ಅಹಮದಾಬಾದ್‌ ವಿಮಾನ ಅಪಘಾತದಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ ರೂಪಾನಿ ಸಾವು

ಅಹಮದಾಬಾದ್‌ : ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದಲ್ಲಿ ಹಿರಿಯ ಬಿಜೆಪಿ ನಾಯಕ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಯುನೈಟೆಡ್‌ ಕಿಂಗ್ಡಂನ ಲಂಡನ್‌ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನವು ನಿಲ್ದಾಣದ ಬಳಿಯ ನಾಗರಿಕ ಪ್ರದೇಶದಲ್ಲಿ … Continued

ರೈಲು ಬರುವುದು ನೋಡಿ 4 ಮಕ್ಕಳು ಕಿರುಚುತ್ತಿದ್ರೂ ಹಳಿ ಮೇಲೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ತಂದೆ ; ಎಲ್ರನ್ನೂ ಸಾಯಿಸಿದ ರೈಲು..!

ಫರಿದಾಬಾದ್: ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ 45 ವರ್ಷದ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರರು ರೈಲಿಗೆ ಸಿಲುಕಿ ನಜ್ಜುಗುಜ್ಜಾಗಿದ್ದಾರೆ. ರೈಲು ಬರುವಾಗ ಹಳಿಗಳ ಮೇಲಿದ್ದ ಮೂರರಿಂದ ಒಂಬತ್ತು ವರ್ಷದೊಳಗಿನ ಮಕ್ಕಳು ಕಿರುಚುತ್ತಿದ್ದರೂ ಅವರ ತಂದೆ ಎಕ್ಸ್‌ಪ್ರೆಸ್ ರೈಲು ಸಮೀಪಿಸುತ್ತಿದ್ದಂತೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ರೈಲು ಡಿಕ್ಕಿ ಹೊಡೆದು ಅವರೆಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ಮನೋಜ … Continued

ಚಾಮರಾಜನಗರ | ಹುಲಿ ದಾಳಿಗೆ ಮಹಿಳೆ ಸಾವು, ಯುವಕನಿಗೆ ಗಾಯ

ಚಾಮರಾಜನಗರ: ಕೆಲವೇ ತಾಸುಗಳ ಅಂತರದಲ್ಲಿ ಇಬ್ಬರ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಲ್ಲಿ ಮಹಿಳೆ ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಚಾಮರಾಜನಗರ ತಾಲೂಕಿನ ಬೇಡಗುಳಿಯಲ್ಲಿ ನಡೆದಿದೆ. ಬೇಡಗುಳಿಯ ರಂಗಮ್ಮ ಎಂಬ ವೃದ್ಧೆ ಹುಲಿ ದಾಳಿಗೆ ಅಸುನೀಗಿದ್ದಾರೆ. ರಂಗಮ್ಮ ಎಂಬವರ ಮೇಲೆ ಮಂಗಳವಾರ ಬೆಳಗ್ಗೆ ಹುಲಿ ದಾಳಿ ಮಾಡಿದ್ದು ತಲೆ ಮತ್ತು … Continued

ಕುಮಟಾ | ವಕೀಲರ ಸಂಘದ ಮಾಜಿ ಅಧ್ಯಕ್ಷ ಆರ್.ಎ. ಹೆಗಡೆ ನಿಧನ

ಕುಮಟಾ : ಖ್ಯಾತ ವಕೀಲರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎ. ಹೆಗಡೆ (84)ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಆರ್.ಎ. ಹೆಗಡೆ ಅವರು ಅನೇಕ ವರ್ಷಗಳ ಕಾಲ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ ನಂತರ ಕುಮಟಾ ನ್ಯಾಯಾಲಯದಲ್ಲಿ ಸುಧೀರ್ಗ ಕಾಲ ವಕೀಲರಾಗಿ, ಕುಮಟಾ ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. … Continued

ಮುಂಬೈ ಲೋಕಲ್ ರೈಲಿನಿಂದ ಬಿದ್ದು 5 ಮಂದಿಯ ಸಾವಿನ ಶಂಕೆ ; ಹಲವರಿಗೆ ಗಾಯ

ಮುಂಬೈ: ಸೋಮವಾರ ಬೆಳಿಗ್ಗೆ ಮುಂಬ್ರಾ ಬಳಿ ಕಿಕ್ಕಿರಿದು ತುಂಬಿದ್ದ ಮುಂಬೈ ಲೋಕಲ್ ರೈಲಿನಿಂದ 10 ಕ್ಕೂ ಹೆಚ್ಚು ಪ್ರಯಾಣಿಕರು ಕೆಳಕ್ಕೆ ಬಿದ್ದು, ಕನಿಷ್ಠ ಆರು ಮಂದಿ ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರೈಲು ಗರಿಷ್ಠ ಜನದಟ್ಟಣೆಯಿಂದ ತುಂಬಿರುವ ಸಮಯದಲ್ಲಿ ಇದು ಸಂಭವಿಸಿದೆ. ರೈಲು ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಕೊಂಡು ಛತ್ರಪತಿ ಶಿವಾಜಿ … Continued

ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ಬೆಂಗಳೂರು ಕಾಲ್ತುಳಿತದ ಘಟನೆ : ಮತ್ತಿಬ್ಬರು ಉನ್ನತ ಹುದ್ದೆಯಲ್ಲಿದ್ದವರ ತಲೆದಂಡ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಎಜಿಡಿಪಿ ಹೆಂತ … Continued

ಬೆಂಗಳೂರು ಕಾಲ್ತುಳಿತ | ಮೃತರಲ್ಲಿ 3 ಹದಿಹರೆಯದವರು, ಒಬ್ಬಳಿಗೆ 13 ವರ್ಷ, ಆರು ಮಂದಿ 20-30 ವರ್ಷದವರು : ಎಲ್ಲರಿಗೂ 40 ವರ್ಷದೊಳಗೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರೆಲ್ಲರೂ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 13 ವರ್ಷದ ಬಾಲಕಿ ಮೃತರಲ್ಲಿ ಅತ್ಯಂತ ಕಿರಿಯಳು. ಮೃತರಲ್ಲಿ ಮೂವರು ಹದಿಹರೆಯದವರು ಮತ್ತು 20-30 ವರ್ಷ ವಯಸ್ಸಿನ ಆರು ಜನ ಸೇರಿದ್ದಾರೆ. 18 ವರ್ಷಗಳ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹುರಿದುಂಬಿಸಲು … Continued

ಪಾಣೆಮಂಗಳೂರು : ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಪುತ್ತೂರು ನಗರಸಭೆಯ ಸದಸ್ಯ ರಮೇಶ ರೈ ನೆಲ್ಲಿಕಟ್ಟೆ ಅವರು ಪಾಣೆಮಂಗಳೂರಿನ ಹಳೆಯ ನೇತ್ರಾವತಿ ಸೇತುವೆಯ ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಸುಮಾರಿಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್, ಅಂಗಿ ಮೊಬೈಲ್ ಮತ್ತು ಚಪ್ಪಲಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. … Continued

ವೀಡಿಯೊ..| ಬೆಂಗಳೂರು ಕಾಲ್ತುಳಿತ ; ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಡಿಕೆ ಶಿವಕುಮಾರ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದಲ್ಲಿ 11 ಜನರು ಸಾವಿಗೀಡಾದ ದುರಂತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಣ್ಣೀರಿಟ್ಟಿದ್ದಾರೆ. ಶಿವಕುಮಾರ ಅವರು ತಾವು ಕಂಡ ಹೃದಯ ವಿದ್ರಾವಕ ದೃಶ್ಯಗಳನ್ನು ವಿವರಿಸಿದ್ದಾರೆ. ʼಕಾಲ್ತುಳಿತದಲ್ಲಿ (Bengaluru Stampede) “ನಾನು ಮಕ್ಕಳ ಬಗ್ಗೆ ಚಿಂತಿತನಾಗಿದ್ದೇನೆ, ಅವರು 15 ವರ್ಷ ವಯಸ್ಸಿನವರು ಎಂದು ನಾನು ನೋಡಿದೆ. … Continued