ಬೆಳಗಾವಿ | ಅಪರೂಪದ ಘಟನೆ ; ಮಗನನ್ನು ಕಚ್ಚಿ ಸಾಯಿಸಿದ ಹಾವನ್ನು ಕೊಲ್ಲದೆ ರಕ್ಷಿಸಿ ಕಾಡಿಗೆ ಬಿಟ್ಟು ಬಂದ ಕುಟುಂಬ…!

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಅಪರೂಪದ ವಿದ್ಯಮಾನ ನಡೆದಿದೆ. ಅಥಣಿ ತಾಲೂಕಿನ ತೆಲಸಂಗ ಸಮೀಪದ ಕಕಮರಿ ಗ್ರಾಮದಲ್ಲಿ ಹಾವು ಕಚ್ಚಿ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ಆ ಮಗನ ಸಾವಿಗೆ ಕಾರಣವಾದ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಒಯ್ದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದ ವಿದ್ಯಮಾನ ವರದಿಯಾಗಿದೆ. ಮೇ 31ರಂದು ಅಮಿತ ಗುರುಲಿಂಗ ಸಿಂಧೂರ (10) … Continued

ಕಾರವಾರ | ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ 7 ಎಮ್ಮೆಗಳು ಸಾವು

ಕಾರವಾರ: ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಕೃಷಿಕ ಮಹಿಳೆಯರ 7 ಜಾನುವಾರುಗಳು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರದಲ್ಲಿ ನಡೆದಿದೆ. ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗದ್ದೆ ಕೆಲಸದ ಜೊತೆ ಎಮ್ಮೆಗಳನ್ನು ಸಾಕಿ ಪಾಲನೆ ಮಾಡುತ್ತಿರುವ ಕಿನ್ನರದ ಮಸೀದಿ ಹತ್ತಿರದ … Continued

ಬೆಂಗಳೂರು | ಆರ್‌ ಸಿಬಿ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ: 11 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು : ಐಪಿಎಲ್ ಪ್ರಶಸ್ತಿ ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಅಭಿನಂದಿಸುವ ಕಾರ್ಯಕ್ರಮದ ವೇಳೆ ಕನಿಷ್ಠ 11 ಜನರು ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ ಮತ್ತು ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ … Continued

ಹುಬ್ಬಳ್ಳಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಾಯ

ಹುಬ್ಬಳ್ಳಿ: ನಿರಂತರ ನೀರು ಪೂರೈಕೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದ ನಗರದ ಮಂಟೂರು ರಸ್ತೆ ಅರಳಿಕಟ್ಟಿ ಓಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಕಾರ್ಮಿಕನನ್ನು ಚೇತನ ಜಾಧವ (೩೫) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ತಾಲೂಕಿನ ಕಡಪಟ್ಟಿ ಹಳ್ಯಾಳ ಗ್ರಾಮದ ಮೌಲಾಸಾಬ್‌ ಮ್ಯಾಗಳಮನಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ … Continued

ಕರ್ನಾಟಕದಲ್ಲಿ ಶನಿವಾರ 58 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ; ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆ ಮುಂದುವರೆದಿದ್ದು ಶನಿವಾರ (ಮೇ ೩೧) ಹೊಸದಾಗಿ 58 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ವೇಳೆ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ … Continued

ಮಂಗಳೂರು | ಗುಡ್ಡ ಕುಸಿದು ಅನಾಹುತ ; ಬಾಲಕಿ ಸೇರಿ ಇಬ್ಬರು ಸಾವು, ಅವಶೇಷಗಳಡಿ ಸಿಲುಕಿರುವ ಮೂವರ ರಕ್ಷಣೆಗೆ ಪ್ರಯತ್ನ

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲvew ಅನಾಹುತಗಳು ಸಂಭವಿಸಿವೆ. ಕೆಲವೆಡೆ ಗುಡ್ಡ ಕುಸಿತ (Landslide) ಉಂಟಾಗಿದೆ. ಮಳೆ ಸಂಬಂಧಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದೇರಳಕಟ್ಟೆ ಮೊಂಟೆಪದವಿನ ಪಂಬದ ಹಿತ್ಲುವಿನಲ್ಲಿ ಗುಡ್ಡ ಕುಸಿದು ಮಣ್ಣು ಮನೆಗಳ ಮೇಲೆ ಬಿದ್ದಿದೆ. ಮನೆಗಳ ಅಡಿಯಲ್ಲಿ ಒಂದೇ ಕುಟುಂಬದ ಸಿಲುಕಿಕೊಂಡಿದ್ದಾರೆ. ಅವರಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಓರ್ವರನ್ನು … Continued

ಬೆಳಗಾವಿಯಲ್ಲಿ ಕೊರೊನಾ ಸೋಂಕಿತ ವೃದ್ಧ ಸಾವು

ಬೆಳಗಾವಿ: ಕೊರೊನಾ ಸೋಂಕಿತ ವೃದ್ಧರೊಬ್ಬರು ಬೆಳಗಾವಿಯಲ್ಲಿ ಮೃತಪಟ್ಟಿದ್ದಾರೆ. ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧರು ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ತಾಲೂಕಿನ ವೃದ್ಧರೊಬ್ಬರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಲಾಗಿದೆ. ಅವರು ಮಧುಮೇಹ, ಕಿಡ್ನಿ ತೊಂದರೆ ಸೇರಿದಂತೆ ಕೆಲವು ತೊಂದರೆಯಿಂದ ಬಳಲುತ್ತಿದ್ದರು. ನಂತರ ಅವರಿಗೆ ಕೊರೊನಾ ಲಕ್ಷಣಗಳು ಸಹ … Continued

ಗೋಕಾಕ | ಗೋಡೆ ಕುಸಿದು ಮಗು ಸಾವು ; ಇನ್ನೊಂದು ಮಗುವಿಗೆ ಗಾಯ

ಬೆಳಗಾವಿ: ಜಿಲ್ಲೆಯ ಗೋಕಾಕದ ಮಹಾಲಿಂಗೇಶ್ವರ ಕಾಲೊನಿಯಲ್ಲಿ ಸೋಮವಾರ ನಸುಕಿನಲ್ಲಿ ಮನೆ ಗೋಡೆ ಕುಸಿದು ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ ಹಾಗೂ ಮತ್ತೊಂದು ಮಗುವಿಗೆ ಗಾಯವಾಗಿದೆ. ಮೃತಪಟ್ಟ ಮಗುವನ್ನು ಕೃತಿಕಾ ನಾಗೇಶ ಪೂಜಾರಿ (3.9 ವರ್ಷ) ಎಂದು ಗುರುತಿಸಲಾಗಿದೆ. ಈ ಮಗುವಿನ ಪಕ್ಕದಲ್ಲೇ ಮಲಗಿದ್ದ, ಈಕೆಯ ಐದು ವರ್ಷದ ಅಕ್ಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ … Continued

ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್‌ ಸೋಂಕಿತ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ 84 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಅವರ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಪಾಸಿಟಿವ್ ಬಂದಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮೇ 13 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರು ಮೇ 17 ರಂದು ನಿಧನರಾದರು. … Continued

ಬಹುಭಾಷಾ ನಟ ಮುಕುಲ್‌ ದೇವ ನಿಧನ

ಮುಂಬೈ : ಸನ್‌ ಆಫ್‌ ಸರ್ದಾರ್‌ ಸಿನೆಮಾ ಖ್ಯಾತಿಯ ಬಹುಭಾಷಾ ನಟ ಮುಕುಲ್ ದೇವ್ (54) ನಿಧನರಾಗಿದ್ದಾರೆ. ಮುಕುಲ್‌ ಅವರ ಸಾವಿನ ಸುದ್ದಿಯನ್ನು ಅವರ ಸಹೋದರ ರಾಹುಲ್‌ ದೇವ್‌ (Rahul Dev) ಖಚಿತ ಪಡಿಸಿದ್ದಾರೆ ಹಿಂದಿ, ಪಂಜಾಬಿ ಸೇರಿದಂತೆ ವಿವಿಧ ಭಾಷೆಗಳ ಸಿನೆಮಾಗಳು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸಿದ್ದ ಅವರು, ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು … Continued