ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ: ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನವದೆಹಲಿ: ಜಾಗತಿಕವಾಗಿ ನಿಷೇಧ ಆಗಿರುವ ಪಾಕಿಸ್ತಾನದ ಭಯೋತ್ಪಾದಕ ಗುಂಪು ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಸದಸ್ಯನಾದ ಸಲ್ಮಾನ್ ರೆಹಮಾನ್ ಖಾನ್ ಎಂಬಾತನನ್ನು ಪೂರ್ವ ಆಫ್ರಿಕಾದ ರುವಾಂಡದಲ್ಲಿ ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. ಈತ ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೇಕಾದ ಶಸ್ತ್ರಾಸ್ತ್ರ ಮದ್ದುಗುಂಡು ಹಾಗೂ ಸ್ಪೋಟಕಗಳನ್ನು ಒದಗಿಸುವಲ್ಲಿ ಸಹಾಯ ಮಾಡಿದ್ದ ಎಂದು ಅಧಿಕಾರಿಗಳು … Continued

ಸ್ನೇಹಿತನನ್ನು ಪ್ರಕರಣದಲ್ಲಿ ಸಿಲುಕಿಸಲು ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿದ್ದ ಅಪ್ರಾಪ್ತ…!

ಮುಂಬೈ: ಸೋಮವಾರದಿಂದ ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಸರಣಿ ಬಾಂಬ್ ಬೆದರಿಕೆಗಳನ್ನು ಹಾಕಿದ್ದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಪ್ರಾಪ್ತ ವಯಸ್ಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಾಂಬ್ ಬೆದರಿಕೆಗಳಿಂದಾಗಿ ಕೆಲವು ವಿಮಾನಗಳನ್ನು ದೂರದ ಕೆನಡಾದ ವಿಮಾನ ನಿಲ್ದಾಣಕ್ಕೂ ತಿರುಗಿಸಲಾಗಿತ್ತು. ಹುಡುಗನು ತನ್ನ ಸ್ನೇಹಿತನೊಬ್ಬನನ್ನು ಬಂಧನಕ್ಕೆ ಒಳಗಾಗುವಂತೆ ಮಾಡಬೇಕು ಎಂದು ಬಯಸಿ ಬಾಂಬ್‌ ಬೆದರಿಕೆಗಳನ್ನು ಹಾಕಿದ್ದ ಎಂದು ಹೇಳಲಾಗಿದೆ ಎಂದು ಪೊಲೀಸರು … Continued

ವಾಲ್ಮೀಕಿ ನಿಗಮ ಹಗರಣ: ಇ. ಡಿ. ವಶಕ್ಕೆ ಆರೋಪಿ ವರ್ಮಾ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್‌ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕು ಎಂದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಆಗಸ್ಟ್‌ 2ರಂದು ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಕಸ್ಟಡಿಗೆ … Continued

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಇ.ಡಿ. ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ … Continued

ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ಮಾಜಿ ಸಚಿವ ಹಾಗೂ ಶಾಸಕ ನಾಗೇಂದ್ರ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರು ಮತ್ತೆ ಪೊಲೀಸ್‌ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಆರೋಪಿ ನಟ ದರ್ಶನ್‌ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಮತ್ತೆ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ಉಳಿದ 11 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳ ಕಸ್ಟಡಿ ಅವಧಿ ಗುರುವಾರ (ಜೂನ್ 20) ಮುಕ್ತಾಯವಾದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ … Continued

ಅತ್ಯಾಚಾರ ಆರೋಪದ ಪ್ರಕರಣ: ಪ್ರಜ್ವಲ್‌ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಳಗ್ಗೆ ಜರ್ಮನಿಯಿಂದ ವಾಪಸ್ಸಾಗುವಾಗ ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದ್ದು, ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಅವರನ್ನು ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ಕಸ್ಟಡಿಗೆ ನೀಡಿದೆ. ಬಂಧಿತ ಪ್ರಜ್ವಲ್‌ ಅವರನ್ನು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ವಿಶೇಷ ಮ್ಯಾಜಿಸ್ಟ್ರೇಟ್‌ ಕೆ.ಎನ್‌. ಶಿವಕುಮಾರ … Continued

ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ನ್ಯಾಯಾಲಯ ಮೇ ೮ರ ವರೆಗೆ ಸಿಐಡಿ ಎಸ್‌ಐಟಿ (ವಿಶೇಷ ತನಿಖಾ ತಂಡದ) ವಶಕ್ಕೆ ನೀಡಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಪುತ್ರ ಹಾಗೂ ಶಾಸಕ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ಹದಿನೇಳನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ ಎಂ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾ ಬಳಿ … Continued

ಹೇಮಂತ್ ಸೊರೇನ್ ಇ.ಡಿ. ವಶಕ್ಕೆ; ಜಾರ್ಖಂಡ್ ನೂತನ ಸಿಎಂ ಆಗಿ ಚಂಪೈ ಸೊರೇನ್ ಆಯ್ಕೆ

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರನ್ನು ಬುಧವಾರ ಸಂಜೆ ಜಾರಿ ನಿರ್ದೇಶನಾಲಯವು ಅವರು ಹುದ್ದೆ ತ್ಯಜಿಸಿದ ಕೆಲವೇ ನಿಮಿಷಗಳಲ್ಲಿ ಕಸ್ಟಡಿಗೆ ತೆಗೆದುಕೊಂಡಿತು.  ಅವರ  ರಾಜೀನಾಮೆ ನಂತರ ಅವರ ಆಪ್ತ ಹಾಗೂ ಪಕ್ಷದ ಹಿರಿಯ ನಾಯಕ ಚಂಪೈ ಸೊರೇನ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಿದ ಕೆಲವೇ ನಿಮಿಷಗಳಲ್ಲಿ ಭೂ ಹಗರಣಕ್ಕೆ … Continued