ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಂಪ್ಯ ಬೈಲಾಡಿ ನಿವಾಸಿ ಪುತ್ರಿ ನಿಶಾ (17) ಎಂಬವರು ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ ಒಂದು ವಾರದ ಹಿಂದೆ ವಿಷ ಸೇವಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ … Continued

ಬಿಗ್‌ಬಾಸ್‌ ಖ್ಯಾತಿಯ ‘ಕಲ್ಲೇಗ ಟೈಗರ್ಸ್‌’ ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ

ಮಂಗಳೂರು : ಕಳೆದ ಬಿಗ್‌ ಬಾಸ್ ಸೀಸನ್‌ನಲ್ಲಿ‌ ಹುಲಿ ಕುಣಿತ ಮಾಡಿ ಗಮನ ಸೆಳೆದಿದ್ದ ಪುತ್ತೂರಿನ ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ ಕಲ್ಲೇಗ (24) ಅವರನ್ನು ಬರ್ಬರ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅವರನ್ನು … Continued

ವಿದೇಶದಿಂದಲೇ ವಾಟ್ಸಾಪ್‌ನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ…!

ಮಂಗಳೂರು : ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಾಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಯನಗರದ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಶೀದ್‌ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಈತ … Continued

ಕೋಮು ಸಂಘರ್ಷದಲ್ಲಿ ಸಾವಿಗೀಡಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಸರ್ಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಮಂದಿ ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಈ ಸಂಬಂಧ ಶುಕ್ರವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ … Continued

ಸುಳ್ಯ : ತಡೆಗೋಡೆ ನಿರ್ಮಾಣ ವೇಳೆ ಗುಡ್ಡದ ಮಣ್ಣು ಕುಸಿತ ; ಮೂವರು ಕಾರ್ಮಿಕರು ಸಾವು

ಮಂಗಳೂರು : ತಡೆಗೋಡೆ ಕಾಮಗಾರಿ ಕಾಂಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ಸಂಭವಿಸಿದೆ. ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಶನಿವಾರ ಮಧ್ಯಾಹ್ನದ ವೇಳೆಗೆ ಈ ದುರಂತ ನಡೆದಿದೆ. ಮೃತರನ್ನು ಸೋಮಶೇಖರ ರೆಡ್ಡಿ (45), ಪತ್ನಿ ಶಾಂತಕ್ಕ (40) … Continued

ಬಂಟ್ವಾಳ: ವಿವಿಧೆಡೆ ಎನ್ಐಎ ದಾಳಿ

ಮಂಗಳೂರು: ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ನೆರವು ನೀಡಿದವರ ಪತ್ತೆ ಹಚ್ಚುವ ಸಲುವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿವಿಧೆಡೆ ಸೋಮವಾರ ಶೋಧ ನಡೆಸುತ್ತಿದೆ. ಬಂಟ್ವಾಳದ ನಂದಾವರದಲ್ಲಿ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ … Continued

ಕಡಬ: ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ

ಮಂಗಳೂರು : ಕಳೆದ ಸೋಮವಾರ ಬೆಳಿಗ್ಗೆ ಇಬ್ಬರನ್ನು ಸಾಯಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕಾರ್ಯಾಚರಣೆ ತಂಡ ಗುರುವಾರ ಸಂಜೆ ವೇಳೆ ಯಶಸ್ವಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಭಾಗದಲ್ಲಿ ನಾಲ್ಕು ಕಾಡಾನೆಗಳಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ತಕ್ಷಣವೇ ಕಾರ್ಯಚರಣೆಗೆ ಇಳಿದ ತಂಡ ಸುಂಕದಕಟ್ಟೆ ಬಳಿಯ ಕೊಂಬಾರು ಗ್ರಾಮದ ಮಂಡೆಕರ ಅರಣ್ಯ ಪ್ರದೇಶದಲ್ಲಿ … Continued

ಕಡಬ: ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಸಾವು

ಮಂಗಳೂರು: ಇಂದು, ಸೋಮವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಯಿಂದ ಯುವತಿ ಸೇರಿ ಇಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರೆಂಜಿಲಾಡಿ ಗ್ರಾಮದ ಬಳಿ ನೈಲ ಎಂಬಲ್ಲಿ ನಡೆದ ವರದಿಯಾಗಿದೆ. ಇಂದು, ಸೋಮವಾರ ಬೆಳಿಗ್ಗೆ 6:30ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೋಮವಾರ ಮನೆಯಿಂದ ಹಾಲು ಡೈರಿಗೆ … Continued

ಕಲುಷಿತ ಆಹಾರ ಸೇವನೆ: ಅಸ್ವಸ್ಥಗೊಂಡ ಮಂಗಳೂರು ನರ್ಸಿಂಗ್ ಕಾಲೇಜಿನ 173 ವಿದ್ಯಾರ್ಥಿನಿಯರು

ಮಂಗಳೂರು : ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಕ್ತಿನಗರದ ಹಾಸ್ಟೆಲ್‌’ನಲ್ಲಿ ಸೋಮವಾರ ನಡೆದ ವರದಿಯಾಗಿದೆ. ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ಸೇವಿಸಿದ್ದ ಹಾಸ್ಟೆಲ್’ನ ಆಹಾರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಸುರಕ್ಷತಾ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್‌’ನ … Continued

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಬಜರಂಗದಳ ಮುಖಂಡನ ಶವ ಪತ್ತೆ

ಮಂಗಳೂರು : ನೇತ್ರಾವತಿ ನದಿಯಲ್ಲಿ ಬಜರಂಗದಳದ ಮುಖಂಡನೊಬ್ಬನ ಮೃತದೇಹ ಪತ್ತೆಯಾಗಿದ್ದು, ಸದ್ಯ ಸಾವಿನ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಬಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ ರಾಜೇಶ್ ಪೂಜಾರಿ (26) ಎಂಬವರ ಮೃತದೇಹ ಪತ್ತೆಯಾಗಿದೆ. ಹಿಂದುಪರ ಸಂಘಟನೆಗಳ … Continued