ಮಹಿಳೆಯ ಮಾರ್ಫ್‌ ಫೋಟೊ ವಿವಾದ: ಡಿಲೀಟ್‌ ಮಾಡಲು ಮೆಟಾಗೆ ದೆಹಲಿ ಹೈಕೋರ್ಟ್‌ ಆದೇಶ, ಸಿಜೆಪಿ ನಾಯಕರಿಗೆ ನೋಟಿಸ್‌

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಈ ವರ್ಷ ನಡೆದ ಪ್ರತಿಭಟನೆಗಳ ವೇಳೆ ತನ್ನ ಅನುಮತಿಯಿಲ್ಲದೆ ಫೋಟೊವನ್ನು ಮಾರ್ಫ್‌ ಮಾಡಿ ಪ್ರಸಾರ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೊಂಡಿರುವ ದೆಹಲಿ ಹೈಕೋರ್ಟ್‌, ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ ದಾಸ್‌, ಅಭಿಜಿತ್‌ ದಿಪ್ಕೆ, ಆಶುತೋಷ್‌ ರಾಂಕಾ ಹಾಗೂ ರತ್ನಾ ಸಿಂಗ್‌ ಅವರಿಗೆ ಶುಕ್ರವಾರ ನೋಟಿಸ್‌ … Continued

ಮೋದಿ ಜತೆ ಮಹಿಳೆಯ ಮಾರ್ಫ್‌ ಫೋಟೊ ವಿವಾದ; ಸಿಜೆಪಿ ನಾಯಕರ ವಿರುದ್ಧದ ಅರ್ಜಿ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್‌ ಒಪ್ಪಿಗೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ತಾನು ಪ್ರಧಾನಿ ನರೇಂದ್ರ ಮೋದಿ ಅವರಜೊತೆ ಇರುವಂತೆ ತೋರಿಸುವ ಡೀಪ್‌ಫೇಕ್‌ ಚಿತ್ರವನ್ನು ಪೋಸ್ಟ್‌ ಮಾಡಿ ವ್ಯಾಪಕವಾಗಿ ಹರಡಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ತುರ್ತು ವಿಚಾರಣೆಗೆ ಸ್ವೀಕರಿಸಿದೆ. ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್‌ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು … Continued

ಸೋನಂ ವಾಂಗ್ಚುಕ್ ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ ; ಕೇಂದ್ರ–ದೆಹಲಿ ಸರ್ಕಾರಗಳಿಗೆ ದೆಹಲಿ ಹೈಕೋರ್ಟ್‌ ನಿರ್ದೇಶನ

ನವದೆಹಲಿ: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹಾಗೂ ವೈದ್ಯಕೀಯ ಸ್ಥಿತಿಯನ್ನು ಪ್ರತಿದಿನ ಸರ್ಕಾರಿ ವೈದ್ಯರು ಪರಿಶೀಲಿಸಬೇಕು ಮತ್ತು ಅವರ ಜೀವ ರಕ್ಷಿಸಲು ಅಗತ್ಯವಿರುವ ಎಲ್ಲ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರಕುಮಾರ ಉಪಾಧ್ಯಾಯ … Continued

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್‌ ನಟ ರಾಜಪಾಲ್ ಯಾದವ್‌ಗೆ ಮೂರು ತಿಂಗಳ ಜೈಲು ಶಿಕ್ಷೆ

ನವದೆಹಲಿ: ಬಾಲಿವುಡ್‌ ನಟ ರಾಜಪಾಲ ಯಾದವ್ ಅವರ  ₹9 ಕೋಟಿ ಸಾಲಕ್ಕೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣಗಳಲ್ಲಿದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಏಳು ಪ್ರತ್ಯೇಕ ಪ್ರಕರಣಗಳಲ್ಲೂ ತಲಾ ಮೂರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರು ಈ ಆದೇಶವನ್ನು ಪ್ರಕಟಿಸಿದ್ದು, ಪ್ರತಿಯೊಂದು ಪ್ರಕರಣದಲ್ಲೂ ದೂರುದಾರರಿಗೆ ₹1.05 ಕೋಟಿ … Continued

ನೀಟ್ 2026 ಮರುಪರೀಕ್ಷೆ ; ಟೆಲಿಗ್ರಾಂ ತಾತ್ಕಾಲಿಕ ನಿರ್ಬಂಧ : ಕೇಂದ್ರದ ನಿರ್ಧಾರ ಎತ್ತಿ ಹಿಡಿದ ದೆಹಲಿ ಹೈಕೋರ್ಟ್

ನವದೆಹಲಿ : 2026ರ ನೀಟ್ (NEET-UG) ಮರುಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ತಪ್ಪುಮಾಹಿತಿ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೆಜಿಂಗ್‌ ಪ್ಲಾಟ್‌ಫಾರ್ಮ್‌ (messaging platform) ಜೂನ್ 22ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕ್ರಮವನ್ನುಪ್ರಶ್ನಿಸಿ ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರು ತೀರ್ಪು ಪ್ರಕಟಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ … Continued

ಅರವಿಂದ ಕೇಜ್ರಿವಾಲ್, ಇತರ ಎಎಪಿ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಅಭಿಯಾನ ನಡೆಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (AAP) ನಾಯಕರುಗಳಾದ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರರ ವಿರುದ್ಧ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಗುರುವಾರ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಎಂದು … Continued

ನ್ಯಾಯವು ಒತ್ತಡಕ್ಕೆ ಮಣಿಯದು : ದೆಹಲಿ ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲ್ಲ ಎಂದ ಹೈಕೋರ್ಟ್ ನ್ಯಾಯಮೂರ್ತಿ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಸೋಮವಾರ ತಿರಸ್ಕರಿಸಿದರು. ಕೇಜ್ರಿವಾಲ್ ಅವರ ಆರೋಪವನ್ನು ತಳ್ಳಿಹಾಕಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರು, ಈ ಪ್ರಕರಣದ ವಿಚಾರಣೆಯಿಂದ … Continued

ಉನ್ನಾವ್ ಅತ್ಯಾಚಾರ ಪ್ರಕರಣ: ಮಾಜಿ ಶಾಸಕ ಸೆಂಗರ್ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕರಾದ ಕುಲದೀಪ ಸಿಂಗ್ ಸೆಂಗರಗೆ ಜಾಮೀನು ನೀಡಿದ ಹಾಗೂ ಆತನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಜಾರಿಯಾಗದಂತೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ. ನ್ಯಾಯಪೀಠವು ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ನೋಟಿಸ್ ಜಾರಿ ಮಾಡಿ, … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ ; ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ದೂರನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಜಾರಿ ನಿರ್ದೇಶನಾಲಯ (ED) ಈಗ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಈ ಅರ್ಜಿಯು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಲೈವ್‌ … Continued

ಪ್ರಧಾನಿ ಮೋದಿ ಪದವಿ ಪ್ರಮಾಣ ಪತ್ರ ; ಸಿಐಸಿ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಬೇಕೆಂಬ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಪ್ರಧಾನಿ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿ ಒದಗಿಸುವಂತೆ ವಿಶ್ವವಿದ್ಯಾಲಯಕ್ಕೆ ಸಿಐಸಿ 2017ರಲ್ಲಿ ನೀಡಿದ್ದ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಸಚಿನ್ ದತ್ತ ಪುರಸ್ಕರಿಸಿದರು. … Continued