ವೀಡಿಯೊ..| ಪಾಕಿಸ್ತಾನದ ರೈಲು ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಸ್ಫೋಟದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದ ಬಳಿ ನಡೆದ ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಮತ್ತು 46 ಜನರು ಗಾಯಗೊಂಡಿದ್ದಾರೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆ ಹೊತ್ತುಕೊಂಡಿದೆ. ರೈಲು ತನ್ನ ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ … Continued

ವೀಡಿಯೊ…| ಬೆಂಗಳೂರು : ಬಸ್‌ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಸಾವು : ಬಸ್ಸಿನಲ್ಲಿದ್ದವರ ಪ್ರಾಣ ಉಳಿಸಿದ ಕಂಡಕ್ಟರ್…

ಬೆಂಗಳೂರು: ಬೆಂಗಳೂರು ಮಹಾನಗರದ ನೆಲಮಂಗಲದಿಂದ ದಾಸನಪುರಕ್ಕೆ ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗ 40 ವರ್ಷದ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸ್ ನೆಲಮಂಗಲದಿಂದ ದಾಸನಪುರಕ್ಕೆ ತೆರಳುತ್ತಿದ್ದಾಗ ಚಾಲನೆ ಮಾಡುತ್ತಿರುವಾಗಲೇ ಚಾಲಕ ಕಿರಣಕುಮಾರ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು … Continued

ವೀಡಿಯೊ..| ಪಂದ್ಯ ನಡೆಯುತ್ತಿರುವಾಗಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾವು, ಐವರಿಗೆ ಗಾಯ

ಪೆರುವಿನಲ್ಲಿ ಫುಟ್ಬಾಲ್ ಪಂದ್ಯ ನಡೆಯುತ್ತಿರುವಾಗ ಸಿಡಿಲು ಬಡಿದು ಫುಟ್ಬಾಲ್ ಆಟಗಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೆರುವಿನ ಚಿಲ್ಕಾ ಜಿಲ್ಲೆಯ ಪೆರುವಿಯನ್ ನಗರದಲ್ಲಿ ಹುವಾನ್‌ಕಾಯೊದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ತಂಡಗಳಾದ ಜುವೆಂಟುಡ್ ಬೆಲ್ಲವಿಸ್ಟಾ ಮತ್ತು ಫ್ಯಾಮಿಲಿಯಾ ಚೋಕಾ ನಡುವೆ ಫುಟ್‌ಬಾಲ್ ಪಂದ್ಯ ನಡೆಯುತ್ತಿತ್ತು. ದಿ ಸನ್‌ನ ವರದಿಯ ಪ್ರಕಾರ, … Continued

ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ರಾತ್ರಿ ಸ್ನೇಹಿತರೊಂದಿಗೆ ಬೆಟ್ಟಿಂಗ್ ಚಾಲೆಂಜ್‌ ನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 32 ವರ್ಷದ ವ್ಯಕ್ತಿಯೊಬ್ಬರು ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಪೆಟ್ಟಿಗೆಯ ಮೇಲೆ ಕುಳಿತುಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ … Continued

ಬಸ್ಸು ಕಮರಿಗೆ ಬಿದ್ದು 22 ಮಂದಿ ಸಾವು

ಅಲ್ಮೋರಾ : ಸೋಮವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ ಬಿದ್ದು ಕನಿಷ್ಠ 22 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಬಸ್‌ನಲ್ಲಿ ಓವರ್‌ಲೋಡ್‌ ಇತ್ತು ಮತ್ತು ಮೃತಪಟ್ಟವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸ್ ಗರ್ವಾಲ್‌ನಿಂದ ಕುಮಾನ್‌ಗೆ ಹೋಗುತ್ತಿದ್ದಾಗ ಅಲ್ಮೋರಾದ ಮಾರ್ಚುಲಾದಲ್ಲಿ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲೋಕಕುಮಾರ ಪಾಂಡೆ … Continued

ಕನ್ನಡ ಸಿನೆಮಾದ ಖ್ಯಾತ ನಿರ್ದೇಶಕ-ನಟ ಗುರುಪ್ರಸಾದ ಆತ್ಮಹತ್ಯೆ

ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿಯಲ್ಲಿನ ತಮ್ಮ ಅರ್ಪಾಟ್​ಮೆಂಟ್​ನಲ್ಲಿ ಅವರ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಾದನಾಯಕನಹಳ್ಳಿ ಬಳಿಯಲ್ಲಿನ ಅಪಾರ್ಟಮಂಟ್​ನ, ಅವರ  ನಿವಾಸದಲ್ಲಿ ಗುರುಪ್ರಸಾದ ಅವರ ಶವ ಪತ್ತೆಯಾಗಿದೆ. ಮನೆಯಿಂದ ಕೊಳೆತ ವಾಸನೆ ಬಂದ … Continued

ಲೆಜೆಂಡರಿ ಫ್ಯಾಷನ್ ಡಿಸೈನರ್ ರೋಹಿತ್ ಬಾಲ್ ನಿಧನ

ನವದೆಹಲಿ : ಖ್ಯಾತ ಫ್ಯಾಷನ್‌ ಡಿಸೈನರ್‌ ರೋಹಿತ್‌ ಬಾಲ್‌ (Rohit Bal) ಶುಕ್ರವಾರ (ನ.1) ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಫ್ಯಾಷನ್‌ ಡಿಸೈನ್‌ ಕೌನ್ಸಿಲ್‌ ಆಫ್‌ ಇಂಡಿಯಾ (Fashion Design Council of India) ರೋಹಿತ್‌ ಬಾಲ್‌ ಅವರ ನಿಧನವನ್ನು ಖಚಿತಪಡಿಸಿದೆ. ಬಾಲ್ ಅವರ ನಿಧನದ ಸುದ್ದಿಯನ್ನು ಫ್ಯಾಷನ್‌ ಡಿಸೈನ್‌ ಕೌನ್ಸಿಲ್‌ ಆಫ್‌ ಇಂಡಿಯಾ … Continued

ವೀಡಿಯೊ..| ದೀಪಾವಳಿಗಾಗಿ ಒಯ್ಯುತ್ತಿದ್ದ ʼಈರುಳ್ಳಿ ಬಾಂಬ್’ ಪಟಾಕಿ ಸ್ಫೋಟ ; ಒಬ್ಬರು ಸಾವು, 6 ಮಂದಿಗೆ ಗಾಯ

ಹೈದರಾಬಾದ್ : ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಪಟಾಕಿ ಸಿಡಿಸಿದ ಅವಘಡದಲ್ಲಿ ಒಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬರು ದೀಪಾವಳಿ ಹಬ್ಬದ ವಿಶೇಷ ಪಟಾಕಿ-ಈರುಳ್ಳಿ ಬಾಂಬ್‌ಗಳನ್ನು ಸಾಗಿಸುತ್ತಿದ್ದಾಗ ಸ್ಥಳೀಯ ದೇವಸ್ಥಾನದ ಬಳಿಯ ಗುಂಡಿಗೆ ಬೈಕ್ ಡಿಕ್ಕಿ ಹೊಡೆದು ಆ ಈರುಳ್ಳಿ ಬಾಂಬ್‌ಗಳು ಬಿದ್ದು ಸ್ಫೋಟಗೊಂಡಿವೆ. ವರದಿಗಳು ದೀಪಾವಳಿಯ ‘ಈರುಳ್ಳಿ ಬಾಂಬ್‌’ಗಳ ಸ್ಫೋಟದ ಪರಿಣಾಮವು … Continued

ಭಜನೆ ಸ್ಪರ್ಧೆ ವೇಳೆ ಹಾರಿ ಹೋದ ಪ್ರಾಣಪಕ್ಷಿ

ಬೆಳಗಾವಿ: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲೆಯ ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಭಾನುವಾರ ನಡೆದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ವೇದಿಕೆಯಿಂದ ನಿರ್ಗಮಿಸುತ್ತಿದ್ದ ವೇಳೆ ಕಲಾವಿದರೊಬ್ಬರು ಹೃದಯಾಘಾತವಾಗಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಸಾಪುರ ಗ್ರಾಮದ ಈರಪ್ಪ ಫಕ್ಕೀರಪ್ಪ ಬಬಲಿ (48) ಎಂಬವರೇ ಮೃತಪಟ್ಟ ಕಲಾವಿದರಾಗಿದ್ದಾರೆ. ಅವರು ವೇದಿಕೆಯಿಂದ ಇಳಿಯುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಅಸುನೀಗಿದರು. … Continued

ಸೆಲ್ಫಿ ತೆಗೆಯಲು ಹೋಗಿ ಕಾಡಾನೆಯಿಂದ ಸಾವಿಗೀಡಾದ ಯುವಕ…!

ಮುಂಬೈ : ಗುರುವಾರ (ಅಕ್ಟೋಬರ್ 24) ನಡೆದ ಅಹಿತಕರ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಮುಟ್ನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡಾನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ವ್ಯಕ್ತಿ ಸಮೀಪ ಹೋಗಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆನೆ ಆತನ ಮೇಲೆ ದಾಳಿ … Continued