ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಉಲ್ಬಣ : 39 ಸಾವು, ಸರ್ಕಾರಿ ಟಿವಿ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ : ಸರ್ಕಾರಿ ಉದ್ಯೋಗಗಳಿಗೆ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪ್ರತಿಭಟನಾಕಾರರು, ಭದ್ರತಾ ಅಧಿಕಾರಿಗಳು ಮತ್ತು ಸರ್ಕಾರದ ಪರ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ನಂತರ ವ್ಯಾಪಕ ಹಿಂಸಾಚಾರವು ಬಾಂಗ್ಲಾದೇಶದಲ್ಲಿ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ, ಬಾಂಗ್ಲಾದೇಶದಲ್ಲಿ ಗುರುವಾರವು ಅತ್ಯಂತ ಹಿಂಸಾತ್ಮಕ ದಿನವಾಗಿದೆ. ವಿದ್ಯಾರ್ಥಿಗಳು ಬಾಂಗ್ಲಾದೇಶದಾದ್ಯಂತ ಸಾರಿಗೆಯನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದಾಗ ಪೊಲೀಸರು … Continued

ಶಿರೂರು ಗುಡ್ಡ ಕುಸಿತ ದುರಂತ ; ಮೃತರ ಕುಟುಂಬಕ್ಕೆ ೫ ಲಕ್ಷ ರೂ. ಪರಿಹಾರದ ಚೆಕ್ ನೀಡಿದ ಸಚಿವ ವೈದ್ಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಿಂದ ಮೃತಪಟ್ಟ ಮತ್ತು ಹಾನಿಗೊಳಗಾದವರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬುಧವಾರ ಪರಿಹಾರ ಚೆಕ್ ವಿತರಿಸಿದ್ದಾರೆ. ಶಿರೂರುನಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟ ೩ ವ್ಯಕ್ತಿಗಳ ಕುಟುಂಬಗಳ ವಾರಿಸುದಾರರಿಗೆ ತಲಾ ೫ ಲಕ್ಷ ರೂ. ಗಳ ಪರಿಹಾರ ಚೆಕ್ ನೀಡಿದರು. … Continued

ಶಿಗ್ಗಾವಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ನೀಲಪ್ಪ ಮೂಲಿಮನಿ (23), ಸುದೀಪ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), … Continued

ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ  (57  ಇಂದು, ಗುರುವಾರ (ಜುಲೈ 11) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಅವರು  ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.  ಬೆಂಗಳೂರು ದೂರದರ್ಶನದಲ್ಲಿ ಸಿನೀಯರ್‌ ಗ್ರೇಡ್‌ ನಿರೂಪಕಿಯಾಗಿದ್ದರು. ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) … Continued

ಹೊನ್ನಾವರ : ಪ್ರಸಿದ್ಧ ಯಕ್ಷಗಾನ ವೇಷಧಾರಿ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ : ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ಹೊನ್ನಾವರದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ನಂತರ ಯಕ್ಷಗಾನದ ದಿಗ್ಗಜ ಕೆರೆಮನೆ ಮಹಾಬಲ … Continued

ಕಾರವಾರ : ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಉತ್ತರ ಕನ್ನಡದ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವೃದ್ಧೆಯನ್ನು ರುಕ್ಮಾ ಗುಲಾಬಿ  ಮಾಳ್ಸೇಕರ (70) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. . ಭಾರಿ … Continued

ಹಾವೇರಿ ಬಳಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಮಂದಿ ಸಾವು

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್‌ (ಟಿಟಿ) ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಮಹಿಳೆಯರು, ಒಂದು … Continued

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ರಿಕ್ಷಾ ಚಾಲಕರು ಸಾವು

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ಆಟೋ ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ಹಾಸನದ ಅಲ್ಲೂರು ನಿವಾಸಿ ರಾಜು (50) ಹಾಗೂ ಪುತ್ತೂರಿನ ರಾಮಕುಂಜ ನಿವಾಸಿ ದೇವರಾಜ ಗೌಡ (46) ಎಂದು ಗುರುತಿಸಲಾಗಿದೆ. ಇಬ್ಬರೂ … Continued

ಉಳ್ಳಾಲ : ಭಾರೀ ಮಳೆಗೆ ಕಂಪೌಂಡ್ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಮಂಗಳೂರು : ಪಕ್ಕದ ಕಂಪೌಂಡ್ ಗೋಡೆ ಮನೆ ಮೇಲೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವಿಗೀಡಾದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಿಹಾನ ಮಂಝಿಲ್ ಮನೆಯ ಯಾಸಿರ್ (45), ಪತ್ನಿ ಮರಿಯಮ್ಮ(40), ಪುತ್ರಿಯರಾದ ರಿಹಾನಾ (11)ಮತ್ತು ರಿಫಾನ (17) ಮೃತರು ಎಂದು ಗೊತ್ತಾಗಿದೆ. … Continued

ಅಯೋಧ್ಯೆ ರಾಮ ಮಂದಿರದ ಬಳಿ ತಮ್ಮದೇ ಬಂದೂಕಿನ ಗುಂಡು ತಗುಲಿ ಭದ್ರತಾ ಸಿಬ್ಬಂದಿ ಸಾವು

ಅಯೋಧ್ಯೆ : ಇಲ್ಲಿನ ರಾಮ ಮಂದಿರದಲ್ಲಿ ನಿಯೋಜನೆಗೊಂಡಿದ್ದ 25 ವರ್ಷದ ಪೊಲೀಸ್ ಜವಾನ ತನ್ನ ಸ್ವಂತ ಬಂದೂಕಿನಿಂದ ಗುಂಡು ತಗುಲಿ ಮೃತಪಟ್ಟಿದ್ದಾರೆ. ಇದು ಆಕಸ್ಮಿಕವಾಗಿ ಗುಂಡು ಹಾರಿದ್ದೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಶತ್ರುಘ್ನ ವಿಶ್ವಕರ್ಮ ಅವರನ್ನು ವಿಶೇಷ ಭದ್ರತಾ ಪಡೆಯ (ಎಸ್‌ಎಸ್‌ಎಫ್) ಭಾಗವಾಗಿ ದೇವಾಲಯದ ಆವರಣದಲ್ಲಿ ಭದ್ರತೆಗಾಗಿ … Continued