ಬೆಳಗಾವಿ | ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

ಬೆಳಗಾವಿ: ಸಾರ್ವಜನಿಕ ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ ಬೆಳಗಾವಿ ನಗರದ ಪಾಟೀಲ ಗಲ್ಲಿಯಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪಾಟೀಲ ಗಲ್ಲಿಯ ನಿವಾಸಿ ಸದಾನಂದ ಚವ್ಹಾಣ ಪಾಟೀಲ(48) ಎಂದು ಗುರುತಿಸಲಾಗಿದೆ. ಮತ್ತೊಬ್ಬರಾದ ವಿಜಯ ರಾಜಗೋಳ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಸೇತುವೆಯಿಂದ … Continued

ಮಾಗಡಿ | ಮರಕ್ಕೆ ಡಿಕ್ಕಿ ಹೊಡೆದ ಕಾರು ; ಒಂದೇ ಕುಟುಂಬದ ಐವರು ಸಾವು

ರಾಮನಗರ:  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಸಾವಿಗೀಡಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಗಳವಾರ (ಸೆ.17) ನಡೆದಿದೆ ಎಂದು ವರದಿಯಾಗಿದೆ. ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಮಾಗಡಿ … Continued

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಅಸ್ವಸ್ಥಗೊಂಡು ಸಾವು

ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿಯೊಬ್ಬರು ಕೆಲದಿನಗಳ ನಂತರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಉಪನ್ಯಾಸಕಿಯಾಗಿದ್ದ ಅರ್ಚನಾ ಕಾಮತ್ (33) ಅವರು ತಮ್ಮ ಸಂಬಂಧಿಕರಿಗೆ ಪಿತ್ತಜನಕಾಂಗ (ಲಿವರ್‌) ದಾನ ಮಾಡಿದ ನಂತರ ಹಠಾತ್‌ ಆರೋಗದಯಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ … Continued

ನಿಪ್ಪಾಣಿ | ಸರಣಿ ಅಪಘಾತ : ಇಬ್ಬರು ಸಾವು

ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ … Continued

ಚಿಕ್ಕೋಡಿ : ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಸಾವು

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೈಪಲೈನ್ ಹರಿ ತೆಗಿಯುವಾಗ ಈ ಧಾರುಣ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಬಾಲಕಿಯನ್ನು ಭೂಮಿಕಾ ರಮೇಶ ಕೂಕನೂರ (3) ಎಂದು ಗುರುತಿಸಲಾಗಿದೆ. ಪಟ್ಟಣ ಪಂಚಾಯತದ … Continued

ಹಳೆ ಮನೆ ಕೆಡವುತ್ತಿದ್ದಾಗ ಅವಘಡ : ಇಬ್ಬರು ಸಾವು

ಮಂಗಳೂರು: ಜೆಸಿಬಿಯಿಂದ ಹಳೆ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಅಲ್ಲಿಯೇ ಕೆಳಗೆ ನಿಂತು ನೋಡುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮನೆ ಮಾಲೀಕ ಜೇಮ್ಸ್ ಜತ್ತನ್ನ (56) ಹಾಗೂ ಅಡ್ವಿನ್ ಹೆರಾಲ್ಡ್ ಮಾಬೇನ್ (54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ … Continued

ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಹಾಲಿ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದರು. ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಕನ್ನಡ ಪ್ರಭ ಮೊದಲಾದ ಪತ್ರಿಕೆಗಳಲ್ಲಿ ಕೆಲಸ … Continued

ಮಧುಗಿರಿ | ಎರಡು ಕಾರುಗಳ ನಡುವೆ ಡಿಕ್ಕಿ : ಐವರು ಸಾವು

ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯದ ಬಳಿ ಭಾನುವಾರ ರಾತ್ರಿ 7ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಒಂದು ಕಾರಿನಲ್ಲಿದ್ದ ನಾಲ್ವರು ಹಾಗೂ ಮತ್ತೊಂದು ಕಾರಿನಲ್ಲಿ ಓರ್ವ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು … Continued

ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ ಐ ಆರ್ ದಾಖಲು

ಬೆಂಗಳೂರು : ಖ್ಯಾತ ಸಿನೆಮಾ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ … Continued

ಕುಮಟಾ : ಮೀನು ಹಿಡಿಯಲು ಹೋದ ಗ್ರಾಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದ್ದು, ಮೃತರನ್ನು ದಾವುದ್ ಘಾರಿಯಾ (67) ಎಂದು ಗುರುತಿಸಲಾಗಿದೆ. ಮೃತರು ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದರು, ಮೀನು … Continued