ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ವೀಡಿಯೊ..| ತಂದೆಯನ್ನು ಬದಲಾಯಿಸಿದ್ದಾರೆ ಎಂಬ ಬಿಜೆಪಿ ನಾಯಕನ ಹೇಳಿಕೆಗೆ ಉತ್ತರ ನೀಡುವಾಗ ಕಣ್ಣೀರು ಹಾಕಿದ ದೆಹಲಿ ಸಿಎಂ ಅತಿಶಿ

ನವದೆಹಲಿ: ಬಿಜೆಪಿ ನಾಯಕ ರಮೇಶ ಬಿಧುರಿ ಅವರು ಭಾನುವಾರ ಅತಿಶಿ ತಮ್ಮ ತಂದೆಯನ್ನು ಬದಲಾಯಿಸಿದ್ದಾರೆ ಎಂದು ವೈಯಕ್ತಿಕವಾಗಿ ವಾಗ್ದಾಳಿ ನಡೆಸಿದ ನಂತರ ದೆಹಲಿ ಮುಖ್ಯಮಂತ್ರಿ ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಕಣ್ಣೀರಾದರು. ರಮೇಶ ಬಿಧುರಿ ತಮ್ಮ ಉಪನಾಮದ (ಅಡ್ಡ ಹೆಸರು) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅತಿಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಕಾಜಿ ವಿಧಾನಸಭಾ ಕ್ಷೇತ್ರದ … Continued

ವೀಡಿಯೊ..| ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಪಂಚಭೂತಗಳಲ್ಲಿ ಲೀನ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಇಂದು, ಶನಿವಾರ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್‌ಬೋಧ್‌ಘಾಟ್‌ನಲ್ಲಿ ಸಿಖ್‌ ಸಂಪ್ರದಾಯ ಪ್ರಕಾರ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ ಧನಕರ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ … Continued

ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಡಿಸೆಂಬರ್ 28ರಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಬೆಳಿಗ್ಗೆ 11:45 ಕ್ಕೆ ದೆಹಲಿಯ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ. ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಗುರುವಾರ 92 ನೇ ವಯಸ್ಸಿನಲ್ಲಿ ಏಮ್ಸ್‌ನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿಯವರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. “ಡಾ. ಮನಮೋಹನ್ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್ ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 92 ವರ್ಷದ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ಘಟಕಕ್ಕೆ ದಾಖಲಿಸಲಾಯಿತು ಎಂದು ಹೇಳಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ … Continued

ವೀಡಿಯೊ | ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಜನರು

ನವದೆಹಲಿ: ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ರಾಜೌರಿ ಗಾರ್ಡನ್‌ನಲ್ಲಿರುವ ಜಂಗಲ್ ಜಾಂಬೋರಿ ರೆಸ್ಟೋರೆಂಟ್‌ನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಭಯಭೀತರಾದ ಜನರು ಹತ್ತಿರದ ಕಟ್ಟಡದ ಛಾವಣಿಗೆ ಹಾರಿ ಬಚಾವ್‌ ಆಗಿದ್ದಾರೆ. ಗಾಯವಾದ ವ್ಯಕ್ತಿಯೊಬ್ಬನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ;$30,000 ಹಣಕ್ಕೆ ಬೇಡಿಕೆ

ನವದೆಹಲಿ : ಇಮೇಲ್‌ ಮೂಲಕ ದೆಹಲಿಯ ಸುಮಾರು 40 ಶಾಲೆಗಳಿಗೆ ಸೋಮವಾರ (ಡಿ. 9)ರ ಬೆಳಗ್ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ʼʼಪಶ್ಚಿಮ ವಿಹಾರದ ಜಿಕೆ ಗೋಯೆಂಕಾ ಮತ್ತು ಡಿಪಿಎಸ್‌ ಆರ್‌ಕೆ ಪುರಂ ಶಾಲೆ ಸೇರಿದಂತೆ 40 ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ … Continued

ವೀಡಿಯೊ…| ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ದ್ರವ ಎರಚಿದ ವ್ಯಕ್ತಿ…!

ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ ಪ್ರದೇಶದಲ್ಲಿ ಶನಿವಾರ ಹೈ ಡ್ರಾಮಾ ನಡೆದಿದ್ದು, ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ದ್ರವ ಎಸೆದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಕೇಜ್ರಿವಾಲ್‌ ಅವರನ್ನು ಹಿಡಿಯಲು ಪ್ರಯತ್ನಿಸುತ್ತಿರುವುದನ್ನು ತೋರಿಸಿದೆ. ಕೇಜ್ರಿವಾಲ್ ಅವರ ಮೇಲೆ ದ್ರವವನ್ನು ಎಸೆದ … Continued

ಇನ್‌ಸ್ಟಾಗ್ರಾಂ ಪ್ರಿಯತಮನ ಜೊತೆ ಮದುವೆಗೆ ಅಡ್ಡಿ: ಮಗುವನ್ನೇ ಕತ್ತು ಹಿಸುಕಿ ಸಾಯಿಸಿದ ತಾಯಿ…!

ನವದೆಹಲಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು ಮಹಿಳೆಯೊಬ್ಬಳು ತನ್ನ ಐದು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಆಸ್ಪತ್ರೆಗೆ ಮಗುವನ್ನು ಕರೆತರುವಷ್ಟರಲ್ಲಿಯೇ ಅದು ಮೃತಪಟ್ಟಿರುವ ಬಗ್ಗೆ ದೀಪಚಂದ್ ಬಂಧು ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದ ನಂತರ ಈ ಪ್ರಕಣ ಬೆಳಕಿಗೆ ಬಂದಿದೆ. ಮಗುವಿನ ಕುತ್ತಿಗೆ … Continued

ಆಮ್‌ ಆದ್ಮಿ ಪಕ್ಷಕ್ಕೆ ಆಘಾತ ; ದೆಹಲಿ ಸಚಿವ ಸ್ಥಾನಕ್ಕೆ, ಎಎಪಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕೈಲಾಶ ಗೆಹ್ಲೋಟ್‌

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಬೆಳವಣಿಗೆಯಲ್ಲಿ ಹಿರಿಯ ನಾಯಕ ಹಾಗೂ ದೆಹಲಿಯ ಸರ್ಕಾರದಲ್ಲಿ ಸಚಿವರಾಗಿದ್ದ ಕೈಲಾಶ ಗಹ್ಲೋಟ್ ಅವರು ಭಾನುವಾರ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ್ದಾರೆ. “ಮುಜುಗರದ ಮತ್ತು ವಿಚಿತ್ರವಾದ ವಿವಾದಗಳು” ಮತ್ತು ನಾಗರಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅರವಿಂದ ಕೇಜ್ರಿವಾಲ್ ಮತ್ತು ಅತಿಶಿ ಸರ್ಕಾರದ … Continued