ಕ್ರೈಸ್ತ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರು ಪರಿಶಿಷ್ಟ ಜಾತಿಯ ಸ್ಥಾನಮಾನ ಪಡೆಯಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್‌ಗೆ ಕೇಂದ್ರ

ನವದೆಹಲಿ: ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟ ಜಾತಿಯವರು ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಗಳೆಂದು ಪರಿಗಣಿಸಲು ಅರ್ಹರಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟರನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವ ಮನವಿಯನ್ನು ವಿರೋಧಿಸಿ ಕೇಂದ್ರವು ಬುಧವಾರ ಅಫಿಡವಿಟ್ ಸಲ್ಲಿಸಿದೆ. ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮದ ದಲಿತರನ್ನು ಪರಿಶಿಷ್ಟರು … Continued