ಅರವಿಂದ ಕೇಜ್ರಿವಾಲ್, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ
ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued