ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ದಾವೆ ದಾಖಲಿಸಲು ಕೋರಿ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ

ಬೆಂಗಳೂರು : ತಮ್ಮ ವಿರುದ್ಧ ಕೀಳು ಅಭಿರುಚಿಯ ಹೇಳಿಕೆಯನ್ನು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮನವಿ ಆಧರಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು … Continued

ಸಾವರ್ಕರ್ ಮಾನನಷ್ಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಕ್ಟೋಬರ್ 23 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. . ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ … Continued

ಸಮಂತಾ-ನಾಗ ಚೈತನ್ಯ ವಿಚ್ಛೇದನದ ಕುರಿತು ಕೀಳುಮಟ್ಟದ ಹೇಳಿಕೆ : ಸಚಿವೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟ ನಾಗಾರ್ಜುನ

ಹೈದರಾಬಾದ್‌ : ನಟರಾದ ನಾಗ ಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನದ ಕುರಿತು ತೆಲಂಗಾಣ ಸಚಿವೆ ಕೊಂಡ ಸುರೇಖಾ ಅವರ ಮಾನಹಾನಿಕರ ಹೇಳಿಕೆ ವಿರುದ್ಧ ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ನಾಗ ಚೈತನ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ದೂರಿನಲ್ಲಿ ನಾಗಾರ್ಜುನ ಅವರು ಕೊಂಡ ಸುರೇಖಾ ಅವರು ಅಕ್ಕಿನೇನಿ ಕುಟುಂಬದ ಸಾರ್ವಜನಿಕ … Continued

ಮಾನಹಾನಿ ಪ್ರಕರಣ : ಶಿವಸೇನೆ (ಯುಬಿಟಿ) ನಾಯಕ ಸಂಜಯ ರಾವತಗೆ ಜೈಲು ಶಿಕ್ಷೆ

ಮುಂಬೈ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್ ಅವರಿಗೆ ಮುಂಬೈ ನ್ಯಾಯಾಲಯವು ಗುರುವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಭಾರತೀಯ ದಂಡ ಸಂಹಿತೆ ಸೆಕ್ಷನ್ 500 (ಮಾನನಷ್ಟ ಶಿಕ್ಷೆ) ಅಡಿಯಲ್ಲಿ ರಾಜ್ಯಸಭಾ … Continued

ಪ್ರಧಾನಿ ಮೋದಿ ಬಗ್ಗೆ ಹೇಳಿಕೆ : ಕಾಂಗ್ರೆಸ್‌ ನಾಯಕ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ದೆಹಲಿ ಹೈಕೋರ್ಟ್ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆಯ ಮೊಕದ್ದಮೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ತರೂರ್ ಸಲ್ಲಿಸಿದ್ದ … Continued

ಮಾನಹಾನಿ ಪ್ರಕರಣ : ಕೇಂದ್ರ ಸಚಿವರ ಪತ್ನಿಗೆ ₹50 ಲಕ್ಷ ಪರಿಹಾರ ನೀಡಲು ಟಿಎಂಸಿ ಸಂಸದ ಗೋಖಲೆಗೆ ಸೂಚಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಕೇಂದ್ರ ಸಚಿವರೊಬ್ಬರ ಪತ್ನಿ ಹಾಗೂ ನಿವೃತ್ತ ರಾಜತಾಂತ್ರಿಕ ಅಧಿಕಾರಿಯಾಗಿರುವ ಲಕ್ಷ್ಮೀ ಪುರಿ ಅವರು ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರಿಗೆ ₹ 50 ಲಕ್ಷ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಅಲ್ಲದೆ, ಅವರ ಬಳಿ ಕ್ಷಮೆಯಾಚನೆ ಮಾಡಿ … Continued

ನರ್ಮದಾ ಬಚಾವೊ ಹೋರಾಟಗಾರ್ತಿ ಮೇಧಾ ಪಾಟ್ಕರಗೆ 5 ತಿಂಗಳು ಜೈಲು ಶಿಕ್ಷೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2001ರಲ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಕೆವಿಐಸಿಯ ಮುಖ್ಯಸ್ಥರಾಗಿದ್ದ ವಿ.ಕೆ. ಸಕ್ಸೇನಾ (ಈಗ ದೆಹಲಿಯ ಲೆಫ್ಟನೆಂಟ್ ಗವರ್ನರ್) ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಕ್ಸೇನಾ ಅವರ … Continued

ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ

ನವದೆಹಲಿ: ರಾಜಭವನದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಂದಾಗಿ ರಾಜಭವನಕ್ಕೆ ಹೋಗಲು ಭಯವಾಗುತ್ತಿದೆ ಎಂದು ಮಹಿಳೆಯರು ತಮ್ಮ ಮುಂದೆ ದೂರು ನೀಡಿದ್ದಾರೆ ಎಂದು ಹೇಳಿದ ಒಂದು ದಿನದ ಬಳಿಕ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ರೀತಿಯ ಹೇಳಿಕೆಗಳಿಗಾಗಿ … Continued

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ … Continued

ವಿ.ಕೆ. ಸಕ್ಸೇನಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ : ಮೇಧಾ ಪಾಟ್ಕರ ದೋಷಿ ಎಂದು ಕೋರ್ಟ್‌ ತೀರ್ಪು

ನವದೆಹಲಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಎಲ್‌ಜಿ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ಶುಕ್ರವಾರ ತೀರ್ಪು ನೀಡಿದೆ. 23 ವರ್ಷಗಳ ಹಿಂದೆ ದಾಖಲಾದ ಪ್ರಕರಣವೊಂದರಲ್ಲಿ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ ಶರ್ಮಾ ಅವರು ಪಾಟ್ಕರ್ ಅವರ ಹೇಳಿಕೆಗಳನ್ನು … Continued