ಕರ್ನಾಟಕದಲ್ಲಿ ಗುರುವಾರ 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಇದೇವೇಳೆ 69 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568ಕ್ಕೆ ತಲುಪಿದೆ. 514 ಮಂದಿಯನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. 54 … Continued

ಕೋವಿಡ್ JN.1 ರೂಪಾಂತರಿ ಪ್ರಕರಣಗಳ ವರದಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೋವಿಡ್ ಸೋಂಕಿನ ಉಪತಳಿಯಾದ JN.1 ಸಂಬಂಧಿಸಿದಂತೆ ರಾಜ್ಯದಲ್ಲಿ ಈವರೆಗೆ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಮಾರ್ಗಸೂಚಿ ಹೊರಡಿಸಲಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದೆ. ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗೂ ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತ ಕ್ರಮವಾಗಿ ಸೂಕ್ತ ಕೋವಿಡ್ … Continued

ಕರ್ನಾಟಕದಲ್ಲಿ ಬುಧವಾರ 103 ಮಂದಿಗೆ ಕೊರೊನಾ ಸೋಂಕು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಬುಧವಾರ 103 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 103 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ ಬುಧವಾರ ರಾಜ್ಯದಲ್ಲಿ 7262 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಧನಾತ್ಮಕತೆ ಪ್ರಮಾಣ … Continued

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ : ದಿನೇಶ ಗುಂಡೂರಾವ್

ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ (ಮನೆ ಪ್ರತ್ಯೇಕತೆ)ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮದವರ … Continued

ಕರ್ನಾಟಕದಲ್ಲಿ 34 ಜೆಎನ್.1 ಕೋವಿಡ್ ವೈರಸ್ ರೂಪಾಂತರ ಪ್ರಕರಣಗಳು ದೃಢ

ಬೆಂಗಳೂರು: ರಾಜ್ಯದಲ್ಲಿ 34 ಜನರಿಗೆ ಕೋವಿಡ್‌-19 ಜೆಎನ್‌ 1 ರೂಪಾಂತರಿ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ರೂಪಾಂತರಿ ಹರಡುವ ಸೂಚನೆ ನೀಡಿದೆ. ರಾಜ್ಯದಲ್ಲಿ 3 ಮಂದಿ ಸಾವಿಗೀಡಾಗಿದ್ದಾರೆ. ಸೋಮವಾರ 3,155 ಜನರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಹೊಸದಾಗಿ 125 ಜನರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. ಈಗ ಒಟ್ಟು 436 ಸಕ್ರಿಯ ಸೋಂಕಿತರು … Continued

ಕೋವಿಡ್‌-19: ದೇಶದಲ್ಲಿ ಸಕ್ರಿಯ ಪ್ರಕರಣಗಳು 2,311ಕ್ಕೆ ಏರಿಕೆ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 614 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಮೂರು ಸಾವುಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ. ಮೇ 21ರ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣ ವರದಿಯಾಗಿದೆ. ಕೇರಳದಲ್ಲಿ … Continued

5 ದಿನಗಳ ಹಿಂದೆ ಬೆಂಗಳೂರಿನಲ್ಲಿ ಕೋವಿಡ್‌ ಸೋಂಕಿದ್ದ ವ್ಯಕ್ತಿ ಸಾವು: ದಿನೇಶ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಮಂಗಳವಾರ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಅವರು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೋವಿಡ್​ ಪರಿಸ್ಥಿತಿ ಬಗ್ಗೆ … Continued

ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು :ಕೇರಳದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದ್ದು, ಮಂಗಳವಾರ ಮಾರ್ಗಸೂಚಿ (Covid 19 Guidelines) ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಲ್ಲಿಸಲು ಸೂಚನೆ … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ : ಕರ್ನಾಟಕದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್‌ ಧರಿಸಲು ಸಲಹೆ

ಬೆಂಗಳೂರು : ಕೇರಳದಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಮಧ್ಯೆ ಹಿರಿಯ ನಾಗರಿಕರು ಮತ್ತು ಕೊಮೊರ್ಬಿಡಿಟಿ ಇರುವವರು ಮಾಸ್ಕ್ ಧರಿಸುವಂತೆ ರಾಜ್ಯ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸೋಮವಾರ ಸಲಹೆ ನೀಡಿದ್ದಾರೆ. ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯಪಡುವ ಅಗತ್ಯವಿಲ್ಲ. ನಾವು ಸಭೆ ನಡೆಸಿದ್ದೇವೆ, ಅಲ್ಲಿ ನಾವು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚಿಸಿದ್ದೇವೆ. ನಾವು … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ : ಕರ್ನಾಟಕದ ಆಸ್ಪತ್ರೆಗಳ ಪೂರ್ವ ಸಿದ್ಧತೆ ಪರಿಶೀಲನೆ

ಬೆಂಗಳೂರು: ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಸರ್ಕಾರ ಕರೆದಿದೆ. ಶನಿವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಸಭೆಯ ನಂತರ ಮಾಧ್ಯಮದವರ … Continued