ಅಮೆರಿಕ | ಪತ್ನಿ, 3 ಸಂಬಂಧಿಕರನ್ನು ಗುಂಡಿಟ್ಟು ಕೊಂದ ಭಾರತೀಯ ಮೂಲದ ವ್ಯಕ್ತಿ ; ಕಪಾಟಿನಲ್ಲಿ ಅಡಗಿ ಪಾರಾದ ಮಕ್ಕಳು

ವಾಷಿಂಗ್ಟನ್/ಅಟ್ಲಾಂಟಾ: ಅಮೆರಿಕದ ಜಾರ್ಜಿಯಾ ರಾಜ್ಯದ ಲಾರೆನ್ಸ್‌ವಿಲ್ಲೆ ನಗರದಲ್ಲಿ ನಡೆದ ಭೀಕರ ಗುಂಡಿನ ದಾಳಿಗೆ ಭಾರತೀಯ ಮೂಲದ ಮಹಿಳೆ ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಹತ್ಯಾಕಾಂಡ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಕಾಲಮಾನ ಶುಕ್ರವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಘಟನೆ ನಡೆದಿದೆ. ಅಟ್ಲಾಂಟಾ ಸಮೀಪದ ಲಾರೆನ್ಸ್‌ವಿಲ್ಲೆ ನಗರದ ಮನೆಯೊಂದರಲ್ಲಿ ಗುಂಡು … Continued

ಲಡಾಖಿಗೆ ರಾಜ್ಯ ಸ್ಥಾನಮಾನಕ್ಕೆ ಒತ್ತಾಯ ; ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಲಡಾಖ್‌ಗೆ ರಾಜ್ಯಸ್ಥಾನ ಮಾನ ಕೋರಿ ಲೇಹ್ ಅಪೆಕ್ಸ್ ಬಾಡಿ (LAB) ನಡೆಸುತ್ತಿದ್ದ ಪ್ರತಿಭಟನೆ ಬುಧವಾರ ಹಿಂಸಾತ್ಮಕ ರೂಪಕ್ಕೆ ತಿರುಗಿತು. ಪ್ರತಿಭಟನಾಕಾರರು ನಗರದಲ್ಲಿ ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದರು. ಕೇಂದ್ರ ಸರ್ಕಾರ ಮತ್ತು ಸ್ಥಳೀಯ ಆಡಳಿತವು ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ನಡೆಸಿದ ಪ್ರತಿಭಟನೆ ಘರ್ಷಣೆಗೆ ತಿರುಗಿತು. ಪ್ರತಿಭಟನಾಕಾರರು … Continued

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ : 13 ಕಾರ್ಮಿಕರ ಸಾವು ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಪಾಲನಪುರ: ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಮಂಗಳವಾರ ಪಟಾಕಿ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಸಂಭವಿಸಿದ ಸ್ಫೋಟದಲ್ಲಿ ಕಟ್ಟಡ ಕುಸಿದು ಕನಿಷ್ಠ 13 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೀಸಾ ಪಟ್ಟಣದ ಬಳಿ ಇರುವ ಘಟಕದಲ್ಲಿ ಈ ಘಟನೆ ನಡೆದಿದೆ. “ಮಂಗಳವಾರ ಬೆಳಿಗ್ಗೆ 9: 45 ರ ಸುಮಾರಿಗೆ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ, ಇದರಿಂದಾಗಿ … Continued

ಅಂಗಡಿಯೊಳಗೆ ಗುಂಡಿನ ದಾಳಿ ; ಭಾರತದ ಮೂಲದ ತಂದೆ-ಮಗಳು ಸಾವು

ನವದೆಹಲಿ:  24 ವರ್ಷದ ಭಾರತೀಯ ಯುವತಿ ಮತ್ತು ಆಕೆಯ 56 ವರ್ಷದ ತಂದೆಯನ್ನು ಅಮೆರಿಕದ ವರ್ಜೀನಿಯಾದಲ್ಲಿ ಅವರು ಕೆಲಸ ಮಾಡುತ್ತಿದ್ದ ಅಂಗಡಿಯೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಕೋಮಾಕ್ ಕೌಂಟಿಯಲ್ಲಿ ಅಂಗಡಿ ತೆರೆದ ಸ್ವಲ್ಪ ಸಮಯದ ನಂತರ ಗುರುವಾರ ಈ ಘಟನೆ ನಡೆದಿದೆ. ಜೋಡಿ ಕೊಲೆಗೆ ಸಂಬಂಧಿಸಿದಂತೆ ಜಾರ್ಜ್ ಫ್ರೇಜಿಯರ್ ಡೆವೊನ್ ವಾರ್ಟನ್ (44) ಎಂಬಾತನನ್ನು ಪೊಲೀಸರು … Continued

ವೀಡಿಯೊ…| ಎರಡು ಬಿಎಂಟಿಸಿ ಬಸ್​ ಮಧ್ಯೆ ಸಿಲುಕಿ ಆಟೋ ಅಪ್ಪಚ್ಚಿ ; ಅಪಘಾತದಲ್ಲಿ ಇಬ್ಬರು ಸಾವು

ಬೆಂಗಳೂರು: ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ ಶುಕ್ರವಾರ ಎರಡು ಬಿಎಂಟಿಸಿ ಬಸ್ ಗಳ​ ಮಧ್ಯೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಚಾಲಕ ವಿಜಯಕುಮಾರ (50) ಹಾಗೂ ಪ್ರಯಾಣಿಕ ವಿಷ್ಣು ಬಾಪಟ್‌(70) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುಂದೆ … Continued

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅನಾಹುತ ; ಇಬ್ಬರು ಕಾರ್ಮಿಕರು ಸಜೀವ ದಹನ

ಬೆಂಗಳೂರು: ಬೆಂಗಳೂರಿನ ಉತ್ತರ ತಾಲೂಕಿನ ಸೀಗೆಹಳ್ಳಿಯಲ್ಲಿ ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಅನಾಹುತದಲ್ಲಿ ಇಬ್ಬರು ಸಜೀವವಾಗಿ ದಹನವಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಮೃತರನ್ನು ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಎಂದು ಗುರುತಿಸಲಾಗಿದೆ. ಇವರಲ್ಲಿ ಒಬ್ಬ ಪೇಂಟರ್, … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

ವೀಡಿಯೊ…| 700 ಅಡಿ ಬೋರ್‌ವೆಲ್‌ ಗೆ ಬಿದ್ದ 10 ದಿನಗಳ ನಂತರ 3 ವರ್ಷದ ಬಾಲಕಿಯ ರಕ್ಷಣೆ ; ಆದರೆ…

ನವದೆಹಲಿ: 10 ದಿನಗಳ ಹಿಂದೆ ರಾಜಸ್ಥಾನದ ಕೋಟ್‌ಪುಟ್ಲಿಯಲ್ಲಿ ಬೋರ್‌ವೆಲ್‌ ಒಳಗೆ ಬಿದ್ದ ಮೂರು ವರ್ಷದ ಮಗುವನ್ನು ಐದಕ್ಕೂ ಹೆಚ್ಚು ನಡೆದ ಪ್ರಯತ್ನಗಳು ವಿಫಲವಾದ ನಂತರವೂ ಅಂತಿಮವಾಗಿ ರಕ್ಷಿಸಲಾಯಿತು.. ಆದರೆ ಆಸ್ಪತ್ರೆಗೆ ಸೇರಿಸಿದ ಗಂಟೆಗಳ ನಂತರ ಅವಳು ಮೃತಪಟ್ಟಿದ್ದಾಳೆ ಎಂದು ಪ್ರಕಟಿಸಲಾಯಿತು. ತಕ್ಷಣವೇ ಮಗುವನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಆಸ್ಪತ್ರೆಗೆ ಕೊಂಡೊಯ್ದರೂ ಆಕೆ … Continued

ಆಹಾರ ನಿಗಮದ (FCI) ಗೋಡೌನ್‌ನಲ್ಲಿ ಹೂಳಲಾಗಿದ್ದ 145 ಮಂಗಗಳ ಶವಗಳು ಪತ್ತೆ…!

ಲಕ್ನೋ: ಒಂದು ವಾರದ ಹಿಂದೆ ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮಿನಲ್ಲಿ 145 ಮಂಗಗಳನ್ನು ಸತ್ತಿದ್ದು, ಅವುಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಹತ್ರಾಸ್ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶುಕ್ರವಾರ (ನವೆಂಬರ್ 22) ಪೊಲೀಸರು ಗುಂಡಿಯಲ್ಲಿ ಹೂತಿದ್ದ ಮಂಗಗಳ ದೇಹಗಳನ್ನು ಹೊರತೆಗೆದಿದ್ದಾರೆ. ನಂತರ ಪಶುವೈದ್ಯರ ತಂಡವು ಶವಗಳನ್ನು … Continued

ರೈಲು ಡಿಕ್ಕಿ ಹೊಡೆದು ನಾಲ್ವರು ಸ್ವಚ್ಛತಾ ಕಾರ್ಮಿಕರು ಸಾವು

ತಿರುವನಂತಪುರಂ :  ಶನಿವಾರ ಸಂಜೆ ಶೋರನೂರ್ ರೈಲು ನಿಲ್ದಾಣದ ಬಳಿ ತಿರುವನಂತಪುರಂ ಕಡೆಗೆ ಹೋಗುವ ಕೇರಳ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸ್ಚಚ್ಛತಾ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ರೈಲು ನಿಲ್ದಾಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಶೋರನೂರ್ ಸೇತುವೆಯ ಬಳಿ ರೈಲ್ವೆ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ಮಧ್ಯಾಹ್ನ … Continued