ್ಯನಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಬಾವಲಿ ಕೊರೊನಾ ವೈರಸ್ ಅನ್ನು ಚೀನಾದಲ್ಲಿ ಕಂಡುಹಿಡಿಯಲಾಗಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ಪ್ರಕಾರ, HKU5-CoV-2 ಎಂದು ಕರೆಯಲಾದ ಹೊಸ ವೈರಸ್ ಅನ್ನು ಪ್ರಸಿದ್ಧ ವಿಜ್ಞಾನಿ ಶಿ ಝೆಂಗ್ಲಿ ನೇತೃತ್ವದ ವೈರಾಲಜಿಸ್ಟ್‌ಗಳ ತಂಡವು ಪತ್ತೆ ಮಾಡಿದೆ. … Continued

ಕೋವಿಡ್ ಸಾಂಕ್ರಾಮಿಕದ 5 ವರ್ಷಗಳ ನಂತರ ಚೀನಾದಲ್ಲಿ ನಿಗೂಢ ವೈರಸ್ ನಿಂದ ಉಸಿರಾಟದ ತೊಂದರೆಯ ರೋಗ ಉಲ್ಬಣ…!

ನವದೆಹಲಿ: ಕೋವಿಡ್‌-19 (COVID-19) ಸಾಂಕ್ರಾಮಿಕ ರೋಗವು ಪ್ರಾರಂಭವಾದ ಐದು ವರ್ಷಗಳ ನಂತರ, ಚೀನಾ ಈಗ ಉಸಿರಾಟದ ತೊಂದರೆಗೆ ಕಾರಣವಾಗುವ ಹ್ಯುಮನ್‌ ಮೆಟಾಪ್ನ್ಯೂಮೋ ವೈರಸ್ (human metapneumovirus) ವಿರುದ್ಧ ಹೋರಾಡುತ್ತಿದೆ. ಡಚ್ ಸಂಶೋಧಕರು 2001 ರಲ್ಲಿ ಮೊದಲ ಬಾರಿಗೆ ಇದನ್ನು ಗುರುತಿಸಿದ್ದಾರೆ, ಈ ಎಚ್‌ಎಂಪಿವಿ (hMPV) ಇಂದ ಬರುವ ಈ ರೋಗವು ವಿಶೇಷವಾಗಿ ಚಳಿಗಾಲದ ಅವಧಿಯಲ್ಲಿ ಚೀನಾದಲ್ಲಿ … Continued

ಮೊದಲನೇ ಅಲೆ ಕೋವಿಡ್-19 ಸೋಂಕುಗಳಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಹೆಚ್ಚಳ ; ಹೊಸ ಅಧ್ಯಯನ

ಸಾಂಕ್ರಾಮಿಕ ರೋಗದ ಆರಂಭಿಕ ಅಲೆಯಲ್ಲಿ ತೀವ್ರವಾದ ಕೋವಿಡ್ -19 ಸೋಂಕಿಗೆ ಒಳಗಾದ ವ್ಯಕ್ತಿಗಳು ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ತುತ್ತಾಗುವ ಎರಡು ಪಟ್ಟು ಅಪಾಯ ಎದುರಿಸಬೇಕಾಗುತ್ತದೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಆರ್ಟೆರಿಯೊಸ್ಕ್ಲೆರೋಸಿಸ್, ಥ್ರಂಬೋಸಿಸ್ ಮತ್ತು ನಾಳೀಯ ಜೀವಶಾಸ್ತ್ರದ ಜರ್ನಲ್‌ನಲ್ಲಿ ಈ ವಾರ ಪ್ರಕಟವಾದ ಅಮೆರಿಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್‌ನಿಂದ ಬೆಂಬಲಿತವಾದ ಸಂಶೋಧನೆಯು ಹೆಚ್ಚಿದ ಅಪಾಯವು … Continued

27 ದೇಶಗಳಿಗೆ ಹರಡಿದ ಕೋವಿಡ್ ವೈರಸ್‌ ಹೊಸ ರೂಪಾಂತರಿ….!

XEC ಎಂಬ ಕೋವಿಡ್ ವೈರಸ್‌ನ ಹೊಸ ರೂಪಾಂತರವು ಯುರೋಪ್‌ನಲ್ಲಿ ಕ್ಷಿಪ್ರವಾಗಿ ಹರಡುತ್ತಿದೆ. ಇದನ್ನು ಮೊದಲು ಜೂನ್‌ನಲ್ಲಿ ಜರ್ಮನಿಯಲ್ಲಿ ಗುರುತಿಸಲಾಯಿತು ಮತ್ತು ಇದುವರೆಗೆ ಇದು ಯುರೋಪಿನ 13 ಕ್ಕೂ ಹೆಚ್ಚು ದೇಶಗಳಲ್ಲಿ ಕಾಣಿಸಿಕೊಂಡಿದೆ. ಇದು KS.1.1 ಮತ್ತು KP.3.3. ಎಂಬ ಒಮಿಕ್ರಾನ್ ಉಪವಿಭಾಗಗಳ ಸಂಯೋಜನೆಯಾಗಿದೆ. KS.1.1 ಪ್ರಪಂಚದಾದ್ಯಂತ ವಿವಿಧ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕೊಡುಗೆ ನೀಡುವ … Continued

ಕರ್ನಾಟಕದಲ್ಲಿ ಸೋಮವಾರ 279 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಸೋಮವಾರ 279 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ ಮೂವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೇ ವೇಳೆ 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಒಟ್ಟು 1,222 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಮೈಸೂರು ಜಿಲ್ಲೆಯಲ್ಲಿ ಇಬ್ಬರು ಕೊರೊನಾ … Continued

ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 328 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ (ಕಳೆದ 24 ಗಂಟೆಗಳಲ್ಲಿ) ಹೊಸದಾಗಿ 328 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದೇವೇಳೆಸೋಂಕಿನಿಂದ ಗುಣಮುಖರಾಗಿ 409 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1159ಕ್ಕೆ ಏರಿಕೆಯಾಗಿದೆ. ರಾಜ್ಯದಾದ್ಯಂತ ಶುಕ್ರವಾರ ಒಟ್ಟು 7205 ಮಂದಿಗೆ ಕೋವಿಡ್‌ 19 ಪರೀಕ್ಷೆ … Continued

ಕರ್ನಾಟಕದಲ್ಲಿ ಗುರುವಾರ 298 ಮಂದಿಗೆ ಕೋವಿಡ್‌ ಸೋಂಕು, ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 298 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೂ ನಾಲ್ವರು ಮೃತಪಟ್ಟಿದ್ದಾರೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ. ಇದೇವೇಳೆ ಕೋವಿಡ್ ನಿಂದ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ … Continued

ಕರ್ನಾಟಕದಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢ; ಒಂದು ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ (ಜನವರಿ 1) 296 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಹಾಗೂ ಒಬ್ಬರು ಸಾವು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಲಾಖೆ ಹೊರಡಿಸಿದ ಕೋವಿಡ್ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಒಟ್ಟು 1,245 ಸಕ್ರಿಯ ಕೋವಿಡ್ ಸೋಂಕಿತರಿದ್ದು, ಇದೇವೇಳೆ 50 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ರೋಗಿಗಳಲ್ಲಿ, 1,179 ಮಂದಿ ಮನೆ ಪ್ರತ್ಯೇಕತೆಯಲ್ಲಿದ್ದು, 66 … Continued

ಕರ್ನಾಟಕದಲ್ಲಿ ಶನಿವಾರ 201 ಮಂದಿಗೆ ಕೋವಿಡ್‌ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 201 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಹಾಗೂ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 833ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಶನಿವಾರ ರಾಜ್ಯದಲ್ಲಿ 7060 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಧನಾತ್ಮಕತೆ ಪ್ರಮಾಣ ಶೇ. 2.84 ರಷ್ಟು ಇದೆ. ಬೆಂಗಳೂರಿನಲ್ಲಿ 2095 … Continued

ಕರ್ನಾಟಕದಲ್ಲಿ ಶುಕ್ರವಾರ 173 ಜನರಿಗೆ ಕೊರೊನಾ ಸೋಂಕು, ಇಬ್ಬರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 173 ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ಎರಡು ಕೊರೊನಾ ವೈರಸ್ ಸಂಬಂಧಿತ ಸಾವುಗಳು ವರದಿಯಾಗಿವೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಶುಕ್ರವಾರ ಹೊಸದಾಗಿ 173 ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 702ಕ್ಕೆ ಏರಿದೆ. ಈ ಪೈಕಿ 649 … Continued