ದಾವಣಗೆರೆ | ಲೋನ್ ಅರ್ಜಿ ತಿರಸ್ಕರಿಸಿದ್ದಕ್ಕೆ ಬ್ಯಾಂಕ್ ಅನ್ನೇ ದರೋಡೆ ಮಾಡಿದರು….!

ದಾವಣಗೆರೆ : ನ್ಯಾಮತಿಯ ಬ್ಯಾಂಕೊಂದರಲ್ಲಿ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಆರೋಪಿಗಳು ಬ್ಯಾಂಕ್ ದರೋಡೆ ಮಾಡಿದ್ದರು. ಆದರೆ ಯಾವುದೇ ಸುಳಿವು ಸಿಕ್ಕಿರಲಲಿಲ್ಲ. ಆರು ತಿಂಗಳ ಬಳಿಕ ಉಮಾ ಪ್ರಶಾಂತ ನೇತೃತ್ವದಲ್ಲಿನ ಪೊಲೀಸರ ತಂಡ ಪ್ರಕರಣವನ್ನು ಬೇಧಿಸಿದೆ. ಎಲ್ಲಾ … Continued

ಚನ್ನಗಿರಿ | ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ನೀರು ಪಾಲು

ದಾವಣಗೆರೆ:  ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ ಮೃತರನ್ನು ದೀಪಾ(28), ದಿವ್ಯಾ (26) ಹಾಗೂ ಚಂದನಾ(19) ಎಂದು ಹೇಳಲಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವಘಡ ಸಂಭವಿಸಿದೆ. ಚನ್ನಗಿರಿ … Continued

ಮಾಜಿ ಸಚಿವ ಬಿ.ಸಿ. ಪಾಟೀಲ ಅಳಿಯ ಆತ್ಮಹತ್ಯೆ

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ ಅವರ ಅಳಿಯ ಕೆ.ಜಿ. ಪ್ರತಾಪಕುಮಾರ ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಹಿರೆಕೆರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅವರು ಹೊನ್ನಾಳಿ ಬಳಿಯ ಅರಕೆರೆ ಗ್ರಾಮದ ಬಳಿ ರಸ್ತೆ ಸಮೀಪ … Continued

ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ಉಸಿರಾಟ ಹಾಗೂ … Continued

ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

ಹುಬ್ಬಳ್ಳಿ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಅಂಬಿಗೇರ (20) ಎಂಬ ಯುವತಿ ಹತ್ಯೆ ಆರೋಪಿಯನ್ನು ಗುರುವಾರ ತಡರಾತ್ರಿ ಪೊಲೀಸರು ದಾವಣಗೆರೆ ಬಳಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕೊಲೆ ಆರೋಪಿ ಆಟೋ ಚಾಲಕ ಗಿರೀಶ (ವಿಶ್ವ) ಸಾವಂತ (21) ಎಂಬಾತನನ್ನು ದಾವಣಗೆರೆ ಬಳಿ ರೈಲ್ವೇ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ. ರೈಲಿನಿಂದ ಜಿಗಿದು ಗಾಯಗೊಂಡಿದ್ದ ಆರೋಪಿಯನ್ನು … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಸಿಡಲಿಗೆ ಓರ್ವ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಲವೆಡೆ ಜಾನುವಾರುಗಳು ಪ್ರಾಣಕಳೆದುಕೊಂಡಿದೆ. ಅಲ್ಲದೆ, ಗಾಳಿಮಳೆಯಿಂದಾಗಿ ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ ಸ್ಮಾರಕಕ್ಕೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಸಂಜೆ ಗುಡುಗು-ಸಿಡಿಲ ಅಬ್ಬರದೊಂದಿಗೆ ಭಾರೀ ಗಾಳಿ ಮಳೆ ಸುರಿದಿದೆ. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ … Continued

ಪ್ರಚೋದನಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ದಾವಣಗೆರೆಯ ಬಡಾವಣೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಕೆ.ಎಸ್. ಈಶ್ವರಪ್ಪ ಅವರು ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ … Continued

ಬೊಲೆರೊ ವಾಹನ ಪಲ್ಟಿ: ಮೂವರು ಸಾವು

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಗ್ರಾಮದ ಬಳಿ ಬೊಲೆರೊ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ ಹಾಗೂ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶಿವಮೊಗ್ಗ-ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಚಂದನಕೆರೆ ಗ್ರಾಮದ ಮಂಜುನಾಥ (45), ನಾಗರಾಜ (39) ಶಿವಮೊಗ್ಗ ಆಸ್ಪತ್ರೆಯಲ್ಲಿ … Continued

ದಾವಣಗೆರೆ : ಖಾಸಗಿ ಕ್ಷಣದ ವೀಡಿಯೊ ವೈರಲ್ ; ಮನನೊಂದು ವಿದ್ಯಾರ್ಥಿಗಳಿಬ್ಬರ ಆತ್ಮಹತ್ಯೆ

ದಾವಣಗೆರೆ: ವಿದ್ಯಾರ್ಥಿಗಳಿಬ್ಬರ ಖಾಸಗಿ ಕ್ಷಣಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಮನನೊಂದ ವಿದ್ಯಾರ್ಥಿಗಳಿಬ್ಬರು ಸಾವಿನ ಹಿಡಿದ ಘಟನೆ ದಾವಣಗೆರೆಯಲ್ಲಿ ನಡೆದ ವರದಿಯಾಗಿದೆ. ಮೃತರನ್ನು ಆಲೂರಟ್ಟಿ ತಾಂಡಾದ ರತನ್ (20) ಮತ್ತು ಜಗಳೂರು ತಾಲೂಕಿನ ಗ್ರಾಮವೊಂದರ ಯುವತಿ ಎಂದು ಹೇಳಲಾಗಿದೆ. ಇಬ್ಬರೂ ದಾವಣಗೆರೆಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಾಗಿದ್ದರು ಹಾಗೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. … Continued