ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. … Continued

ದಾಂಡೇಲಿ : ಕಾಳಿ ನದಿಯಲ್ಲಿ ವ್ಯಕ್ತಿ ಮೇಲೆ ಮೊಸಳೆ ದಾಳಿ ; ಗಂಭೀರ ಗಾಯ

ಕಾರವಾರ : ಕಾಳಿನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಹೇಳಲಾಗಿದೆ. ಶೌಚಕ್ಕೆ ಕಾಳಿ ನದಿಗೆ ಹೋದಾಗ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ … Continued

ಧಾರವಾಡದಿಂದ ಕಿಡ್ನ್ಯಾಪ್‌ ಆಗಿದ್ದ ಮಕ್ಕಳು ದಾಂಡೇಲಿ ಬಳಿ ಪತ್ತೆ ; ಸಿಕ್ಕಿಬಿದ್ದ ವ್ಯಕ್ತಿ…

ಧಾರವಾಡ: ಧಾರವಾಡದ ಕಮಲಾಪುರ ಶಾಲೆಯಿಂದ ಕಿಡ್ನ್ಯಾಪ್‌ ಆಗಿದ್ದ ಇಬ್ಬರು ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಹಾಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಕಮಲಾಪುರ ಸರ್ಕಾರಿ ಶಾಲೆಯ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಒಬ್ಬ ಬಾಲಕ ಮತ್ತು ಒಬ್ಬಳು ಬಾಲಕಿಯನ್ನು ಸೋಮವಾರ … Continued

ದಾಂಡೇಲಿ : ಗಣೇಶಗುಡಿ ಬಳಿ ಕಂಡುಬಂದ ಅಪರೂಪದ ʼಪಟ್ಟೆ ಕತ್ತೆಕಿರುಬʼ…!

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಅಭಯಾರಣ್ಯದ ಪ್ರದೇಶವಾದ ಗಣೇಶಗುಡಿ ಸೇತುವೆಯ ಬಳಿ ಸ್ಥಳೀಯವಾಗಿ “ಕತ್ತೆ ಕಿರುಬ” (striped hyena) ಎಂದು ಕರೆಯಲ್ಪಡುವ ಅಪರೂಪದ ಪಟ್ಟೆ ಕತ್ತೆ ಕಿರುಬ ಪತ್ತೆಯಾಗಿದೆ. ಬುಧವಾರ ಬೆಳಗಿನ ಜಾವ ಸ್ಥಳೀಯ ನಿವಾಸಿಯೊಬ್ಬರು ವೀಡಿಯೊದಲ್ಲಿ ಸೆರೆಹಿಡಿದ ಪ್ರಾಣಿಯು, ಈ ಹಚ್ಚ ಹಸಿರಿನ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮೊದಲ ದಾಖಲಿತ … Continued

ದಾಂಡೇಲಿ | ಟ್ರ್ಯಾಕ್ಟರ್‌-ಸ್ಕೂಟಿ ಡಿಕ್ಕಿ ; ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಗಂಭೀರ ಗಾಯ

ಕಾರವಾರ: ಮಂಗಳವಾರ ಬೆಳಿಗ್ಗೆ ಸಂಭವಿಸಿದ ಟ್ರ್ಯಾಕ್ಟರ್‌-ಸ್ಕೂಟರ್‌ ಮುಖಾಮುಖು ಡಿಕ್ಕಿಯಲ್ಲಿ ದಾಂಡೇಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಸ್ಥಳೀಯ ನಗರ ಸಭೆ ಹಾಲಿ ಸದಸ್ಯ ಮೋಹನ ಹಲವಾಯಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಗರದ ಮುಖ್ಯ ಅಂಚೆ ಕಚೇರಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಪ್ರಾಥಮಿಕ ವರದಿಗಳ … Continued

ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued

ಭಾರಿ ಮಳೆ ಮುನ್ಸೂಚನೆ; ಉತ್ತರ ಕನ್ನಡ ಜಿಲ್ಲೆಯ 2 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.26) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿ ಈ ನಾಲ್ಕು ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ … Continued

ದಾಂಡೇಲಿ | ವೃದ್ಧೆ ಮೇಲೆ ಅತ್ಯಾಚಾರ ಪ್ರಕರಣ ; ಪರಾರಿಯಾಗಿದ್ದ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರ ವ್ಯಾಪ್ತಿಯಲ್ಲಿ 60 ವರ್ಷದ ವೃದ್ಧೆಯ ಮೇಲೆ ನಡೆದ ಅತ್ಯಾಚಾರ ಹಾಗೂ ದರೋಡೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಾತನನ್ನು ಬಂಧಿಸಲಾಗಿದೆ ಎಂದು … Continued

ಉಚಿತ ಯೋಜನೆಗಳು ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು; ಕಾಂಗ್ರೆಸ್‌ ನಾಯಕ ಆರ್​ವಿ ದೇಶಪಾಂಡೆ

ದಾಂಡೇಲಿ: ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.​​ವಿ. ದೇಶಪಾಂಡೆ ಕೂಡ ಉಚಿತ ಯೋಜನೆಗಳು ಅಪಾಯಕಾರಿ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ … Continued