ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ : ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪರ್ವೇಶ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಬ್ಬರೂ ನಾಯಕರ ಹೆಸರನ್ನು ಘೋಷಿಸಲಾಯಿತು.ಪ್ರಸ್ತುತ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಪೈಕಿ ರೇಖಾ ಗುಪ್ತಾ ಅವರು ಏಕೈಕ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ … Continued

ಉಗ್ರ ಅಫ್ಜಲ್ ಗುರು ಪರ ನಿಂತ ಕುಟುಂಬದ ಅತಿಶಿಗೆ ದೆಹಲಿ ಸಿಎಂ ಪಟ್ಟ ; ಮಲಿವಾಲ್ ಆರೋಪ : ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದ ಎಎಪಿ

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ​ ಕೇಜ್ರಿವಾಲ್​ ಮುಖ್ಯಮಂತ್ರಿ ಕುರ್ಚಿಯನ್ನು ಆಪ್​ ನಾಯಕಿ ಅತಿಶಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ (43) ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರವಿಂದ ಕೇಜ್ರಿವಾಲ್ ಅವರ ದೆಹಲಿ ನಿವಾಸದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನೂತನ … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued

ಅರವಿಂದ ಕೇಜ್ರಿವಾಲ್‌ ಬದಲಿಗೆ ಯಾರಾಗ್ತಾರೆ ದೆಹಲಿ ಸಿಎಂ…?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನದಲ್ಲಿ ರಾಜೀನಾಮೆ ನೀಡುವುದಾಗಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದು, ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಜನರ ತೀರ್ಪಿನ ನಂತರವೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ. ಈಗ ಆಮ್ ಆದ್ಮಿ ಪಕ್ಷದಲ್ಲಿ (ಎಎಪಿ) ಮುಖ್ಯಮಂತ್ರಿ ಹುದ್ದೆ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಭಾನುವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ. ಮೇ 13ರಂದು ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವಕುಮಾರ ಅವರು ದೆಹಲಿ ಸಿಎಂ ನಿವಾಸದಲ್ಲಿ ಮಲಿವಾಲ್ ಮೇಲೆ … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ: ಈವರೆಗೆ ಜೈಲಿಗೆ ಹೋಗಿದ್ದ ಮಾಜಿ ಸಿಎಂಗಳ ಪಟ್ಟಿ ಇಲ್ಲಿದೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಗುರುವಾರ ರಾತ್ರಿ ಬಂಧಿಸಿದೆ. 2024 ರ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅವರ ಬಂಧನವನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್ ಸೇರಿದಂತೆ ವಿರೋಧ ಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನು ಜಾರಿ ಸಂಸ್ಥೆಯಿಂದ … Continued

ಇ.ಡಿ.ಸಮನ್ಸ್‌ಗೆ ಡೋಂಟ್‌ ಕೇರ್‌ : ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಪದೇಪದೇ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ. ತಾನು 8 ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು … Continued

ಪ್ರತಿಭಟನಾನಿರತ ರೈತ ಮುಖಂಡರನ್ನು ಭೇಟಿ ಮಾಡಲಿರುವ ದೆಹಲಿ ಸಿಎಂ ಕೇಜ್ರಿವಾಲ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಆಂದೋಲನದ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ದೆಹಲಿ ವಿಧಾನಸಭೆ ಸಭಾಂಗಣದಲ್ಲಿ ಭಾನುವಾರ ಕೇಜ್ರಿವಾಲ್‌, ಹೋರಾಟ ನಿರತ ರೈತರನ್ನು ಭೇಟಿ ಮಾಡಿ ಕೃಷಿ ಕಾನೂನುಗಳು ಹಾಗೂ ರೈತರ ಕಾಳಜಿ ಕುರಿತು ಚರ್ಚಿಸಲಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ, ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ, ಸಿಎಂ ಕೇಜ್ರಿವಾಲ್ … Continued