ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ​ಮ್ಯಾನ್ ಸಾವು

ಬೆಳಗಾವಿ : ಚನ್ನಮ್ಮನ ಕಿತ್ತೂರಿನ ಕೆಇಬಿ ಆವರಣದಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕಂಬದ ಮೇಲೆಯೇ ಲೈನ್ ​ಮ್ಯಾನ್ ಮೃತಪಟ್ಟ ದಾರುಣ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಹುಲಿಕಟ್ಟಿ ಗ್ರಾಮದ ಪ್ರೇಮಾನಂದ ಎಮ್ಮಿ(25) ಎಂದು ಗುರುತಿಸಲಾಗಿದೆ. ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೆ ಕಂಬ ಹತ್ತಿಸಿದ್ದಕ್ಕೆ ಪ್ರೇಮಾನಂದ ಅವರ ಕುಟುಂಬಸ್ಥರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ … Continued

ಖ್ಯಾತ ನಟ- ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ ನಿಧನ

ಚೆನ್ನೈ: ಡಿಎಂಡಿಕೆ ಪಕ್ಷದ ಸಂಸ್ಥಾಪಕ ನಾಯಕ ಮತ್ತು ಜನಪ್ರಿಯ ತಮಿಳು ನಟ ವಿಜಯಕಾಂತ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಚೆನ್ನೈನಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಡಿಎಂಡಿಕೆ ಕಚೇರಿಗೆ ಕೊಂಡೊಯ್ಯಲಾಗುತ್ತದೆ. ವಿಜಯಕಾಂತ ಅವರು ವಿಜಯಕಾಂತ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ … Continued

ಬೆಂಗಳೂರು: ಆಟವಾಡುತ್ತಿದ್ದ ಮಗು ನೀರಿನ ಸಂಪ್‌ ಗೆ ಬಿದ್ದು ಸಾವು

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ಆಕಸ್ಮಾತ್‌ ಆಗಿ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟ ಘಟನೆ ನಗರದ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಗುವನ್ನು ಬಾಗಲಗುಂಟೆಯ ಬಾಗಲಗುಂಟೆಯ ಸೈಯದ್‌ ಹುಸೇನ್‌ ಪುತ್ರಿ ಸಾಯಿದಾ(5) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮನೆ ಎದುರು ಆಟವಾಡುತ್ತಿದ್ದಾಗ ಬಾಗಿಲು ತೆರೆದಿದ್ದ … Continued

ಕೋವಿಡ್‌-19: ದೇಶದಲ್ಲಿ ಸಕ್ರಿಯ ಪ್ರಕರಣಗಳು 2,311ಕ್ಕೆ ಏರಿಕೆ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 614 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಮೂರು ಸಾವುಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ. ಮೇ 21ರ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣ ವರದಿಯಾಗಿದೆ. ಕೇರಳದಲ್ಲಿ … Continued

ನಾಗ್ಪುರ ಕಾರ್ಖಾನೆಯಲ್ಲಿ ಸ್ಫೋಟ: 9 ಮಂದಿ ಸಾವು, ಹಲವರಿಗೆ ಗಾಯ

ನಾಗ್ಪುರ : ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಾಗ್ಪುರದ ಬಜಾರ್‌ಗಾಂವ್ ಪ್ರದೇಶದಲ್ಲಿ ಸೋಲಾರ್ ಇಂಡಸ್ಟ್ರೀಸ್‌ನ ಕಾಸ್ಟ್ ಬೂಸ್ಟರ್ ಘಟಕದಲ್ಲಿ ಬೆಳಿಗ್ಗೆ 9 ಗಂಟೆಗೆ ಸ್ಫೋಟ ಸಂಭವಿಸಿದೆ. ಸೋಲಾರ್ ಇಂಡಸ್ಟ್ರೀಸ್ ಕಾರ್ಖಾನೆಯ ಪ್ರವೇಶ ದ್ವಾರದಲ್ಲಿ ಹಲವಾರು ಆಂಬ್ಯುಲೆನ್ಸ್‌ಗಳನ್ನು … Continued

ಸಿಂಧನೂರು : ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ರಾಯಚೂರು : ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ. ಮೃತರನ್ನು ಇಸ್ಮಾಯಿಲ್(25), ಚನ್ನಬಸವ (26), ರವಿ(21) ಮತ್ತು ಅಂಬರೀಷ(20) ಎಂದು ಗುರುತಿಸಲಾಗಿದೆ. ಟಾಟಾ ಏಸ್ ವಾಹನದಲ್ಲಿ ಐದು ಮಂದಿ ಸಿಂಧನೂರಿನಿಂದ ಮಸ್ಕಿ ತಾಲೂಕಿನ … Continued

ಶಿರಸಿ: ಕಾಡುಬೆಕ್ಕು ಹಿಡಿಯಲು ವಿದ್ಯುತ್ ಕಂಬ ಏರಿದ ಚಿರತೆ, ವಿದ್ಯುತ್ ತಗುಲಿ ಎರಡೂ ಸಾವು

ಶಿರಸಿ: ಕಾಡು ಬೆಕ್ಕು ಹಿಡಿಯಲು ವಿದ್ಯುತ್‌ ಕಂಬ ಏರಿದ ಚಿರತೆಯೊಂದು ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ಸಮೀಪದ ಬೆಳಗಲ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಚಿರತೆ ಬೇಟೆಗೆಂದು ಅಟ್ಟಿಸಿಕೊಂಡು ಬಂದಾಗ ಜೀವ ಉಳಿಸಿಕೊಳ್ಳಲು ಕಾಡು ಬೆಕ್ಕು ವಿದ್ಯುತ್‌ ಕಂಬ ಏರಿ ಕುಳಿತಿತ್ತು. ತನ್ನ ಬೇಟೆ ಹಿಡಿಯುವ … Continued

ಗುಜರಾತಿನಲ್ಲಿ ಮಳೆಯ ಅಬ್ಬರ. ಸಿಡಿಲು ಬಡಿದು 20 ಮಂದಿ ಸಾವು

ಗಾಂಧಿನಗರ: ವಾರಾಂತ್ಯದಲ್ಲಿ ಗುಜರಾತಿನಾದ್ಯಂತ ಸಿಡಿಲು ಬಡಿದು ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ, ರಾಜ್ಯವು ಅಕಾಲಿಕ ಮಳೆಯಿಂದ ತತ್ತರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ)ದ ಪ್ರಕಾರ, ಗುಜರಾತ್‌ನ ವಿವಿಧ ಜಿಲ್ಲೆಗಳಿಂದ ಒಟ್ಟು 20 ಮಳೆ ಸಂಬಂಧಿತ ಸಾವುಗಳು ವರದಿಯಾಗಿವೆ. ಭಾನುವಾರ ರಾಜ್ಯದಲ್ಲಿ ಸುರಿದ ತೀವ್ರ ಅಕಾಲಿಕ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು … Continued

ಅಥಣಿ : ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ಚಿಕ್ಕಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಪಂಪ್ ಸೆಟ್ ಬಂದ್ ಮಾಡಲು ತೆರಳಿದ್ದ ತಂದೆ-ಮಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32 )ಮತ್ತು ಅವರ ಪುತ್ರ ಪ್ರೀತಂ ಮಲ್ಲಿಕಾರ್ಜುನ ಪೂಜಾರಿ (6) ಎಂದು ಗುರುತಿಸಲಾಗಿದೆ. ಪ್ರೀತಂ ಅಥಣಿಯ ಶಾರದಾ ಮಾತಾ ವಿದ್ಯಾಲಯದ ಒಂದನೇ ತರಗತಿ … Continued

ಮೂಡಿಗೆರೆ : ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆ ಸಿಬ್ಬಂದಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸಿಬ್ಬಂದಿಯೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಕಾರ್ತಿಕ್ ಗೌಡ (26) ಎಂದು ಗುರುತಿಸಲಾಗಿದ್ದು, ಇದಲ್ಲದೆ ಆನೆ ನಿಗ್ರಹ ಪಡೆಯ ಇಬ್ಬರು ಸಿಬ್ಬಂದಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳ ಹಾವಳಿ ನಿಯಂತ್ರಿಸಲು … Continued