ಹೊನ್ನಾವರ | ಗೇರುಸೊಪ್ಪ ಬಳಿ ಲಾರಿ ಪಲ್ಟಿ ; ಇಬ್ಬರು ಸಾವು

ಹೊನ್ನಾವರ: ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಹೊನ್ನಾವರ – ಸಾಗರ ರಸ್ತೆಯ ಸುಳಿಮುರ್ಖಿ ತಿರುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಕಡೆಯಿಂದ ಹೊನ್ನಾವರದತ್ತ ಬರುತ್ತಿದ್ದ ಲಾರಿ ಸೋಮವಾರ (ಜ.6) ನಸುಕಿನ ವೇಳೆ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ … Continued

ಹಿರಿಯ ಸಾಹಿತಿ, ಕತೆಗಾರ ನಾ. ಡಿಸೋಜ ನಿಧನ

ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ (87) (Na. D’Souza) ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ … Continued

ಏಕತಾ ಪ್ರತಿಮೆ ಬಳಿ ಒಂದು ಕೃಷ್ಣಮೃಗ ಬೇಟೆಯಾಡಿದ ಚಿರತೆ ; ಅದನ್ನು ನೋಡಿ ಆಘಾತದಿಂದ ಇನ್ನೂ 7 ಕೃಷ್ಣಮೃಗಗಳು ಸಾವು…!

ಗಾಂಧಿನಗರ: ಗುಜರಾತಿನ ಸ್ಟ್ಯಾಚ್ಯೂ ಆಫ್ ಯೂನಿಟಿ ಬಳಿಯ ಜಂಗಲ್ ಸಫಾರಿ ಪಾರ್ಕ್‌ಗೆ ಚಿರತೆಯೊಂದು ನುಗ್ಗಿ ಕೃಷ್ಣಮೃಗ ಬೇಟೆಯಾಡಿದ ನಂತರ ಇನ್ನೂ ಏಳು ಕೃಷ್ಣಮೃಗಗಳು ಆಘಾತದಿಂದ ಮೃತಪಟ್ಟಿವೆ ಎಂದು ವರದಿಯಾಗಿದೆ. ಹೊಸ ವರ್ಷದ ಆರಂಭದ ದಿನವಾದ ಜನವರಿ 1 ರ ಮುಂಜಾನೆ ಈ ಘಟನೆ ಸಂಭವಿಸಿದೆ. ಅರಣ್ಯ ಅಧಿಕಾರಿಗಳ ಪ್ರಕಾರ, 2 ರಿಂದ 3 ವರ್ಷ ವಯಸ್ಸಿನ … Continued

ತರಬೇತಿ ವೇಳೆ ಕರಾವಳಿ ಪಡೆಯ ಹೆಲಿಕಾಪ್ಟರ್‌ ಪತನ; ಮೂವರು ಸಾವು

ಪೋರಬಂದರ್‌ : ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ಕೋಸ್ಟ್ ಗಾರ್ಡ್ ಎಎಲ್ ಎಚ್ ಧ್ರುವ ಹೆಲಿಕಾಪ್ಟರ್ ಭಾನುವಾರ ಗುಜರಾತಿನ ಪೋರಬಂದರ್‌ನಲ್ಲಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ಮೂವರು ಸಿಬ್ಬಂದಿ ಇದ್ದರು. ಘಟನೆಯಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ’’ ಎಂದು ಕೋಸ್ಟ್ ಗಾರ್ಡ್ ಅಧಿಕಾರಿಗಳು ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ. ಈ … Continued

ಎನ್‌ಕೌಂಟರ್‌ನಲ್ಲಿ 4 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು, ಓರ್ವ ಪೊಲೀಸ್‌ ಹುತಾತ್ಮ

ರಾಯ್ಪುರ : ಶನಿವಾರ ಸಂಜೆ ಛತ್ತೀಸ್‌ಗಢದ ಅಬುಜ್‌ಮದ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ನಾಲ್ವರು ನಕ್ಸಲರು ಹತರಾಗಿದ್ದಾರೆ. ಮತ್ತು ಪೊಲೀಸ್ ಪೇದೆಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ಮೃತ ನಕ್ಸಲರ ದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಎಕೆ-47, ಎಸ್‌ಎಲ್‌ಆರ್ ಮತ್ತು ಇತರ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ … Continued

ಖ್ಯಾತ ಪರಮಾಣು ವಿಜ್ಞಾನಿ, ಭಾರತದ ಪೋಖ್ರಾನ್ ಪರಮಾಣು ಶಕ್ತಿ ಪರೀಕ್ಷೆ ರೂವಾರಿ ಆರ್‌.ಚಿದಂಬರಂ ನಿಧನ

ನವದೆಹಲಿ : 1975 ಮತ್ತು 1998ರ ಪರಮಾಣು ಶಕ್ತಿ ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಿಜ್ಞಾನಿ ಅರ್‌. ಚಿದಂಬರಂ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 3:20 ಕ್ಕೆ ಕೊನೆಯುಸಿರೆಳೆದರು ಎಂದು ಅಣುಶಕ್ತಿ ಇಲಾಖೆಯ … Continued

ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸಾವು

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯ ಬಳಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಸಹೋದರಿಯರನ್ನು ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಎಂದು ಗುರುತಿಸಲಾಗಿದೆ. ಇಂದು ಶನಿವಾರ ಮಧ್ಯಾಹ್ನ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ … Continued

ಗದಗ | ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಗದಗ: ಹೈಸ್ಕೂಲ್‌ ಮಕ್ಕಳು ಚಲಾಯಿಸುತ್ತಿದ್ದ ಕಾರು ಡಿವೈಡರ್‌ಗೆ ಗುದ್ದಿ (Accident) ಛಿದ್ರಛಿದ್ರವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರು ಹಾಗೂ ಗಾಯಾಳುಗಳು ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ … Continued

ವೀಡಿಯೊ..|ನ್ಯೂ ಓರ್ಲಿಯನ್ಸ್‌ನಲ್ಲಿ ಜನಸಂದಣಿ ಮೇಲೆ ವಾಹನ ನುಗ್ಗಿಸಿದ ಶಂಕಿತ ಉಗ್ರ ; 15 ಮಂದಿ ಸಾವು, 35 ಜನರಿಗೆ ಗಾಯ : ನಿವೃತ್ತ ಯೋಧನೇ ಶಂಕಿತ ಉಗ್ರ..!

ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಿದ ಘಟನೆಯಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಕಾರಣನಾದ ಶಂಕಿತನನ್ನು ಗುರುತಿಸಲಾಗಿದ್ದು, ಈತ ಅಫ್ಘಾನಿಸ್ತಾನದಲ್ಲಿ ಸೇವೆ ಸಲ್ಲಿಸಿದ್ದ ಅಮೆರಿಕದ ಮಾಜಿ ಸೈನಿಕ ಎನ್ನಲಾಗಿದೆ. ಅಲ್ಲದೆ, ಆತ ಓಡಿಸಿಕೊಂಡು … Continued

ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಇಬ್ಬರು ಮಕ್ಕಳು ಸಾವು

ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವಿಗೀಡಾದ ಘಟನೆ ವಿಜಯಪುರ (vijayapura ) ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗೀತಾ ಬಡಗಿ (28), ಮಕ್ಕಳಾದ ಶ್ರವಣ (6) ಮತ್ತು ಶರಣ (4) ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ … Continued