ವೀಡಿಯೊ…| ಭೀಕರ ಅಪಘಾತ : ನಾಲ್ಕೈದು ಪಲ್ಟಿ ಹೊಡೆದ ಶಾಲಾ ಬಸ್ ; ಓರ್ವ ವಿದ್ಯಾರ್ಥಿನಿ ಸಾವು, 14 ಮಂದಿಗೆ ಗಾಯ

ಕಣ್ಣೂರು : ಶಾಲಾ ಬಸ್ ಪಲ್ಟಿಯಾದ ಪರಿಣಾಮ 5 ನೇ ತರಗತಿ ವಿದ್ಯಾರ್ಥಿನಿ ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನಲ್ಲಿ ಬುಧವಾರ ನಡೆದಿದೆ. ಕುರುಮತ್ತೂರು ಪಂಚಾಯತದ ಚಿನ್ಮಯ ವಿದ್ಯಾಲಯದ 15 ವಿದ್ಯಾರ್ಥಿಗಳಿದ್ದ ಬಸ್ಸು ಹೆದ್ದಾರಿಗೆ ಹೋಗಲು ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಶ್ರೀಕಂಠಪುರಂನ ವಳಕ್ಕೈ ಎಂಬಲ್ಲಿ ಸಂಜೆ 4 ಗಂಟೆಗೆ ಸುಮಾರಿಗೆ ನಾಲ್ಕೈದು ಸುತ್ತು ಪಲ್ಟಿಯಾಗಿದೆ. … Continued

ಮುಂಡಗೋಡ | ಹಾವು ಕಡಿದು 5 ವರ್ಷದ ಅಂಗನವಾಡಿ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಅಂಗನವಾಡಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ  ಪಟ್ಟಣದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಮಯೂರಿ ಸುರೇಶ ಕುಂಬಳಪ್ಪನವರ (5) ಎಂದು ಗುರುತಿಸಲಾಗಿದೆ. ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿ ತೆರಳಿದಾಗ ಹಾವು ಕಡಿದಿದೆ. ಬಾಲಕಿ ತಕ್ಷಣ, ಕಾಲಿಗೆ ಹಾವು … Continued

ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ | ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು ; ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ (Gas Cylinder Blast) ಗಾಯಗೊಂಡಿದ್ದ ಮತ್ತೊಬ್ಬರು ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದು, ಈ ಘಟನೆಯಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದೆ. ಸಿಲಿಂಡರ್ ಸ್ಫೋಟದಿಂದ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರೇ ಮೃತಪಟ್ಟಿದ್ದರು. ಮಂಗಳವಾರ ಗಂಭೀರವಾಗಿ … Continued

ಹೊನ್ನಾವರ | ಶರಾವತಿ ಸೇತುವೆ ಮೇಲೆ ಬಸ್‌-ಬೈಕ್‌ ಡಿಕ್ಕಿ ; ಮೂವರು ಸಾವು

ಹೊನ್ನಾವರ : ಇಂದು ಬೆಳಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavara) ಪಟ್ಟಣದ ಶರಾವತಿ ಸೇತುವೆ ಮೇಲೆ ಭೀಕರ  ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದ ಬೈಕ್ … Continued

ಪುತ್ತೂರು | ಹೊಂಡಕ್ಕೆ ಉರುಳಿ ಬಿದ್ದ ಕಾರು; ಮೂವರು ಸಾವು

ಮಂಗಳೂರು : ನಿಯಂತ್ರಣ ತಪ್ಪಿದ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ, ಪಕ್ಕದ ಮನೆಯ ರಮೇಶ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಸುಳ್ಯದಿಂದ ಪುತ್ತೂರಿನ … Continued

ಮನಮೋಹನ್​ ಸಿಂಗ್​ಗೆ ತಮ್ಮ ಮಾರುತಿ 800 ಕಾರು ಬಲು ಇಷ್ಟದ ಕಾರಾಗಿತ್ತು…

ನವದೆಹಲಿ: ಉತ್ತರ ಪ್ರದೇಶದ ಯೋಗಿ ಸರ್ಕಾರದ ಸಚಿವ ಅಸೀಮ್ ಅರುಣ ಅವರು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಬಗೆಗಿನ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅಸೀಮ್ ಅರುಣ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭದ್ರತಾ ಮುಖ್ಯಸ್ಥರಾಗಿದ್ದರು. ಅವರು 2004 ಮತ್ತು 2008 ರ ನಡುವೆ ಪ್ರಧಾನಿಯಾಗಿದ್ದ ಮನಮೋಹನ ಸಿಂಗ್‌ ಅವರ 22 ಜನರ ಕಮಾಂಡೋ … Continued

ನಾಳೆ ಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ ; ಕಾಂಗ್ರೆಸ್‌

ನವದೆಹಲಿ: ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ಹರಿಕಾರ ಹಾಗೂ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ರಾತ್ರಿ 9:51ಕ್ಕೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ (ಡಿಸೆಂಬರ್‌ ೨೮) ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಇನ್ನಿಲ್ಲ

ನವದೆಹಲಿ : ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು, ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಪ್ರಧಾನಿ ಅವರು ಪತ್ನಿ ಗುರುಚರಣ್ ಸಿಂಗ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. … Continued

ವೀಡಿಯೊ..| ಬೆಂಗಳೂರು ; ಕಾರಿನ ಮೇಲೆ ಕಂಟೈನರ್‌ ಪಲ್ಟಿಯಾಗಿ 6 ಮಂದಿ ಸಾವು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಕಂಟೈನರ್‌ ಲಾರಿ ಉರುಳಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಮೃತಪಟ್ಟ ದುರ್ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರಿನ ಮೇಲೆ ತುಮಕೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್​ ಲಾರಿ ಬಿದ್ದಿತ್ತು. ಪರಿಣಾಮ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿ, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಜನ ಸ್ಥಳದಲ್ಲೇ … Continued

ಟಿವಿ ರಿಮೋಟ್ ; ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಮೊಮ್ಮಗಳಿಗೆ … Continued