ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ ; ಓರ್ವ ಸಾವು, ನಾಲ್ವರಿಗೆ ಗಾಯ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗುರುವಾರ ರಾತ್ರಿ ದುರಂತವೊಂದು ಸಂಭವಿಸಿದೆ. ಮೈಸೂರು ಅರಮನೆಯ  ಬಳಿ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವ ಸಿಲಿಂಡರ್ ಸ್ಫೋಟಗೊಂಡು, ಬಲೂನ್ ವ್ಯಾಪಾರಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ರಾತ್ರಿ ಸುಮಾರು 8:30ರ ವೇಳೆಗೆ ಈ ಘಟನೆ ನಡೆದಿದೆ. ಕ್ರಿಸ್‌ಮಸ್ ರಜೆ ಹಿನ್ನೆಲೆಯಲ್ಲಿ … Continued

ಹುಬ್ಬಳ್ಳಿ | ಮಲಗಿದ್ದಾಗ ಸಿಲಿಂಡರ್ ಸ್ಫೋಟ: 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಗಂಭೀರ ಗಾಯ

ಹುಬ್ಬಳ್ಳಿ: ಅನಿಲ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟು ಹೋಗಿದ್ದು, 58 … Continued

ಬೆಂಗಳೂರು : ಮನೆಯಲ್ಲಿ ಸಿಲಿಂಡರ್ ಸ್ಫೋಟ ; 8 ಮಂದಿಗೆ ಗಾಯ, ಐದು ಮನೆಗಳಿಗೆ ಹಾನಿ

ಬೆಂಗಳೂರು : ಬೆಂಗಳೂರಿನ ಯಲಹಂಕದ ಎಲ್‌ಬಿಎಸ್‌ನಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ. ಸಿಲಿಂಡರ್ ಸ್ಫೋಟದಿಂದಾಗಿ ಒಬ್ಬರಿಗೆ 60% ರಷ್ಟು ಸುಟ್ಟಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತೀವ್ರವಾಗಿ ಗಾಯಗೊಂಡ ಅಫರ್ವಾಜ್, ಸಲ್ಮಾ, ಶಾಹಿದ್, ಫಸಿಯಾ, ಅಸ್ಮಾ ಎಂಬವರನ್ನು … Continued

ಬೆಂಗಳೂರು:ದೇವರಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್​​ನಲ್ಲಿ ಬೆಂಕಿ ಅನಾಹುತ, ಇಬ್ಬರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮತ್ತೊಂದು ಅವಘಡ ನಡೆದಿದೆ. ಬೆಂಗಳೂರು ನಗರದ ದೇವರಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.  210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ ಎನ್ನಲಾಗಿದೆ. ಅಪಾರ್ಟ್ಮೆಂಟ್‍ ಒಳಗೆ … Continued