ನಟ ದರ್ಶನಗೆ ಮಧ್ಯಂತರ ಜಾಮೀನು: ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು…?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನಗೆ ಎಂಟು ಷರತ್ತುಗಳನ್ನು ವಿಧಿಸಿ ಕರ್ನಾಟಕ ಹೈಕೋರ್ಟ್‌ ಬುಧವಾರ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಆಮ್‌ ಆದ್ಮಿ ಪಕ್ಷದ ಮುಖಂಡ ಸತ್ಯೇಂದರ್‌ ಕುಮಾರ್‌ ಜೈನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜನರು ತಮ್ಮ ಖರ್ಚಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು … Continued

ಆರೋಪಿ ನಟ ದರ್ಶನ್ ಸೆಲ್‌ಗೆ ಟಿವಿ ಅಳವಡಿಕೆ

ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನಗೆ ಟಿವಿ ನೀಡಲಾಗಿದೆ. ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಕೆ ಮಾಡಿದ್ದಾರೆ. ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ..?

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ನಂತರ ಚಿಕ್ಕಣ್ಣ ಅವರು ದರ್ಶನ್ ಅವರನ್ನು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರಿಗೆ 12 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಪ್ರಮುಖ ಆರೋಪಿ ನಟ ದರ್ಶನ್‌ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆರೋಪಿಗಳಾದ ದರ್ಶನ್‌, ವಿನಯ, ಪ್ರದೂಷ್‌, ಧನರಾಜ ಕಸ್ಟಡಿ ಅವಧಿ ಶನಿವಾರ ಮುಗಿದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರು ಮತ್ತೆ ಪೊಲೀಸ್‌ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಆರೋಪಿ ನಟ ದರ್ಶನ್‌ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಮತ್ತೆ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ಉಳಿದ 11 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳ ಕಸ್ಟಡಿ ಅವಧಿ ಗುರುವಾರ (ಜೂನ್ 20) ಮುಕ್ತಾಯವಾದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ … Continued

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಂದು, ಮಂಗಳವಾರ ಬೆಳಗ್ಗೆ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ನಟ ದರ್ಶನ್‌ … Continued

ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ ; ವಿಚಾರಣೆಗೆ ಹಾಜರಾದ ನಟ ದರ್ಶನ್

ಬೆಂಗಳೂರು: ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ಬುಧವಾರ ನಟ ದರ್ಶನ್​ ಅವರು ರಾಜರಾಜೇಶ್ವರಿ​ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ ನಡೆಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದರ್ಶನ ವಿರುದ್ಧವೂ ದೂರು ದಾಖಲಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ … Continued

ಇಂದ್ರಜಿತ್‌ ಲಂಕೇಶ್‌ ದೂರು: ತನಿಖೆಗೆ ಮೈಸೂರು ಪೊಲೀಸ್‌ ಆಯುಕ್ತರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ನೀಡಿದ ದೂರನ್ನು ಆಧರಿಸಿ ತನಿಖೆ ಸೂಚಿಸಿದ್ದು, ಮೈಸೂರು ಪೊಲೀಸ್‌ ಆಯುಕ್ತರಿಗೆ ಈ ಕುರಿತು ಮಾಹಿತಿ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ … Continued