ಸಾವರ್ಕರ್ ಮಾನನಷ್ಟ ಪ್ರಕರಣ : ಕೋರ್ಟಿಗೆ ಹಾಜರಾಗದೇ ಇದ್ದುದಕ್ಕೆ ರಾಹುಲ್ ಗಾಂಧಿಗೆ ದಂಡ

ಲಕ್ನೋ: ಸ್ವಾತಂತ್ರ್ಯ ಹೋರಾಟಗಾರ ವೀರ್‌ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗದೇ ಇದ್ದಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ಅವರಿಗೆ 200 ರೂಪಾಯಿಗಳ ದಂಢ ವಿಧಿಸಿದೆ. ಮತ್ತು ಆ ಮೊತ್ತವನ್ನು ದೂರುದಾರರ ವಕೀಲರಿಗೆ ಪಾವತಿಸುವುದಾಗಿ ಹೇಳಿದೆ ಹಾಗೂ ಮುಂದಿನ ವಿಚಾರಣೆಯನ್ನು ಏಪ್ರಿಲ್ 14ಕ್ಕೆ ನಿಗದಿಪಡಿಸಲಾಗಿದೆ. ಹೆಚ್ಚುವರಿ … Continued

ʼಒನ್ ಮಿನಿಟ್ ಅಪಾಲಜಿʼ ಪುಸ್ತಕವನ್ನು ಓದಿ ; ಡಿ.ರೂಪಾ, ರೋಹಿಣಿ ಸಿಂಧೂರಿಗೆ ನ್ಯಾಯಾಲಯ ಸಲಹೆ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ ಎಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಬುಧವಾರ ಅಭಿಪ್ರಾಯಪಟ್ಟಿದೆ. ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ … Continued

ಸಾವರ್ಕರ್ ಕುರಿತ ಮಾನಹಾನಿ ಹೇಳಿಕೆ ಪ್ರಕರಣ: : ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಸೂಚನೆ

ಪುಣೆ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಡಿಸೆಂಬರ್‌ 2ರಂದು ಖುದ್ದು ಹಾಜರಾಗುವಂತೆ ಪುಣೆ ನ್ಯಾಯಾಲಯ ಸೋಮವಾರ ಸಮನ್ಸ್‌ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಮೋಲ್ ಶಿಂಧೆ ಅವರು ಈ ಆದೇಶ … Continued

ಮಲಮಗಳ ವಿರುದ್ಧವೇ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ʼಅನುಪಮಾʼ ಖ್ಯಾತಿಯ ನಟಿ ರೂಪಾಲಿ ಗಂಗೂಲಿ…

ನವದೆಹಲಿ: ನಟಿ ರೂಪಾಲಿ ಗಂಗೂಲಿ ಅವರು ತಮ್ಮ ಮಲಮಗಳು ಇಶಾ ವರ್ಮಾ ಅವರಿಗೆ ಮಾನನಷ್ಟ ನೋಟಿಸ್ ಜಾರಿ ಮಾಡಿದ್ದು, ತಮ್ಮ ವೈಯಕ್ತಿಕ ಜೀವನಕ್ಕೆ ಮಾನ ಹಾನಿ ಮಾಡಿದ ಆರೋಪದ ಮೇಲೆ 50 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ. ಇಶಾ ನೀಡಿದ್ದು “ಸುಳ್ಳು ಮತ್ತು ಹಾನಿಕರ ಹೇಳಿಕೆಗಳು” ಎಂದು ನಟಿ ರೂಪಾಲಿ ಗಂಗೂಲಿ ಹೇಳಿದ್ದಾರೆ ಹಾಗೂ ಮಲಮಗಳು … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ದಾವೆ ದಾಖಲಿಸಲು ಕೋರಿ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ

ಬೆಂಗಳೂರು : ತಮ್ಮ ವಿರುದ್ಧ ಕೀಳು ಅಭಿರುಚಿಯ ಹೇಳಿಕೆಯನ್ನು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮನವಿ ಆಧರಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು … Continued

ಸಾವರ್ಕರ್ ಮಾನನಷ್ಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಕ್ಟೋಬರ್ 23 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. . ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ … Continued

ಸಮಂತಾ-ನಾಗ ಚೈತನ್ಯ ವಿಚ್ಛೇದನದ ಕುರಿತು ಕೀಳುಮಟ್ಟದ ಹೇಳಿಕೆ : ಸಚಿವೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟ ನಾಗಾರ್ಜುನ

ಹೈದರಾಬಾದ್‌ : ನಟರಾದ ನಾಗ ಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನದ ಕುರಿತು ತೆಲಂಗಾಣ ಸಚಿವೆ ಕೊಂಡ ಸುರೇಖಾ ಅವರ ಮಾನಹಾನಿಕರ ಹೇಳಿಕೆ ವಿರುದ್ಧ ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ನಾಗ ಚೈತನ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ದೂರಿನಲ್ಲಿ ನಾಗಾರ್ಜುನ ಅವರು ಕೊಂಡ ಸುರೇಖಾ ಅವರು ಅಕ್ಕಿನೇನಿ ಕುಟುಂಬದ ಸಾರ್ವಜನಿಕ … Continued

ಮಾನಹಾನಿ ಪ್ರಕರಣ : ಶಿವಸೇನೆ (ಯುಬಿಟಿ) ನಾಯಕ ಸಂಜಯ ರಾವತಗೆ ಜೈಲು ಶಿಕ್ಷೆ

ಮುಂಬೈ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್ ಅವರಿಗೆ ಮುಂಬೈ ನ್ಯಾಯಾಲಯವು ಗುರುವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಭಾರತೀಯ ದಂಡ ಸಂಹಿತೆ ಸೆಕ್ಷನ್ 500 (ಮಾನನಷ್ಟ ಶಿಕ್ಷೆ) ಅಡಿಯಲ್ಲಿ ರಾಜ್ಯಸಭಾ … Continued

ಪ್ರಧಾನಿ ಮೋದಿ ಬಗ್ಗೆ ಹೇಳಿಕೆ : ಕಾಂಗ್ರೆಸ್‌ ನಾಯಕ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ದೆಹಲಿ ಹೈಕೋರ್ಟ್ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆಯ ಮೊಕದ್ದಮೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ತರೂರ್ ಸಲ್ಲಿಸಿದ್ದ … Continued

ಮಾನಹಾನಿ ಪ್ರಕರಣ : ಕೇಂದ್ರ ಸಚಿವರ ಪತ್ನಿಗೆ ₹50 ಲಕ್ಷ ಪರಿಹಾರ ನೀಡಲು ಟಿಎಂಸಿ ಸಂಸದ ಗೋಖಲೆಗೆ ಸೂಚಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಕೇಂದ್ರ ಸಚಿವರೊಬ್ಬರ ಪತ್ನಿ ಹಾಗೂ ನಿವೃತ್ತ ರಾಜತಾಂತ್ರಿಕ ಅಧಿಕಾರಿಯಾಗಿರುವ ಲಕ್ಷ್ಮೀ ಪುರಿ ಅವರು ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರಿಗೆ ₹ 50 ಲಕ್ಷ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಅಲ್ಲದೆ, ಅವರ ಬಳಿ ಕ್ಷಮೆಯಾಚನೆ ಮಾಡಿ … Continued