ವಿಡಿಯೊಗಳು | ಸಕಲ ಸರ್ಕಾರಿ ಗೌರವಗಳೊಂದಿಗೆ ಗಾನಕೋಗಿಲೆ ಎಸ್‌.ಜಾನಕಿ ಅಂತ್ಯಕ್ರಿಯೆ

ಮೈಸೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಹೆಚ್​. ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಭಾನುವಾರ ಸಂಜೆ ನಡೆಯಿತು. ಜಾನಕಿ ಅವರ ಆಸೆಯಂತೆ ಅವರ ತೋಟದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ. ಜಾನಕಿ ಅವರಿಗೆ ಜಿಲ್ಲಾಡಳಿತದಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಸರ್ಕಾರದ ಪರವಾಗಿ ಸಚಿವ ಯತೀಂದ್ರ … Continued

ಇರಾನಿನ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತದ ಪರವಾಗಿ ಕೇಂದ್ರ ಸಚಿವೆ ಪಬಿತ್ರಾ, ಬಿಹಾರ ರಾಜ್ಯಪಾಲರು ಭಾಗಿ

ನವದೆಹಲಿ: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ಬಿಹಾರದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಹಾಗೂ ವಿದೇಶಾಂಗ ಖಾತೆ ರಾಜ್ಯ ಸಚಿವರಾದ ಪಬಿತ್ರ ಮಾರ್ಗರಿಟಾ ಭಾಗವಹಿಸಲಿದ್ದಾರೆ ಎಂದು ಸರ್ಕಾರದ ಮೂಲಗಳು ಸೋಮವಾರ ತಿಳಿಸಿವೆ. ಕಳೆದ ವಾರ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ … Continued

ಹತ್ಯೆಯಾಗಿ 7 ವಾರ ಕಳೆದ್ರೂ ನಡೆಯದ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ ; ಇರಾನ್ ಆಡಳಿತಕ್ಕೆ ಕಾಡುತ್ತಿರುವ ಭೀತಿ ಯಾವುದು?

ತೆಹ್ರಾನ್: ಇರಾನ್‌ನ ಸಾಂಸ್ಕೃತಿಕ ಮತ್ತು ರಾಜಕೀಯ ಸಂಪ್ರದಾಯಗಳಿಗೆ ತದ್ವಿರುದ್ಧವಾದ ಬೆಳವಣಿಗೆಯೊಂದರಲ್ಲಿ, ದೇಶದ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಸಂಸ್ಕಾರ ಇನ್ನೂ ನಡೆದಿಲ್ಲ. 86 ವರ್ಷದ ಖಮೇನಿ ಅವರು ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ವೈಮಾನಿಕ ದಾಳಿಯಲ್ಲಿ ಹತ್ಯೆಗೀಡಾಗಿ ಏಳು ವಾರಗಳೇ ಕಳೆದಿದ್ದರೂ, ಇರಾನಿನ ಆಡಳಿತವು ಅವರ ಸಮಾಧಿ ಸ್ಥಳವನ್ನು ಇನ್ನೂ ಅಂತಿಮಗೊಳಿಸಿಲ್ಲ. … Continued

ಮೇರುಸಾಹಿತಿ ಎಸ್‌.ಎಲ್‌. ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು: ಎರಡು ದಿನಗಳ ಹಿಂದೆ (ಸೆಪ್ಟೆಂಬರ್‌ ೨೪) ನಿಧನರಾದ ಮೇರು ಸಾಹಿತಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ.ಎಸ್.ಎಲ್ ಭೈರಪ್ಪ (SL Bhyrappa) ಾವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ( ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು, ಶುಕ್ರವಾರ (ಸೆ.೨೬) ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ … Continued

ವೀಡಿಯೊ..| ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಪಂಚಭೂತಗಳಲ್ಲಿ ಲೀನ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಇಂದು, ಶನಿವಾರ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್‌ಬೋಧ್‌ಘಾಟ್‌ನಲ್ಲಿ ಸಿಖ್‌ ಸಂಪ್ರದಾಯ ಪ್ರಕಾರ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ ಧನಕರ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ … Continued

ಮನಮೋಹನ ಸಿಂಗ್ ಸ್ಮಾರಕ ; ಕಾಂಗ್ರೆಸ್ ಮನವಿಗೆ ಕೇಂದ್ರ ಸರ್ಕಾರದ ಒಪ್ಪಿಗೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಕಾಂಗ್ರೆಸ್ ಮನವಿಗೆ ಒಪ್ಪಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಮನಮೋಹನ್ ಸಿಂಗ್ ಅವರಿಗೆ ದೆಹಲಿಯಲ್ಲಿ ತಂಗುದಾಣ ನೀಡಬೇಕೆಂಬ ತನ್ನ ಮನವಿಯನ್ನು ಸರ್ಕಾರ ಅಂಗೀಕರಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಮಾಜಿ … Continued

ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಡಿಸೆಂಬರ್ 28ರಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಬೆಳಿಗ್ಗೆ 11:45 ಕ್ಕೆ ದೆಹಲಿಯ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ. ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಗುರುವಾರ 92 ನೇ ವಯಸ್ಸಿನಲ್ಲಿ ಏಮ್ಸ್‌ನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿಯವರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. “ಡಾ. ಮನಮೋಹನ್ … Continued

ಸೋಲದೇವನಹಳ್ಳಿ ತೋಟದಲ್ಲಿ ನಟಿ ಲೀಲಾವತಿ ಅಂತ್ಯಕ್ರಿಯೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು ಅವರ ನೆಚ್ಚಿನ ತೋಟದಲ್ಲಿ ಶನಿವಾರ (ಡಿಸೆಂಬರ್‌ 9) ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ನೆಲಮಂಗಲ ಸಮೀಪದ ಸೋಲದೇವನಹಳ್ಳಿ (Soladevanahalli) ತೋಟದಲ್ಲಿ ಲೀಲಾವತಿ ಅವರ ಅಂತಿಮ ಸಂಸ್ಕಾರ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಶುಕ್ರವಾರದಿಂದ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ … Continued