ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವ ನನಗೆ ಬೇಡ : ಸಿಎಂ, ಡಿಸಿಎಂಗೆ ಅಕ್ಕಯ್ ಪದ್ಮಶಾಲಿ ಪತ್ರ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವದಿಂದ ತಮ್ಮನ್ನು ಕೈಬಿಡುವಂತೆ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಮಾಡಿದ್ದಾರೆ. “ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ … Continued

ಡಿಸಿಇಟಿ ಪರೀಕ್ಷೆ :ಗೊಂದಲಕ್ಕೆ ಡಿಸಿಎಂ ಸ್ಪಷ್ಟನೆ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಾದ ಎಂಜಿನಿಯರಿಂಗ್(ಲ್ಯಾಟರಲ್ ಪ್ರವೇಶಾತಿ ಸೇರಿದಂತೆ ಡಿಸಿಇಟಿ) ಮೆಡಿಕಲ್ ಅಗ್ರಿಕಲ್ಚರಲ್, ನರ್ಸಿಂಗ್, ಪ್ಯಾರಾಮೆಡಿಕಲ್, ಫಾರ್ಮಸಿ ಮುಂತಾದ ಕೋರ್ಸ್‍ಗಳಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ದತ್ತಾಂಶವನ್ನು ಕೆಇಎಯಿಂದ ಪಡೆಯಬೇಕೆಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸೂಚಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮೂಲಕ ವಿವರ ನೀಡಿರುವ ಅವರು, ಜುಲೈ, ಆಗಸ್ಟ್ 2021ರಲ್ಲಿ ನಡೆಯುವ ಡಿಸಿಇಟಿ ಪರೀಕ್ಷೆಯ … Continued

ನಾಯಕತ್ವ ಬದಲಾವಣೆ: ಊಹಾಪೋಹಕ್ಕೆ ತೆರೆ ಎಳೆದ ಡಿಸಿಎಂ

ನವ ದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಕೇಂದ್ರ ಸಚಿವರಾದ ಸದಾನಂದಗೌಡರು ನನ್ನ ಮೇಲಿನ ಪ್ರೀತಿಯಿಂದಾಗಿ, ನಾನು ಮುಖ್ಯಮಂತ್ರಿಯಾಗಲಿ ಎಂದು ಹೇಳಿರಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸದಾನಂದಗೌಡರು ಉದ್ದೇಶಪೂರ್ವಕವಾಗಿ ಹೇಳಿದ್ದಲ್ಲ, ಆಕಸ್ಮಿಕವಾಗಿ ಆ ಮಾತನ್ನು ಹೇಳಿದ್ದಾರೆ. … Continued

ಡಿಪ್ಲೊಮಾ ಪಠ್ಯ ಕ್ರಮದಲ್ಲಿ ಆಮೂಲಾಗ್ರ ಪರಿಷ್ಕರಣೆ

ಮಂಗಳೂರು: ಶಿಕ್ಷಣ ಕ್ಷೇತ್ರವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಅನೇಕ ಕ್ರಾಂತಿಕಾರಕ ಸುಧಾರಣೆಗಳನ್ನು ರಾಜ್ಯ ಸರಕಾರ ಕೈಗೊಂಡಿದ್ದು, ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಮಂಗಳೂರಿನಲ್ಲಿಂದು ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ʼಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌, ರೀಸರ್ಚ್‌ ಡಿಸೈನ್‌ ಲ್ಯಾಬ್‌ ಮತ್ತು ಇಂಡಸ್ಟ್ರೀ … Continued

ಡಿಸಿಎಂ ದಿಢೀರ್‌ ದೆಹಲಿ ಭೇಟಿ ತಂದ ಕುತೂಹಲ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ದಿಢೀರನೆ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ವರಿಷ್ಠರ ಸೂಚನೆಯಂತೆ ಶನಿವಾರ ಬೆಳಗ್ಗೆ ನವದೆಹಲಿಗೆ ತೆರಳಿರುವ ಅವರು ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲೇ ಉಳಿಯಲಿದ್ದು, ಪಕ್ಷದ ಕೆಲವು ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಯಾವ ಕಾರಣಕ್ಕಾಗಿ ಅವರು ದೆಹಲಿಗೆ ತೆರಳಿದ್ದಾರೆ ಎಂಬುದು ಖಚಿತಪಟ್ಟಿಲ್ಲ. … Continued

ಯುಜಿಸಿ ಹಿಂಬಾಕಿ ಪಾವತಿ ಬೇಡಿಕೆ ಶೀಘ್ರವೇ ಈಡೇರಿಕೆ

ಬೆಂಗಳೂರು:ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಮತೆ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರದ ಪಾಲು ತುಂಬಿಲ್ಲ. ತಕ್ಷಣ ತುಂಬಲಾಗುವುದು. 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಹಣಕಾಸು … Continued