ಮದುವೆಯಾದ ಕೆಲವೇ ಹೊತ್ತಿನಲ್ಲಿ ನವದಂಪತಿ ನಡುವೆ ಹೊಡೆದಾಟ ; ವಧು ಸಾವು, ವರನ ಸ್ಥಿತಿ ಗಂಭೀರ…!

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಮಧ್ಯೆ ಜಗಳವಾಗಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ನಂತರ ತೀವ್ರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಕೆಜಿಎಫ್ (KGF)​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವರ ನವೀನ್ … Continued

ಬಾಂಗ್ಲಾದೇಶ ಬಿಕ್ಕಟ್ಟು : ಅವಾಮಿ ಲೀಗ್‌ ನಾಯಕನ ಹೊಟೇಲಿಗೆ ಬೆಂಕಿ ಹಚ್ಚಿ 24 ಜನರನ್ನು ಸಜೀವ ದಹನ ಮಾಡಿದ ಗುಂಪು

ಢಾಕಾ: ಅವಾಮಿ ಲೀಗ್ ಪಕ್ಷದ ನಾಯಕಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದ ನಂತರ ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅವಾಮಿ ಲೀಗ್ ಪಕ್ಷದ ನಾಯಕರ ಒಡೆತನದ ಹೋಟೆಲ್‌ ಗೆ ಗುಂಪೊಂದು ಬೆಂಕಿ ಹಚ್ಚಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರನ್ನು ಸಜೀವ ದಹನ ಮಾಡಿದೆ ಎಂದು ಸ್ಥಳೀಯ ಪತ್ರಕರ್ತರು … Continued

ವಯನಾಡು ಭೂ ಕುಸಿತದ ಬಗ್ಗೆ ತುರ್ತು ಸೇವೆಗಳಿಗೆ ಮೊದಲು ಕರೆ ಮಾಡಿದ್ದ ನೀತು ಜೊಜೊ ಅದೇ ದುರಂತದಲ್ಲಿ ಸಾವು

ವಯನಾಡು: ಜುಲೈ 30 ರಂದು ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದ ಬಗ್ಗೆ ತುರ್ತು ಸೇವೆಗಳಿಗೆ ಎಚ್ಚರಿಕೆ ನೀಡಿದವರಲ್ಲಿ ವಯನಾಡಿನ ಖಾಸಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ನೀತು ಜೊಜೊ ಮೊದಲಿಗರು, ಆದರೆ ರಕ್ಷಣಾ ತಂಡಗಳು ತಲುಪುವ ಮೊದಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯ ಚೂರಲ್ಮಲಾದಲ್ಲಿ ಸಂಭವಿಸಿದ ವಿನಾಶಕಾರಿ ಭೂ ಕುಸಿತದ ಸರಣಿಯ ಮೊದಲ ಭೂಕುಸಿತದ ನಂತರ … Continued

ಭರತನಾಟ್ಯ-ಕೂಚಿಪುಡಿಯ ಅಭಿಜಾತ ನೃತ್ಯಪಟು, ಪದ್ಮವಿಭೂಷಣ ಯಾಮಿನಿ ಕೃಷ್ಣಮೂರ್ತಿ ನಿಧನ

ನವದೆಹಲಿ: ಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿ ಯಾಮಿನಿ ಕೃಷ್ಣಮೂರ್ತಿ (84) ಅವರು ಶನಿವಾರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರು ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರು ಮತ್ತು ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು ಯಾಮಿನಿ ಕೃಷ್ಣಮೂರ್ತಿ ಅವರ ಮ್ಯಾನೇಜರ್ ಮತ್ತು ಕಾರ್ಯದರ್ಶಿ ಗಣೇಶ ತಿಳಿಸಿದ್ದಾರೆ. ಅಂತಿಮ ಶ್ರದ್ಧಾಂಜಲಿಗಾಗಿ ಕೃಷ್ಣಮೂರ್ತಿ ಅವರ ಪಾರ್ಥಿವ … Continued

ಗದಗ : ಬಿಡಾಡಿ ದನಗಳು ಗುದ್ದಿ ವೃದ್ಧ ಸಾವು

ಗದಗ: ಬಿಡಾಡಿ ದನಗಳ ಹಾವಳಿಗೆ ವೃದ್ಧ ಸಾವಿಗೀಡಾದ ಘಟನೆ ಬುಧವಾರ ಬೆಳಗ್ಗೆ ಬೆಟಗೇರಿ ಪಟ್ಟಣದಲ್ಲಿ ನಡೆದಿದೆ. ಗದಗ-ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರದ 7ನೇ ನಂಬರ ಶಾಲೆ ಬಳಿ ಈ ಘಟನೆ ನಡೆದಿದ್ದು, ನಂತರ ರೊಚ್ಚಿಗೆದ್ದ ಜನರು ಬೀದಿಗಳಿದು ಪ್ರತಿಭಟನೆ ನಡೆಸಿದರಲ್ಲದೆ ನಗರಸಭೆಯ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೃದ್ಧನನ್ನು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ … Continued

ಮನೆಗೆ ನೀರು ನುಗ್ಗಿದ ಸುದ್ದಿ ಕೇಳಿ ವ್ಯಕ್ತಿ ಹೃದಯಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದ ಉಪ್ಪಾರಗಲ್ಲಿಯಲ್ಲಿ ದಶರಥ ಬಂಡಿ(80)ಎಂಬವರು ತಮ್ಮ ಮನೆಗೆ ಮಳೆ ನೀರು ನುಗ್ಗಿರುವ ವಿಷಯ ತಿಳಿದು ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಹೊತ್ತು ಮನೆಗೆ ಮಳೆ ನೀರು ಬಂದಿರುವ ವಿಷಯ ತಿಳಿದ ಅವರು ಹೃದಯಘಾತದಿಂದ ಮೃತಪಟ್ಟಿದ್ದಾರೆ. ಘಟಪ್ರಭಾ ನದಿಯಿಂದ ಪ್ರವಾಹ ಬಂದು ಎಲ್ಲರೂ ಮನೆ ಖಾಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳುತ್ತಿದ್ದಂತೆ ಅವರಿಗೆ ಹೃದಯಾಘಾತವಾಗಿ … Continued

ಯಲ್ಲಾಪುರ | ಗಾಳಿಮಳೆ ; ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ಸಾವು

ಯಲ್ಲಾಪುರ: ಸ್ಕೂಟರ್‌ ಸವಾರನ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾಳಕೊಪ್ಪ ಶಾಲೆಯ ಎದುರು ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಗುರುತಿಸಲಾಗಿದೆ. ಈತ ಮನೆಯಿಂದ ತನ್ನ ಸ್ಕೂಟರಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ ಆತನ … Continued

ಗೀಸರ್‌ ಗ್ಯಾಸ್‌ ಸೋರಿಕೆ ; ತಾಯಿ-ಮಗ ಸಾವು

ರಾಮನಗರ : ಬಿಸಿ ನೀರು ಕಾಯಿಸುವ ಅನಿಲ ಗೀಸರ್‌ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದ ಜ್ಯೋತಿನಗರದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶೋಭಾ(40) ಹಾಗೂ ಅವರ ಪುತ್ರ ದಿಲೀಪ (17) ಎಂದು ಗುರುತಿಸಲಾಗಿದೆ. ರಾತ್ರಿ ಏಳು ಗಂಟೆ ಸುಮಾರಿಗೆ ದಿಲೀಪ ಸ್ನಾನದ … Continued

ಬಾಂಗ್ಲಾದೇಶದ ಪ್ರತಿಭಟನೆಯಲ್ಲಿ 105 ಮಂದಿ ಸಾವು : ದೇಶಾದ್ಯಂತ ಕರ್ಫ್ಯೂ, ಮಿಲಿಟರಿ ನಿಯೋಜನೆ

ಢಾಕಾ : ದೇಶಾದ್ಯಂತ ಹರಡಿರುವ ಅಶಾಂತಿಯ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ. ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಗಳು ಕನಿಷ್ಠ 105 ಜನರ ಸಾವಿಗೆ ಕಾರಣವಾಗಿವೆ ಎಂದು ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ಇದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಕಠಿಣ ರಾಜಕೀಯ ಸವಾಲನ್ನು ಒಡ್ಡುತ್ತಿದೆ, ಏಕೆಂದರೆ ವಿದ್ಯಾರ್ಥಿಗಳು … Continued

ಭಾರೀ ಮಳೆಗೆ ಮನೆ ಗೋಡೆ ಕುಸಿತ ; ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ನಿರಂತರ ಮಳೆ ಹಿನ್ನೆಲೆ ಮನೆಯ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೆಲ ದಿನಗಳಿಂದ ಸುರಿದ ಮಳೆಗೆ ಮನೆ ಸೋರುತ್ತಿದ್ದು, ಶುಕ್ರವಾರ ಬೆಳಗ್ಗೆ ಗೋಡೆ ಕುಸಿದಿದೆ. ಒಂದೇ ಕೋಣೆಯಲ್ಲಿ ಮಲಗಿದ್ದ ಚೆನ್ನಮ್ಮ ಹರಕುಣಿ (30) ಹಾಗೂ ಆಕೆಯ ಅವಳಿ ಹೆಣ್ಣು ಮಕ್ಕಳಾದ … Continued