ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹೂಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಇದೇ ವೇಳೆ, ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ್ದರೂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ್ದು ಸಿಂಧುವೇ ಆಗಿದೆ. ಅದು ಸಂಬಂಧಿತ ಕಾರ್ಯವಿಧಾನದ ಕಾನೂನುಗಳ ಅನುಸಾರವಾಗಿಯೇ ಇದೆ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ ಎಸ್‌ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ (ಇ.ಡಿ.) ಮತ್ತು ಸಿಬಿಐ ದಾಖಲಿಸಿದ್ದ ಎರಡೂ ಪ್ರಕರಣಗಳಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ತನಿಖೆ ಪೂರ್ಣಗೊಂಡಿದ್ದು ವಿಚಾರಣೆ ಪೂರ್ಣಗೊಳ್ಳಲು ಸಾಕಷ್ಟು ಸಮಯ ಹಿಡಿಯುವುದರಿಂದ ಈ ಆದೇಶ ನೀಡುತ್ತಿರುವುದಾಗಿ ನ್ಯಾಯಮೂರ್ತಿಗಳಾದ ಬಿ.ಆರ್. … Continued

ಮಧ್ಯಂತರ ಜಾಮೀನು ಸಿಕ್ಕರೂ ಕೇಜ್ರಿವಾಲ್‌ ದೆಹಲಿ ಸಿಎಂ ಕಚೇರಿಗೆ ಹೋಗುವಂತಿಲ್ಲ…

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಶುಕ್ರವಾರ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ, ಮಧ್ಯಂತರ ಜಾಮೀನು ನೀಡುವಾಗ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್‌ ಸೂಚಿಸಿದೆ. ಮಧ್ಯಂತರ ಜಾಮೀನು … Continued