ಟೆಸ್ಟ್‌ ಕ್ರಿಕೆಟ್‌ ನಲ್ಲಿ ಅತಿ ಹೆಚ್ಚು ‘ಸರಣಿ ಶ್ರೇಷ್ಠ’ ಆಟಗಾರ ಪ್ರಶಸ್ತಿ : ಖ್ಯಾತ ಸ್ಪಿನ್ನರ್‌ ಮುರಳೀಧರನ್ ದಾಖಲೆ ಸರಿಗಟ್ಟಿದ ಭಾರತದ ಅಶ್ವಿನ್

ಕಾನ್ಪುರ: ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಎರಡೂ ಟೆಸ್ಟ್‌ ಪಂದ್ಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವಿಶ್ವ ನಂ. 1 ಟೆಸ್ಟ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರು ಮಂಗಳವಾರ (ಅಕ್ಟೋಬರ್ 1) ತಮ್ಮ 11ನೇ ಬಾರಿಗೆ … Continued

ಭಾರತ vs ಬಾಂಗ್ಲಾದೇಶ | ಅತ್ಯಂತ ವೇಗವಾಗಿ 27,000 ರನ್ ಗಳಿಸಿದ ಆಟಗಾರರಾದ ವಿರಾಟ್ ಕೊಹ್ಲಿ ; ಈ ಸಾಧನೆ ಮಾಡಿದ ಆಟಗಾರರ ಪಟ್ಟಿ…

ಕಾನ್ಪುರ : ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 27,000 ರನ್‌ಗಳ ಗಡಿ ದಾಟಿದ ಬ್ಯಾಟರ್‌ ಆಗಿ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಕ್ರಿಕೆಟ್‌ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 27,000 ರನ್‌ಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 6 ಮತ್ತು … Continued

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತದ ತಂಡ ಪ್ರಕಟ ; 156.7 ಕಿಮೀ ವೇಗದಲ್ಲಿ ಬೌಲ್‌ ಮಾಡುವ ಮಯಾಂಕ್‌ ತಂಡಕ್ಕೆ ಆಯ್ಕೆ

ನವದೆಹಲಿ: ಬಾಂಗ್ಲಾದೇಶ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ 20 ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಯುವ ವೇಗಿ ಮಯಾಂಕ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆಕೆಆರ್ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಸುಮಾರು ಮೂರು ವರ್ಷಗಳ ನಂತರ ಟಿ 20 ಪಂದ್ಯಾವಳಿಗೆ ಪುನರಾಗಮನ ಮಾಡುತ್ತಿದ್ದಾರೆ. … Continued

ವೀಡಿಯೊ..| ಬಾಂಗ್ಲಾ ವಿರುದ್ಧದ ಟೆಸ್ಟ್‌ ನಲ್ಲಿ ಎಲ್‌ ಬಿಡಬ್ಲ್ಯು ತೀರ್ಪಿಗೆ ʼಡಿ ಆರ್‌ ಎಸ್ʼ ಮನವಿ ಮಾಡದೆ ವಿರಾಟ್‌ ಕೊಹ್ಲಿ ಪ್ರಮಾದ…!

ಶುಕ್ರವಾರ ಚೆನ್ನೈನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2 ನೇ ದಿನದಂದು ವಿರಾಟ್ ಕೊಹ್ಲಿ ಡಿಆರ್‌ಎಸ್‌ ಪ್ರಮಾದ ಎಸಗಿದ್ದಾರೆ. ಕೊಹ್ಲಿ ಬಾಂಗ್ಲಾದೇಶದ ಬೌಲರ್‌ಗಳ ವಿರುದ್ಧ ಉತ್ತಮ ಟಚ್‌ನಲ್ಲಿದ್ದರು. ಅವರು 36 ಎಸೆತಗಳಲ್ಲಿ ಎರಡು ಬೌಂಡರಿಗಳ ಸಹಾಯದಿಂದ 17 ರನ್ ಗಳಿಸಿದರು. ಆದಾಗ್ಯೂ, ಮೆಹಿದಿ ಹಸನ್ ಮಿರಾಜ್ ಅವರ ಪೂರ್ಣ ಎಸೆತ ಅವರ ಮುಂಭಾಗದ ಪ್ಯಾಡ್‌ಗೆ … Continued

“ವಿರಾಟ್ ಕೊಹ್ಲಿ ನನ್ನ ನಾಯಕತ್ವದ ಅಡಿಯಲ್ಲಿ ಆಡಿದ್ದಾರೆ, ಭಾರತದ ಅನೇಕ ಆಟಗಾರರು ನನ್ನ ಬ್ಯಾಚ್‌ಮೇಟ್‌ಗಳು..”: ತೇಜಸ್ವಿ ಯಾದವ್ ಹೇಳಿಕೆ ವೈರಲ್‌

ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ನಾಯಕತ್ವದ ಅಡಿಯಲ್ಲಿ ಭಾರತದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಆಡಿದ್ದಾರೆ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್ ಅವರ ಪುತ್ರ ತೇಜಸ್ವಿ ಯಾದವ್‌, ತಾನು ದೇಶೀಯ ಕ್ರಿಕೆಟ್‌ನಲ್ಲಿ … Continued

ವೀಡಿಯೊ..| ಎಂ.ಎಸ್. ಧೋನಿಯನ್ನು ನಾನು ಎಂದಿಗೂ ಕ್ಷಮಿಸಲ್ಲ ; ಕ್ರಿಕೆಟರ್‌ ಯುವರಾಜ ಸಿಂಗ್ ತಂದೆ ಹೀಗೆ ಹೇಳಿದ್ಯಾಕೆ…?

ನವದೆಹಲಿ : ಭಾರತದ ಮಾಜಿ ಬ್ಯಾಟರ್ ಯುವರಾಜ ಸಿಂಗ್ ಅವರ ತಂದೆ ಯೋಗರಾಜ ಸಿಂಗ್ ಅವರು ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಜೀ ಸ್ವಿಚ್ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಯೋಗರಾಜ ಸಿಂಗ್ ಅವರು ಧೋನಿಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ. … Continued

ಮುಂದಿನ ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್‌ ಮಂಡಳಿಯ (BCCI) ಹಾಲಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC) ಸ್ವತಂತ್ರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮತ್ತು 1 ಡಿಸೆಂಬರ್ 2024 ರಂದು ಅವರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 20 ರಂದು, ಪ್ರಸ್ತುತ ಐಸಿಸಿ (ICC) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯ ಮುಕ್ತಾಯವಾಗಲಿದೆ. ಅಧ್ಯಕ್ಷ … Continued

ಅಂತಾರಾಷ್ಟ್ರೀಯ-ದೇಶೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಬ್ಯಾಟರ್‌ ಶಿಖರ್ ಧವನ್

ನವದೆಹಲಿ: ಭಾರತದ ಅತ್ಯುತ್ತಮ ವೈಟ್ ಬಾಲ್ ಆರಂಭಿಕ ಬ್ಯಾಟರ್‌ ಗಳಲ್ಲಿ ಒಬ್ಬರಾದ ಶಿಖರ್ ಧವನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಧವನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯುತ್ತಿದ್ದರೂ ಲೀಗ್ ಕ್ರಿಕೆಟ್‌ನಲ್ಲಿ – ಪ್ರಮುಖವಾಗಿ ಐಪಿಎಲ್‌ನಲ್ಲಿ ಮುಂದುವರಿಯುವ ಸುಳಿವು ನೀಡಿದ್ದಾರೆ. 2022 ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧದ ಏಕದಿನದ ಪಂದ್ಯದಲ್ಲಿ ಭಾರತಕ್ಕಾಗಿ ಕೊನೆಯದಾಗಿ … Continued

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ವೇಳೆ ಕೊಲೆ ಪ್ರಕರಣ ; ಎಫ್‌ಐಆರ್‌ನಲ್ಲಿ ಖ್ಯಾತ ಕ್ರಿಕೆಟರ ಶಕೀಬ್ ಅಲ್ ಹಸನ್ ಹೆಸರು ಉಲ್ಲೇಖ : ವರದಿ

ಆಗಸ್ಟ್ 5 ರಂದು ಬಾಂಗ್ಲಾದೇಶದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಗಾರ್ಮೆಂಟ್ಸ್ ಉದ್ಯೋಗಿಯೊಬ್ಬರನ್ನು ಹತ್ಯೆಗೈದ ಆರೋಪದ ಮೇಲೆ ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ವಿರುದ್ಧ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಢಾಕಾದ ಅಡಾಬೋರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಶಕೀಬ್ ಜೊತೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ 147 ಜನರಲ್ಲಿ … Continued

ವೀಡಿಯೊ..| ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ; ಶಾಕ್‌ ಆದ ಕ್ರಿಕೆಟ್‌ ಪ್ರೇಮಿಗಳು

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಆಪ್ತ ಸ್ನೇಹಿತ ವಿನೋದ್ ಕಾಂಬ್ಳಿ ಅವರು ನಡೆದುಕೊಂಡು ಹೋಗಲಾರದ ಸ್ಥಿತಿಯಲ್ಲಿದ್ದಾರೆಯೇ…? ಅವರು ನಡೆದುಕೊಂಡು ಹೋಗಲು ಸಾಧ್ಯವಾಗದೆ ಪಕ್ಕದಲ್ಲಿದ್ದವರ ಸಹಾಯ ಕೇಳಿದ ವೀಡಿಯೊವೊಂದು ವೈರಲ್‌ ಆಗಿದೆ. ಭಾರತದ ಕ್ರಿಕೆಟ್‌ನಲ್ಲಿ ಅತ್ಯಂತ ಪ್ರತಿಭಾನ್ವಿತ ಎಡಗೈ ಆಟಗಾರರಲ್ಲಿ ಒಬ್ಬರಾಗಿದ್ದ ವಿನೋದ ಕಾಂಬ್ಳಿ ಅವರಿಗೆ ರಸ್ತೆಯಲ್ಲಿ ನಿಲ್ಲಲು ಸಾಧ್ಯವಾಗದೆ ಬೈಕ್‌ನ ಆಸರೆ … Continued