ನಿಗಮ-ಮಂಡಳಿ ನೇಮಕ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ : ಡಿಸಿಎಂ ಶಿವಕುಮಾರ

ಬೆಂಗಳೂರು: ನಿಗಮ-ಮಂಡಳಿ ಅಧ್ಯಕ್ಷರ ನೇಮಕಕ್ಕೆ ಅಂತಿಮಗೊಳಿಸಿ ಕಳುಹಿಸಿರುವ ಪಟ್ಟಿಗೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ ಸೋಮವಾರ ದೆಹಲಿಗೆ ತೆರಳುತ್ತಿದ್ದಾರೆ. ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮಗೊಳಿಸಿಕೊಂಡು ಬರುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ದೆಹಲಿಗೆ ಹೋಗುವ ಮುನ್ನ ಸೋಮವಾರ ಸದಾಶಿವನಗರ ನಿವಾಸದ … Continued

ಹೈಕಮಾಂಡ್‌ ಬುಲಾವ್‌: ಡಿಸಿಎಂ ಡಿಕೆ ಶಿವಕುಮಾರ ದಿಢೀರ್‌ ದೆಹಲಿಗೆ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಇಂದು ಮಂಗಳವಾರ ದೆಹಲಿಗೆ ಹೊರಟಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ರಾಜ್ಯ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಅವರಿಗೆ ಪಕ್ಷ ಹೈಕಮಾಂಡ್‌ ಬುಲಾವ್‌ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಅವರು ಎಐಸಿಸಿ ಅಧ್ಯಕ್ಷ … Continued

ನಾಳೆಯಿಂದ ಸಿಎಂ ಬೊಮ್ಮಾಯಿ-ಯಡಿಯೂರಪ್ಪ ಎರಡು ದಿನಗಳ ದೆಹಲಿ ಪ್ರವಾಸ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಾಳೆ ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಉಭಯ ನಾಯಕರ ಭೇಟಿ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ಸೋಮವಾರ ಹಾಗೂ ಮಂಗಳವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿಯಿಂದ ಹಾಗೂ ಯಡಿಯೂರಪ್ಪ ಬೆಂಗಳೂರಿನಿಂದ … Continued

ಸಿದ್ದರಾಮಯ್ಯ ದೆಹಲಿ ದೌಡ್:‌ ನಾಳೆ ರಾಹುಲ್‌ ಗಾಂಧಿ ಭೇಟಿ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ದಿಢೀರ್‌ ಆಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿರುವುದು ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ರಾಹುಲ್ ಗಾಂಧಿ … Continued

ಡಿಸಿಎಂ ದಿಢೀರ್‌ ದೆಹಲಿ ಭೇಟಿ ತಂದ ಕುತೂಹಲ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ದಿಢೀರನೆ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ವರಿಷ್ಠರ ಸೂಚನೆಯಂತೆ ಶನಿವಾರ ಬೆಳಗ್ಗೆ ನವದೆಹಲಿಗೆ ತೆರಳಿರುವ ಅವರು ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲೇ ಉಳಿಯಲಿದ್ದು, ಪಕ್ಷದ ಕೆಲವು ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಯಾವ ಕಾರಣಕ್ಕಾಗಿ ಅವರು ದೆಹಲಿಗೆ ತೆರಳಿದ್ದಾರೆ ಎಂಬುದು ಖಚಿತಪಟ್ಟಿಲ್ಲ. … Continued