ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ನಿಧನ

ಮಂಗಳೂರು : ಕರ್ಣಾಟಕ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪೊಳಲಿ ಜಯರಾಮ ಭಟ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇಂದು ಬುಧವಾರ ಮುಂಬೈನಿಂದ ವಿಮಾನದಲ್ಲಿ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಸಂದರ್ಭದಲ್ಲಿ ಅವರು ಹಠಾತ್‌ ಹೃದಯಾಘಾತಕ್ಕೆ ಒಳಗಾದರು.. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ … Continued

ಬಳ್ಪ: ಹೊಳೆಯಲ್ಲಿ ಮುಳುಗಿ ಬಾಲಕಯರಿಬ್ಬರು ಸಾವು

ಮಂಗಳೂರು: ಇಬ್ಬರು ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ನೀರುಪಾಲಾದ ಘಟನೆ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಮೃತರನ್ನು ಬೆಂಗಳೂರಿನ ಸತೀಶ ಅಮ್ಮಣ್ಣಾಯ ಅವರ ಪುತ್ರಿಯರಾದ   ಆವಂತಿಕಾ (16) ಹಾಗೂ ಅಂಕಿತಾ (13) ಎಂದು ಗುರುತಿಸಲಾಗಿದೆ. ಇಬ್ಬರ ಮೃತದೇಹಗಳನ್ನು ಅಗ್ನಿಶಾಮಕ ದಳದ … Continued

ಕಾರು- ತೂಫಾನ್ ನಡುವೆ ಡಿಕ್ಕಿ; ಮಗು ಸೇರಿ ನಾಲ್ವರು ಸಾವು

ಮಂಗಳೂರು: ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಕಾರು ಬೇಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ … Continued

ಸುಳ್ಯ: ರಾಜಕೀಯ ನಿವೃತ್ತಿ ಹಿಂಪಡೆದ ಶಾಸಕ ಎಸ್.ಅಂಗಾರ ; ಬಿಜೆಪಿ ಅಭ್ಯರ್ಥಿ ಪರ ಪ್ರಚಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ನಂತರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಸುಳ್ಯ ಶಾಸಕ ಎಸ್. ಅಂಗಾರ ಅವರು ಈಗ ತಮ್ಮ ನಿರ್ಧಾರ ಬದಲಾಯಿಸಿದ್ದಾರೆ. ಸಚಿವ ಎಸ್​. ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಣೆಯನ್ನು ಹಿಂಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತವಾದ … Continued

ಸುಳ್ಯ: ಕೈ ತಪ್ಪಿದ ಟಿಕೆಟ್, ಬಿಜೆಪಿಯ ಎಸ್. ಅಂಗಾರ ಸಕ್ರಿಯ ರಾಜಕಾರಣಕ್ಕೆ ಗುಡ್‌ ಬೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಸಚಿವ ಎಸ್. ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಪಕ್ಷವು … Continued

ಫೆಬ್ರವರಿ 11 ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಬೆಂಗಳೂರು: ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ರಾಜ್ಯಕ್ಕೆ ಕರೆಸಿಕೊಳ್ಳುತ್ತಿದೆ. ರಾಜ್ಯಕ್ಕೆ ಭೇಟಿ ನೀಡಿ 15 ದಿನ ಕಳೆದ ನಂತರ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿರುವ ಅಮಿತ್ ಶಾ ಅವರು ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಪುತ್ತೂರಿನಲ್ಲಿ ನಡೆಯಲಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ : ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿ ಸೀಜ್‌ ಮಾಡಲು ಕ್ರಮ ಕೈಗೊಳ್ತೇವೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಆಸ್ತಿ ಸೀಜ್ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಾರಿಯಾದ ಆರೋಪಿಗಳನ್ನು ಪತ್ತೆಹಚ್ಚಲು ಕೋರ್ಟ್‌ ಮುಖಾಂತರ ವಾರೆಂಟ್‌ ಪಡೆದು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳುತ್ತೇವೆ. … Continued

ಬಿಜೆಪಿ ಯುವ ಮುಖಂಡನ ಹತ್ಯೆ: ಇಂದು ದಕ್ಷಿಣ ಕನ್ನಡ ಮೂರು ತಾಲೂಕುಗಳಲ್ಲಿ ಬಂದ್‌ಗೆ ಕರೆ

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ(32) ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದು  ಸಂಘಟನೆಗಳು ಬುಧವಾರ ಸುಳ್ಯ, ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಕರೆ … Continued

ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬಿಜೆಪಿ ಯುವ ಮೋರ್ಚಾ ಮುಖಂಡನ ಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ಮಾಲಕನ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತ ಘಟನೆ ಮಂಗಳವಾರ ನಡೆದಿದೆ. ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಹಾಗೂ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ (29) ಎಂಬವರು ಮೃತಪಟ್ಟವರು. … Continued

ಕಡಬ :’ಪಾಂಡವರ ಗುಹೆ’ಯಲ್ಲಿ ಶಿಲಾಯುಗದ ಸಮಾಧಿ ಸ್ಥಳ’ ಪತ್ತೆ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ಪ್ಲಾಂಟೇಶನ್‌ನಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆಯಾಗಿದೆ. ಗ್ರಾಮಸ್ಥರು ನೀಡಿದ ಮಾಹಿತಿಯ ಆಧಾರದ ಮೇಲೆ, ತಜ್ಞರ ತಂಡವು ‘ಪಾಂಡವರ ಗುಹೆ’ ಎಂದು ಕರೆಯಲ್ಪಡುವ ಸ್ಥಳಕ್ಕೆ ಭೇಟಿ ನೀಡಿತು ಮತ್ತು ಕೆಲವು ಚಕಿತಗೊಳಿಸುವ ಲಕ್ಷಣಗಳನ್ನ ಹೊಂದಿರುವ ಬೃಹತ್ ಶಿಲಾಯುಗದ ಸ್ಥಳವನ್ನ … Continued