3ನೇ ಅಲೆ ಭೀತಿ: ಕರ್ನಾಟಕದಲ್ಲಿ ಮಕ್ಕಳಿಗೆ ಕೊರೊನಾ ಪರೀಕ್ಷೆ ಹೆಚ್ಚಳ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಂಭಾವ್ಯ 3ನೇ ಅಲೆ ಆತಂಕದ ಮಧ್ಯೆ ರಾಜ್ಯದಲ್ಲಿ ಮಕ್ಕಳ ಮೇಲಿನ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಸೆ.21 ಮತ್ತು ಅ.21 ರ ನಡುವೆ ನಡೆಸಿದ ಒಟ್ಟು ಪರೀಕ್ಷೆಗಳಲ್ಲಿ ಶೇಕಡಾ 20.8ರಷ್ಟು ಮಕ್ಕಳಿಗೆ ಪರೀಕ್ಷೆ ನಡೆಸಲಾಗಿದೆ … Continued